ಏಷ್ಯಾಕಪ್ 2023 ರಲ್ಲಿ ಇಂದು-ನಾಳೆ ಯಾವುದೇ ಪಂದ್ಯವಿಲ್ಲ: ಯಾಕೆ ಗೊತ್ತೇ?

Asia Cup 2023 Todays's Match: ಏಷ್ಯಾಕಪ್​ನಲ್ಲಿ ಇಂದು ಮತ್ತು ನಾಳೆ ಪಂದ್ಯವನ್ನು ಆಯೋಜಿಸಲಾಗಿಲ್ಲ. ಯಾವುದೇ ಪಂದ್ಯ ಏಷ್ಯಾಕಪ್​ನಲ್ಲಿ ಎರಡು ದಿನ ನಡೆಯುತ್ತಿಲ್ಲ. ಸೆಪ್ಟೆಂಬರ್ 9ಕ್ಕೆ ಶ್ರೀಲಂಕಾ-ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ. ಆದರೆ, ಎರಡು ದಿನಗಳ ಕಾಲ ಪಂದ್ಯ ನಡೆಯದಿರಲಿ ಕಾರಣವಿದೆ.

ಏಷ್ಯಾಕಪ್ 2023 ರಲ್ಲಿ ಇಂದು-ನಾಳೆ ಯಾವುದೇ ಪಂದ್ಯವಿಲ್ಲ: ಯಾಕೆ ಗೊತ್ತೇ?
Asia Cup 2023
Follow us
|

Updated on: Sep 07, 2023 | 7:16 AM

ಏಷ್ಯಾಕಪ್ 2023 (Asia Cup 2023) ಟೂರ್ನಿಯಲ್ಲಿ ಸೂಪರ್-4 ಹಂತದ ಪಂದ್ಯಗಳಿಗೆ ಈಗಾಗಲೇ ಚಾಲನೆ ಸಿಕ್ಕಾಗಿದೆ. ಸೆಪ್ಟೆಂಬರ್ 6 ರಂದು ನಡೆದ ಸೂಪರ್-4 ಸ್ಟೇಜ್​ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನ ಭರ್ಜರಿ ಗೆಲುವು ಕಾಣುವ ತನ್ನ ಫಾರ್ಮ್ ಮುಂದುವರೆಸಿತು. ಲಾಹೊರ್​ನ ಗಡಾಫಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮಾರಕ ಬೌಲಿಂಗ್ ದಾಳಿ ಸಂಘಟಿಸಿದ ಬಾಬರ್ ಪಡೆ 7 ವಿಕೆಟ್​ಗಳ ಜಯ ಸಾಧಿಸಿತು. ಆದರೆ, ಏಷ್ಯಾಕಪ್​ನಲ್ಲಿ ಇಂದು ಮತ್ತು ನಾಳೆ ಪಂದ್ಯವನ್ನು ಆಯೋಜಿಸಲಾಗಿಲ್ಲ. ಯಾವುದೇ ಪಂದ್ಯ ಏಷ್ಯಾಕಪ್​ನಲ್ಲಿ ಎರಡು ದಿನ ನಡೆಯುತ್ತಿಲ್ಲ. ಇದಕ್ಕೆ ಕಾರಣವಿದೆ.

ಏಷ್ಯಾಕಪ್‌ನ ಸೂಪರ್-4 ಹಂತದಲ್ಲಿ ಒಟ್ಟು ನಾಲ್ಕು ತಂಡಗಳು ಭಾಗವಹಿಸುತ್ತಿವೆ. ಶ್ರೀಲಂಕಾ, ಪಾಕಿಸ್ತಾನ, ಭಾರತ ಹಾಗೂ ಬಾಂಗ್ಲಾದೇಶ. ಇದರಲ್ಲಿ ಬುಧವಾರ ನಡೆದ ಮೊದಲ ಪಂದ್ಯವನ್ನು ಪಾಕಿಸ್ತಾನದಲ್ಲಿ ಆಯೋಜಿಸಲಾಗಿತ್ತು. ಆದರೆ, ವೇಳಾಪಟ್ಟಿಯ ಪ್ರಕಾರ ಮುಂದಿನ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಈ ಮ್ಯಾಚ್ ಇರುವುದು ಶ್ರೀಲಂಕಾದಲ್ಲಿ. ಬಾಂಗ್ಲಾ ತಂಡ ಪಾಕ್​ನಿಂದ ಲಂಕಾಕಕ್ಕೆ ತೆರಳಲು ಸಮಯ ಬೇಕಿದೆ. ಹೀಗಾಗಿ ಒಂದು ದಿನ ಪ್ರಯಾಣಕ್ಕಾಗಿ, ಮತ್ತೊಂದು ದಿನ ವಿಶ್ರಾಂತಿಗಾಗಿ ಎಂದು ಎರಡು ದಿನ ಏಷ್ಯಾಕಪ್​ನಲ್ಲಿ ಪಂದ್ಯ ಆಯೋಜಿಸಲಾಗಿಲ್ಲ.

ವಿಶ್ವಕಪ್​ ಗೆಲ್ಲುವ ಫೇವರೇಟ್ ತಂಡ ಭಾರತ: ಇಲ್ಲಿದೆ ಕಾರಣ

ಇದನ್ನೂ ಓದಿ
Image
Asia Cup 2023: ಸೂಪರ್​-4 ನಲ್ಲಿ ಪಾಕಿಸ್ತಾನ್ ಶುಭಾರಂಭ: ಮುಂದಿನ ಎದುರಾಳಿ
Image
ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕನ್ನಡತಿಯ ಮಿಂಚಿಂಗ್
Image
ಭಾರತ ಏಕದಿನ ವಿಶ್ವಕಪ್ ತಂಡದಲ್ಲಿ ಐವರಿಗಿಲ್ಲ ಸ್ಥಾನ..!
Image
ಏಕದಿನ ರ‍್ಯಾಂಕಿಂಗ್ ಪ್ರಕಟ: ಟಾಪ್-3 ನಲ್ಲಿ ಕಾಣಿಸಿಕೊಂಡ ಶುಭ್​ಮನ್ ಗಿಲ್

ಸೆ. 9ಕ್ಕೆ ಲಂಕಾ-ಬಾಂಗ್ಲಾ ಮುಖಾಮುಖಿ:

ಸೆಪ್ಟೆಂಬರ್ 9ಕ್ಕೆ ಏಷ್ಯಾಕಪ್​ನ ಸೂಪರ್-4 ಹಂತದ ಪಂದ್ಯದಲ್ಲಿ ಶ್ರೀಲಂಕಾ-ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಸೋತ ಬಾಂಗ್ಲಾಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಅತ್ತ ಗುಂಪು ಹಂತದಲ್ಲಿ ಬೊಂಬಾಟ್ ಪ್ರದರ್ಶನ ತೋರಿರುವ ಶ್ರೀಲಂಕಾ ಸೂಪರ್-4 ನಲ್ಲಿ ಯಾವ ರೀತಿ ಪ್ರದರ್ಶನ ತೋರುತ್ತೆ ಎಂಬುದು ನೋಡಬೇಕಿದೆ.

ಪಂದ್ಯಗಳು ನಡೆಯುವ ಸ್ಥಳಗಳಲ್ಲಿ ಬದಲಾವಣೆ ಇಲ್ಲ:

ಏಷ್ಯಾಕಪ್‌ನ ಸೂಪರ್-4 ರೌಂಡ್ ಮತ್ತು ಫೈನಲ್‌ ಪಂದ್ಯಗಳ ಸ್ಥಳಗಳನ್ನು ಬದಲಾಹಿಸುವ ಸಾಧ್ಯತೆಗಳಿವೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದು, ಏಷ್ಯಾಕಪ್ ಪಂದ್ಯಗಳು ನಡೆಯುವ ಸ್ಥಳಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಪಂದ್ಯಗಳನ್ನು ಈ ಮೊದಲೇ ನಿರ್ಧರಿಸಿದ ಸ್ಥಳಗಳಲ್ಲಿ ಅಂದರೆ ಕೊಲಂಬೊದಲ್ಲಿಯೇ ಆಡಲಾಗುತ್ತದೆ. ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬ ಮಾಹಿತಿ ನೀಡಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ