IND vs NEP: ಭಾರತ ತಂಡದಲ್ಲಿ 1 ಬದಲಾವಣೆ: ಹೀಗಿದೆ ಪ್ಲೇಯಿಂಗ್ ಇಲೆವೆನ್
India Playing XI: ಈ ಪಂದ್ಯದಲ್ಲಿ ಕಣಕ್ಕಿಳಿದ ಭಾರತ ತಂಡದಲ್ಲಿ ಒಂದು ಬದಲಾವಣೆ ಕಂಡು ಬಂದಿದೆ. ಪಾಕಿಸ್ತಾನ್ ವಿರುದ್ಧದ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ವೈಯುಕ್ತಿಕ ಕಾರಣಗಳಿಗಾಗಿ ಬುಮ್ರಾ ಮುಂಬೈಗೆ ಮರಳಿದ್ದು, ಹೀಗಾಗಿ ನೇಪಾಳ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ.
ಶ್ರೀಲಂಕಾದ ಪಲ್ಲೆಕಲೆ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ನ 5ನೇ ಪಂದ್ಯದಲ್ಲಿ ನೇಪಾಳ ಹಾಗೂ ಭಾರತ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಿದ್ದು, ಇದರಲ್ಲಿ ಗೆಲ್ಲುವ ಮೂಲಕ ಸೂಪರ್-4 ಹಂತಕ್ಕೇರಬಹುದು.
ಇನ್ನು ಈ ಪಂದ್ಯದಲ್ಲಿ ಕಣಕ್ಕಿಳಿದ ಭಾರತ ತಂಡದಲ್ಲಿ ಒಂದು ಬದಲಾವಣೆ ಕಂಡು ಬಂದಿದೆ. ಪಾಕಿಸ್ತಾನ್ ವಿರುದ್ಧದ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ವೈಯುಕ್ತಿಕ ಕಾರಣಗಳಿಗಾಗಿ ಬುಮ್ರಾ ಮುಂಬೈಗೆ ಮರಳಿದ್ದು, ಹೀಗಾಗಿ ನೇಪಾಳ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ.
ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಮೊಹಮ್ಮದ್ ಶಮಿ ಕಾಣಿಸಿಕೊಂಡಿದ್ದಾರೆ. ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಶಮಿ ಕಣಕ್ಕಿಳಿದಿರಲಿಲ್ಲ. ಶಮಿ ಬದಲಿಗೆ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಚಾನ್ಸ್ ಪಡೆದಿದ್ದರು. ಇದೀಗ ಪ್ಲೇಯಿಂಗ್ ಇಲೆವೆನ್ನಿಂದ ಬುಮ್ರಾ ಹೊರಗುಳಿದಿರುವ ಕಾರಣ ಮೊಹಮ್ಮದ್ ಶಮಿಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿದೆ. ಅದರಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ನೇಪಾಳ (ಪ್ಲೇಯಿಂಗ್ XI): ಕುಶಾಲ್ ಭುರ್ಟೆಲ್, ಆಸಿಫ್ ಶೇಖ್ (ವಿಕೆಟ್ ಕೀಪರ್), ರೋಹಿತ್ ಪೌಡೆಲ್ (ನಾಯಕ), ಭೀಮ್ ಶರ್ಕಿ, ಸೋಂಪಾಲ್ ಕಾಮಿ, ಗುಲ್ಸನ್ ಝಾ, ದೀಪೇಂದ್ರ ಸಿಂಗ್ ಐರಿ, ಕುಶಾಲ್ ಮಲ್ಲಾ, ಸಂದೀಪ್ ಲಮಿಚಾನೆ, ಕರಣ್ ಕೆಸಿ, ಲಲಿತ್ ರಾಜಬನ್ಶಿ
ನೇಪಾಳ ತಂಡ: ರೋಹಿತ್ ಪೌಡೆಲ್ (ನಾಯಕ), ಮಹಮದ್ ಆಸಿಫ್ ಶೇಖ್, ಕುಶಾಲ್ ಭುರ್ಟೆಲ್, ಲಲಿತ್ ರಾಜ್‌ಬಂಶಿ, ಭೀಮ್ ಶಾರ್ಕಿ, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಸಂದೀಪ್ ಲಮಿಚಾನೆ, ಕರಣ್ ಕೆಸಿ, ಗುಲ್ಶನ್ ಕುಮಾರ್ ಝಾ, ಆರಿಫ್ ಶೇಖ್, ಸೋಂಪಾಲ್ ಕಾಮಿ, ಪ್ರತೀಶ್ ಜಿಸಿ, ಕಿಶೋರ್ ಮಹತೋ, ಸಂದೀಪ್ ಜೊರ , ಅರ್ಜುನ್ ಸೌದ್, ಶ್ಯಾಮ್ ಧಾಕಲ್.
ಇದನ್ನೂ ಓದಿ: ಏಷ್ಯಾಕಪ್ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).
Published On - 2:34 pm, Mon, 4 September 23