ಏಷ್ಯಾಕಪ್​ನಿಂದ ಹೊರಬಿದ್ದ ಪಾಕಿಸ್ತಾನಕ್ಕೆ ಮತ್ತೊಂದು ಬಿಗ್ ಶಾಕ್; ಭಾರತಕ್ಕೆ ಲಾಭ..!

ICC ODI Rankings: ಏಷ್ಯಾಕಪ್‌ ಸೂಪರ್ 4 ಸುತ್ತಿನಲ್ಲಿ ಶ್ರೀಲಂಕಾ ಎದುರು ಸೋತ ಪಾಕಿಸ್ತಾನ ಟೂರ್ನಿಯಿಂದಲೇ ಹೊರಬಿದ್ದಿದೆ. ಇದೀಗ ಪಾಕ್ ತಂಡಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು ಇಷ್ಟು ದಿನ ಏಕದಿನ ರ್ಯಾಂಕಿಂಗ್​ನಲ್ಲಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಿದ್ದ ಪಾಕ್ ಇದೀಗ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ.

ಏಷ್ಯಾಕಪ್​ನಿಂದ ಹೊರಬಿದ್ದ ಪಾಕಿಸ್ತಾನಕ್ಕೆ ಮತ್ತೊಂದು ಬಿಗ್ ಶಾಕ್; ಭಾರತಕ್ಕೆ ಲಾಭ..!
ಭಾರತ- ಪಾಕಿಸ್ತಾನ
Follow us
ಪೃಥ್ವಿಶಂಕರ
|

Updated on:Sep 15, 2023 | 4:46 PM

ಏಷ್ಯಾಕಪ್‌ (Asia Cup 2023) ಸೂಪರ್ 4 ಸುತ್ತಿನಲ್ಲಿ ಶ್ರೀಲಂಕಾ ಎದುರು ಸೋತ ಪಾಕಿಸ್ತಾನ (Sri lanka vs Pakistan) ಟೂರ್ನಿಯಿಂದಲೇ ಹೊರಬಿದ್ದಿದೆ. ಇದೀಗ ಪಾಕ್ ತಂಡಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು ಇಷ್ಟು ದಿನ ಏಕದಿನ ರ್ಯಾಂಕಿಂಗ್​ನಲ್ಲಿ (ICC ODI Ranking) ಮೊದಲ ಮತ್ತು ಎರಡನೇ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಿದ್ದ ಪಾಕ್ ಇದೀಗ ಮೂರನೇ ಸ್ಥಾನಕ್ಕೆ ಕುಸಿತ ಕಂಡಿದೆ. ಸೂಪರ್ 4 ಸುತ್ತಿನ ಭಾರತ ವಿರುದ್ಧದ ಪಂದ್ಯದಲ್ಲಿ 228 ರನ್‌ಗಳ ಸೋಲು ಕಂಡಿದ್ದ ಪಾಕ್, ಆ ಬಳಿಕ ಶ್ರೀಲಂಕಾ ವಿರುದ್ಧವೂ ಸೋತಿದೆ. ಹೀಗಾಗಿ ಐಸಿಸಿ ಏಕದಿನ ತಂಡಗಳ ಶ್ರೇಯಾಂಕದಲ್ಲಿ ಬದಲಾವಣೆ ಕಂಡು ಬಂದಿದೆ. ಏಷ್ಯಾಕಪ್ ಆರಂಭಕ್ಕೂ ಮುನ್ನ ಪಾಕ್ ತಂಡ ಏಕದಿನ ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿ ಕುಳಿತಿತ್ತು. ಆದರೆ ಸತತ ಸೋಲುಗಳಿಂದ ಅಂಕಗಳಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಶ್ರೇಯಾಂಕದಲ್ಲಿ ಕುಸಿತ ಉಂಟಾಗಿದೆ.

ಮತ್ತೊಂದೆಡೆ, ಏಷ್ಯಾಕಪ್‌ನ ಫೈನಲ್‌ಗೆ ತಲುಪಿರುವ ಭಾರತ ತಂಡದ ಶ್ರೇಯಾಂಕವು ಸುಧಾರಿಸಿದೆ. ಏಷ್ಯಾಕಪ್​ ಆರಂಭಕ್ಕೂ ಮುನ್ನ ಮೂರನೇ ಸ್ಥಾನದಲ್ಲಿದ್ದ ಟೀಂ ಇಂಡಿಯಾ ಇದೀಗ ಸತತ ಗೆಲುವುಗಳ ಫಲವಾಗಿ ಎರಡನೇ ಸ್ಥಾನಕ್ಕೇರಿದೆ. ಎಂದಿನಂತೆ ಆಸ್ಟ್ರೇಲಿಯಾ ಏಕದಿನ ತಂಡಗಳ ಪಟ್ಟಿಯಲ್ಲಿ ತನ್ನ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ. ಈ ನಡುವೆ ವಿಶ್ವಕಪ್​ಗೂ ಮುನ್ನ ಟೀಂ ಇಂಡಿಯಾ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನಕ್ಕೇರುವ ಅವಕಾಶ ಕೂಡ ಪಡೆದುಕೊಂಡಿದೆ.

IND vs BAN: ಬಾಂಗ್ಲಾ ವಿರುದ್ಧ ತಂಡದಲ್ಲಿ 5 ಬದಲಾವಣೆ ಮಾಡಿದ ರೋಹಿತ್! ಯಾರು ಇನ್, ಯಾರು ಔಟ್?

ಭಾರತಕ್ಕೆ ನಂ.1 ಸ್ಥಾನಕ್ಕೇರುವ ಅವಕಾಶ

ವಾಸ್ತವವಾಗಿ ಟೀಂ ಇಂಡಿಯಾ ಏಕದಿನ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನಕ್ಕೇ ಏರಬೇಕೆಂದರೆ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಉಳಿದೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಸೋಲಬೇಕಾಗಿದೆ. ಮತ್ತೊಂದೆಡೆ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದರೆ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನಕ್ಕೇರಲಿದೆ.

ಆಸ್ಟ್ರೇಲಿಯಾ: ಪ್ರಸ್ತುತ ಆಸ್ಟ್ರೇಲಿಯಾ ತಂಡ 118 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಇಂದು ಮತ್ತು ಸೆಪ್ಟೆಂಬರ್ 17 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಆಸೀಶ್ ಎರಡು ಏಕದಿನ ಪಂದ್ಯವನ್ನಾಡಲಿದೆ. ಐದು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಮುನ್ನಡೆ ಸಾಧಿಸಿದ್ದು ಉಳಿದಿರುವ ಎರಡೂ ಪಂದ್ಯಗಳಲ್ಲಿ ಆಸ್ಟ್ರೇಲಿಯ ಸೋತರೆ, ಒಂದು ಅಂಕವನ್ನು ಕಳೆದುಕೊಳ್ಳುತ್ತದೆ.

ಭಾರತ: ಹಾಗೆಯೇ ಭಾರತ ತಂಡ 116 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಏಷ್ಯಾಕಪ್‌ನಲ್ಲಿ ಎರಡು ಪಂದ್ಯಗಳ ನಂತರ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯೊಂದಿಗೆ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರುವುದು ಸುಲಭವಾಗಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತ ಗೆದ್ದರೆ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋತರೆ, ಭಾರತ ಇಂದು ಏಕದಿನ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಲಿದೆ.

ಪಾಕಿಸ್ತಾನ: ಏಷ್ಯಾಕಪ್​ನಲ್ಲಿ ಕಳಪೆ ಪ್ರದರ್ಶನ ನೀಡಿದ ಪಾಕಿಸ್ತಾನ ಇದೀಗ ಅಗ್ರಸ್ಥಾನ ಕಳೆದುಕೊಂಡಿದ್ದು, 115 ಅಂಕ ಗಳಿಸಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಏಕದಿನ ವಿಶ್ವಕಪ್‌ಗೂ ಮುನ್ನ ಯಾವುದೇ ಏಕದಿನ ಪಂದ್ಯ ನಡೆಯದ ಕಾರಣ ಅಗ್ರಸ್ಥಾನವನ್ನು ಮರಳಿ ಪಡೆಯಲು ಪಾಕಿಸ್ತಾನಕ್ಕೆ ಅವಕಾಶವಿಲ್ಲ. ಹೀಗಾಗಿ ಅಗ್ರ ಸ್ಥಾನಕ್ಕಾಗಿ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ ಪೈಪೋಟಿ ಏರ್ಪಟ್ಟಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:44 pm, Fri, 15 September 23

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್