Asia Cup 2023: ಏಷ್ಯಾಕಪ್ ಆಡಲು ಪಾಕ್ ನೆಲಕ್ಕೆ ಕಾಲಿಡುತ್ತಾ ಭಾರತ? ಸ್ಪಷ್ಟನೆ ನೀಡಿದ ಐಪಿಎಲ್ ಅಧ್ಯಕ್ಷ

India vs Pakistan: ಸದ್ಯಕ್ಕೆ ಏಷ್ಯಾಕಪ್‌ ವೇಳಾಪಟ್ಟಿಯ ಸುತ್ತ ಎದ್ದಿರುವ ವಿವಾದಗಳ ಕುರಿತು ಸ್ಪಷ್ಟನೆ ನೀಡಿರುವ ಅರುಣ್ ಧುಮಾಲ್, ಈ ಬಾರಿಯ ಏಷ್ಯಾಕಪ್​ನಲ್ಲಿ ಟೀಂ ಇಂಡಿಯಾ ಶ್ರೀಲಂಕಾ ನೆಲದಲ್ಲಿ ಪಾಕ್ ತಂಡವನ್ನು ಎದುರಿಸುವುದು ಖಚಿತ ಎಂದಿದ್ದಾರೆ.

Asia Cup 2023: ಏಷ್ಯಾಕಪ್ ಆಡಲು ಪಾಕ್ ನೆಲಕ್ಕೆ ಕಾಲಿಡುತ್ತಾ ಭಾರತ? ಸ್ಪಷ್ಟನೆ ನೀಡಿದ ಐಪಿಎಲ್ ಅಧ್ಯಕ್ಷ
ಏಷ್ಯಾಕಪ್
Follow us
ಪೃಥ್ವಿಶಂಕರ
|

Updated on:Jul 12, 2023 | 10:43 AM

ಬದ್ಧ ಎದುರಾಳಿ ದೇಶಗಳಾದ ಭಾರತ ಮತ್ತು ಪಾಕಿಸ್ತಾನ (India vs Pakistan) ಮಧ್ಯೆ ಯಾವುದೇ ಕ್ರೀಡಾ ಸ್ಪರ್ಧೆಗಳು ನಡೆಯುತ್ತೆ ಅಂದರೆ ಇಡೀ ಕ್ರೀಡಾ ಜಗತ್ತೇ ಅತ್ತ ಕುತೂಹಲದ ಕಣ್ಣುಗಳನ್ನು ನೆಟ್ಟಿರುತ್ತೆ. ಹೀಗಿರುವಾಗ, ಅಕ್ಟೋಬರ್​ 5ರಿಂದ ಭಾರತದಲ್ಲೇ ನಡೆಯಲಿರುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್​ನಲ್ಲಿ (ICC ODI World Cup), ಬಹಳ ದಿನಗಳ ನಂತರ ಇಂಡೋ-ಪಾಕ್​ ಮುಖಿಮುಖಿಯಾಗಲಿವೆ. ಅದಕ್ಕೂ ಮುನ್ನ ಉಭಯ ತಂಡಗಳು ಏಷ್ಯಾಕಪ್ (Asia Cup) ಆಡಬೇಕಿದೆ. ಆದರೆ ಏಷ್ಯಾಕಪ್ ಹಾಗೂ ವಿಶ್ವಕಪ್​ ವಿಚಾರದಲ್ಲಿ ದಿನಗೊಂದು ಖ್ಯಾತೆ ತೆಗೆಯುತ್ತಿರುವ ಪಾಕಿಸ್ತಾನ ಸರ್ಕಾರ, ಏಷ್ಯಾಕಪ್ ವೇಳಾಪಟ್ಟಿ ವಿಳಂಬವಾಗುವಂತೆ ಮಾಡುತ್ತಿದೆ.

ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಬಹಳ ವರ್ಷಗಳಿಂದಲೂ ರಾಜಕೀಯ ವೈಮನಸ್ಸಿದೆ. ಇದೇ ಕಾರಣಕ್ಕಾಗಿ ಎರಡೂ ದೇಶಗಳ ಮಧ್ಯೆ ದ್ವಿಪಕ್ಷೀಯ ಕ್ರಿಕೆಟ್​ ಸರಣಿಗಳು ನಿಂತೇ ಹೋಗಿವೆ. ಸದ್ಯ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಇಂಡೋ-ಪಾಕ್​ ಕದನ ಕಣ್ತುಂಬಿಕೊಳ್ಳುವ ಅವಕಾಶ, ಕ್ರಿಕೆಟ್​ ಅಭಿಮಾನಿಗಳಿಗೆ ಸಿಕ್ತಿದೆ. ಆದರೆ ಏಷ್ಯಾಕಪ್ ಆಡಲು ಭಾರತ ಪಾಕ್ ನೆಲಕ್ಕೆ ಬರದಿದ್ದರೆ, ಪಾಕ್ ತಂಡ ಕೂಡ ವಿಶ್ವಕಪ್ ಆಡಲು ಭಾರತಕ್ಕೆ ಬರುವುದಿಲ್ಲ ಎಂದು ಹೇಳುವ ಮೂಲಕ ಪಾಕ್ ಕ್ರೀಡಾ ಸಚಿವ ಹೊಸ ವಿವಾದ ಹುಟ್ಟುಹಾಕಿದ್ದರು. ಇದರಿಂದಾಗಿ ಏಷ್ಯಾಕಪ್ ವೇಳಾಪಟ್ಟಿ ಪ್ರಕಟಣೆಯೂ ವಿಳಂಬವಾಗಿತ್ತು. ಇದೀಗ ಏಷ್ಯಾಕಪ್ ವೇಳಾಪಟ್ಟಿ ಬಿಡುಗಡೆಯ ಬಗ್ಗೆ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ಮಹತ್ವದ ಹೇಳಿಕೆ ನೀಡಿದ್ದಾರೆ.

ODI World Cup: ‘ಈ ನಡೆ ಸರಿಯಿಲ್ಲ’; ಪಾಕ್ ಸರ್ಕಾರದ ನಿಲುವನ್ನು ಟೀಕಿಸಿದ ಮಂಡಳಿಯ ಮಾಜಿ ಅಧ್ಯಕ್ಷ

ಪಾಕಿಸ್ತಾನಕ್ಕೆ ಹೋಗುತ್ತಿಲ್ಲ ಭಾರತ

ಸದ್ಯಕ್ಕೆ ಏಷ್ಯಾಕಪ್‌ ವೇಳಾಪಟ್ಟಿಯ ಸುತ್ತ ಎದ್ದಿರುವ ವಿವಾದಗಳ ಕುರಿತು ಸ್ಪಷ್ಟನೆ ನೀಡಿರುವ ಅರುಣ್ ಧುಮಾಲ್, ಎಲ್ಲಾ ವದಂತಿಗಳಿಗೂ ತೆರೆ ಎಳೆದಿದ್ದು, ಈ ಬಾರಿಯ ಏಷ್ಯಾಕಪ್​ನಲ್ಲಿ ಟೀಂ ಇಂಡಿಯಾ ಶ್ರೀಲಂಕಾ ನೆಲದಲ್ಲಿ ಪಾಕ್ ತಂಡವನ್ನು ಎದುರಿಸುವುದು ಖಚಿತ ಎಂದಿದ್ದಾರೆ. ಈ ಬಗ್ಗೆ ಸುದ್ದಿ ಸಂಸ್ಥೆ PTI ವರದಿ ಮಾಡಿದ್ದು, ವರದಿಯ ಪ್ರಕಾರ, ಈ ಬಾರಿಯ ಏಷ್ಯಾಕಪ್​ಗಾಗಿ ಟೀಂ ಇಂಡಿಯಾ, ಪಾಕಿಸ್ತಾನಕ್ಕೆ ಹೋಗುತ್ತಿಲ್ಲ. ಬದಲಿಗೆ ಟೀಂ ಇಂಡಿಯಾದ ಎಲ್ಲಾ ಪಂದ್ಯಗಳು ಲಂಕಾದಲ್ಲಿ ನಡೆಯಲ್ಲಿವೆ ಎಂದು ವರದಿಯಾಗಿದೆ.

ಪಿಟಿಐ ವರದಿ ಮಾಡಿರುವ ಪ್ರಕಾರ, ದಕ್ಷಿಣ ಆಫ್ರಿಕಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲಾಗಿದ್ದು, ಸಭೆಯಲ್ಲಿ ಭಾಗಿಯಾಗಿದ್ದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಪ್ರತಿನಿಧಿ ಮುಖ್ಯಸ್ಥ ಝಕಾ ಅಶ್ರಫ್ ಏಷ್ಯಾಕಪ್​ ವೇಳಾಪಟ್ಟಿಗೆ ಅಸ್ತು ಎಂದಿದ್ದಾರೆ ಎಂದು ವರದಿಯಾಗಿದೆ. ಧುಮಾಲ್ ಪ್ರಕಾರ, ಕಾಂಟಿನೆಂಟಲ್ ಪಂದ್ಯಾವಳಿಯ ನಾಲ್ಕು ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಉಳಿದ ಪಂದ್ಯಗಳು ಶ್ರೀಲಂಕಾದಲ್ಲಿ ನಿಗದಿಪಡಿಸಲಾಗಿದೆ.

ಲಂಕಾ ನಾಡಲ್ಲಿ ಭಾರತ- ಪಾಕ್ ಮುಖಾಮುಖಿ

ಈ ಬಗ್ಗೆ ಹೇಳಿಕೆ ನೀಡಿರುವ ಧುಮಾಲ್,  ‘ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ಪಿಸಿಬಿ ಮುಖ್ಯಸ್ಥ ಝಕಾ ಅಶ್ರಫ್ ಅವರನ್ನು ಭೇಟಿ ಮಾಡಿದ್ದು, ಏಷ್ಯಾ ಕಪ್ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಏಷ್ಯಾಕಪ್ ಅನ್ನು ಮೊದಲೇ ಚರ್ಚಿಸಿದಂತೆ ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುತ್ತದೆ. ಪಾಕಿಸ್ತಾನದಲ್ಲಿ ಲೀಗ್ ಹಂತದ ನಾಲ್ಕು ಪಂದ್ಯಗಳು ನಡೆಯಲಿವೆ. ನಂತರ ಶ್ರೀಲಂಕಾದಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ಪಂದ್ಯ ಸೇರಿದಂತೆ ಒಟ್ಟು 9 ಪಂದ್ಯಗಳು ನಡೆಯಲಿವೆ. ಒಂದು ವೇಳೆ ಎರಡೂ ತಂಡಗಳು ಫೈನಲ್ ಆಡಿದರೆ ಉಭಯ ತಂಡಗಳು ಮೂರನೇ ಬಾರಿ ಮುಖಾಮುಖಿಯಾಗಲಿವೆ’ ಎಂದಿದ್ದಾರೆ.

ಅಲ್ಲದೆ ಈ ಹಿಂದೆ ಪಾಕ್ ಕ್ರೀಡಾ ಸಚಿವ ಎಹ್ಸಾನ್ ಮಜಾರಿ, ಟೀಂ ಇಂಡಿಯಾ ಏಷ್ಯಾಕಪ್ ಆಡಲು ಪಾಕಿಸ್ತಾನಕ್ಕೆ ಬರಲಿದೆ ಎಂದು ಹೇಳಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ಎಲ್ಲಾ ವರದಿಗಳನ್ನು ತಳ್ಳಿಹಾಕಿರುವ ಧುಮಾಲ್, ‘ಅಂತಹ ಯಾವುದೇ ಚರ್ಚೆ ನಡೆದಿಲ್ಲ. ಏಷ್ಯಾಕಪ್ ಆಡಲು ಟೀಂ ಇಂಡಿಯಾ, ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ. ಹೀಗಾಗಿ ಏಷ್ಯಾಕಪ್ ವೇಳಾಪಟ್ಟಿ ಅಂತಿಮಗೊಂಡಿದ್ದು, ಅದರಂತೆ ಪಂದ್ಯಾವಳಿ ನಡೆಯಲಿದೆ ಎಂದಿದ್ದಾರೆ.

2010ರ ಆವೃತ್ತಿಯಂತೆಯೇ ಭಾರತವು ಶ್ರೀಲಂಕಾದ ದಂಬುಲ್ಲಾದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಹಾಗೆಯೇ ಪಾಕಿಸ್ತಾನ ತನ್ನ ತವರು ನೆಲದಲ್ಲಿ ಏಕೈಕ ಪಂದ್ಯವನ್ನಾಡಲಿದ್ದು, ಆ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದೆ. ಇನ್ನುಳಿದ ಮೂರು ಪಂದ್ಯಗಳಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ತಂಡವನ್ನು ಎದುರಿಸಿದರೆ, ಮೂರನೇ ಪಂದ್ಯದಲ್ಲಿ ಬಾಂಗ್ಲಾದೇಶ, ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಇನ್ನು ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ನಡುವಿನ ಪಂದ್ಯ ಪಾಕ್ ನೆಲದಲ್ಲಿ ನಡೆಯುವ ಕೊನೆಯ ಏಷ್ಯಾಕಪ್ ಪಂದ್ಯವಾಗಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:40 am, Wed, 12 July 23

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ