Asia cup 2023: ಶ್ರೀಲಂಕಾ vs ಪಾಕಿಸ್ತಾನ್: ಟೀಮ್ ಇಂಡಿಯಾದ ಎದುರಾಳಿ ಯಾರು?

Asia cup 2023 Final: ಏಷ್ಯಾಕಪ್ ನಿಯಮದ ಪ್ರಕಾರ ಸೂಪರ್-4 ಹಂತದ ಪಾಯಿಂಟ್ಸ್​ ಟೇಬಲ್​ನಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆದ ತಂಡಗಳು ಫೈನಲ್ ಆಡಲಿವೆ. ಅದರಂತೆ ಪಾಕಿಸ್ತಾನ್ ಮತ್ತು ಶ್ರೀಲಂಕಾ ನಡುವಣ ಪಂದ್ಯ ಮಳೆಯಿಂದಾಗಿ ರದ್ದಾದರೆ ಲಂಕಾ ತಂಡವು ಫೈನಲ್​ಗೆ ಎಂಟ್ರಿ ಕೊಡಲಿದೆ.

Asia cup 2023: ಶ್ರೀಲಂಕಾ vs ಪಾಕಿಸ್ತಾನ್: ಟೀಮ್ ಇಂಡಿಯಾದ ಎದುರಾಳಿ ಯಾರು?
Asia cup 2023 Final
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 13, 2023 | 4:00 PM

ಏಷ್ಯಾಕಪ್ 2023 ಅಂತಿಮ ಹಂತಕ್ಕೆ ಬಂದು ನಿಂತಿದೆ. ಸೂಪರ್-4 ಹಂತದಲ್ಲಿ ಆಡಿದ 2 ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಫೈನಲ್​ಗೆ ಲಗ್ಗೆಯಿಟ್ಟಿದೆ. ಇನ್ನು ಉಳಿದಿರುವ ಪ್ರಶ್ನೆ ಭಾರತ ತಂಡದ ಎದುರಾಳಿ ಯಾರು ಎಂಬುದು. ಇಲ್ಲಿ ಮುಂದಿನ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿದೆ. ಇದರಲ್ಲಿ ಗೆದ್ದ ತಂಡವು ಫೈನಲ್​ಗೆ ಪ್ರವೇಶಿಸಿಸುವುದು ಖಚಿತ.

  • ಏಕೆಂದರೆ ಸೂಪರ್ ಫೋರ್ ಹಂತದ ಮೊದಲೆರಡು ಪಂದ್ಯಗಳಲ್ಲಿ ಜಯ ಸಾಧಿಸಿರುವ ಟೀಮ್ ಇಂಡಿಯಾ (ನೆಟ್ ರನ್ ರೇಟ್ +2.690) ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
  • ಇನ್ನು 2 ಪಂದ್ಯಗಳಲ್ಲಿ ಒಂದರಲ್ಲಿ ಗೆದ್ದಿರುವ ಶ್ರೀಲಂಕಾ ತಂಡ -0.200 ನೆಟ್ ರನ್​ ರೇಟ್​ನೊಂದಿಗೆ ದ್ವಿತೀಯ ಸ್ಥಾನದಲ್ಲಿದೆ.
  • ಹಾಗೆಯೇ 2 ಮ್ಯಾಚ್​ಗಳಲ್ಲಿ 1 ಜಯ ಸಾಧಿಸಿರುವ ಪಾಕಿಸ್ತಾನ್ -1.892 ನೆಟ್ ರನ್​ ರೇಟ್​ನೊಂದಿಗೆ ಮೂರನೇ ಸ್ಥಾನದಲ್ಲಿದೆ.
  • ಇನ್ನು 2 ಪಂದ್ಯಗಳಲ್ಲೂ ಸೋತಿರುವ ಬಾಂಗ್ಲಾದೇಶ್ ತಂಡವು ಈಗಾಗಲೇ ಫೈನಲ್ ರೇಸ್​ನಿಂದ ಹೊರಬಿದ್ದಿದೆ.

ಇಲ್ಲಿ ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ಬಾಂಗ್ಲಾದೇಶ್ ವಿರುದ್ಧ ಆಡಲಿದ್ದು, ಇದರಲ್ಲಿ ಗೆದ್ದರೂ ಶಕೀಬ್ ಅಲ್ ಹಸನ್ ಪಡೆಗೆ ಫೈನಲ್ ಪ್ರವೇಶಿಸಲು ಸಾಧ್ಯವಾಗುವುದಿಲ್ಲ.

ಇತ್ತ ಶ್ರೀಲಂಕಾ ಹಾಗೂ ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಗೆದ್ದವರಿಗೆ ಫೈನಲ್​ ಆಡುವ ಅವಕಾಶ ದೊರೆಯಲಿದೆ. ಹೀಗಾಗಿಯೇ ಶ್ರೀಲಂಕಾ ಹಾಗೂ ಪಾಕಿಸ್ತಾನ್ ಪಂದ್ಯವು ಸೆಮಿ ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ.

ಅಂದರೆ ಮುಂದಿನ ಪಂದ್ಯದಲ್ಲಿ ಪಾಕಿಸ್ತಾನ್ ಗೆದ್ದರೆ ಭಾರತ ಮತ್ತು ಪಾಕ್ ನಡುವೆ ಫೈನಲ್ ಪಂದ್ಯ ನಡೆಯಲಿದೆ. ಒಂದು ವೇಳೆ ಶ್ರೀಲಂಕಾ ಜಯಿಸಿದರೆ ಟೀಮ್ ಇಂಡಿಯಾ ಎದುರಾಳಿ ಲಂಕಾ ಪಡೆ.

ಮಳೆ ಬಂದರೆ ಯಾರು ಫೈನಲ್​ಗೆ?

ಒಂದು ವೇಳೆ ಶ್ರೀಲಂಕಾ ಹಾಗೂ ಪಾಕಿಸ್ತಾನ್ ನಡುವಣ ಪಂದ್ಯವು ಮಳೆಯ ಕಾರಣ ರದ್ದಾದರೆ ಯಾರು ಫೈನಲ್​ಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಇಲ್ಲಿ ಪಂದ್ಯ ರದ್ದಾದರೆ ಉಭಯ ತಂಡಗಳು ಒಂದೊಂದು ಅಂಕಗಳನ್ನು ಹಂಚಿಕೊಳ್ಳಲಿದೆ. ಇದರಿಂದ ಪಾಯಿಂಟ್ಸ್​ ಟೇಬಲ್​ನಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಅಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಶ್ರೀಲಂಕಾ ತಂಡವೇ ಫೈನಲ್​ಗೆ ಅರ್ಹತೆ ಪಡೆಯಲಿದೆ.

ಇದನ್ನೂ ಓದಿ:  ಕಿಂಗ್ ಕೊಹ್ಲಿಯ 1 ಶತಕಕ್ಕೆ 10 ದಾಖಲೆಗಳು ಉಡೀಸ್..!

ಏಕೆಂದರೆ ಏಷ್ಯಾಕಪ್ ನಿಯಮದ ಪ್ರಕಾರ ಸೂಪರ್-4 ಹಂತದ ಪಾಯಿಂಟ್ಸ್​ ಟೇಬಲ್​ನಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆದ ತಂಡಗಳು ಫೈನಲ್ ಆಡಲಿವೆ. ಅದರಂತೆ ಪಾಕಿಸ್ತಾನ್ ಮತ್ತು ಶ್ರೀಲಂಕಾ ನಡುವಣ ಪಂದ್ಯ ಮಳೆಯಿಂದಾಗಿ ರದ್ದಾದರೆ ಲಂಕಾ ತಂಡವು ಫೈನಲ್​ಗೆ ಎಂಟ್ರಿ ಕೊಡಲಿದೆ.

ಫೈನಲ್ ಪಂದ್ಯ ಯಾವಾಗ?

ಸೆಪ್ಟೆಂಬರ್ 17 ರಂದು ಏಷ್ಯಾಕಪ್​ನ ಫೈನಲ್ ಪಂದ್ಯ ನಡೆಯಲಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯ ಮಧ್ಯಾಹ್ನ 3 ಗಂಟೆಯಿಂದ ಶುರುವಾಗಲಿದೆ.

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ