Asia Cup 2023: ಟೀಮ್ ಇಂಡಿಯಾಗೆ ಪ್ಲೇಯಿಂಗ್ 11 ಆಯ್ಕೆಯೇ ದೊಡ್ಡ ಸವಾಲು

Asia Cup 2023: ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ತಂಡಕ್ಕೆ ಬಲ ತುಂಬುವ ನಿರೀಕ್ಷೆಯಿದೆ. ಇಲ್ಲಿ 7 ಕ್ರಮಾಂಕಗಳು ಪೂರ್ಣ ಎನ್ನಬಹುದು. ಇನ್ನುಳಿದ ನಾಲ್ಕು ಸ್ಥಾನಗಳಲ್ಲಿ ಮೂವರು ವೇಗಿಗಳು ಕಾಣಿಸಿಕೊಳ್ಳುವುದು ಖಚಿತ.

Asia Cup 2023: ಟೀಮ್ ಇಂಡಿಯಾಗೆ ಪ್ಲೇಯಿಂಗ್ 11 ಆಯ್ಕೆಯೇ ದೊಡ್ಡ ಸವಾಲು
Team India (ಸಾಂದರ್ಭಿಕ ಚಿತ್ರ)
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 21, 2023 | 7:28 PM

ಏಷ್ಯಾಕಪ್​ಗಾಗಿ ಬಿಸಿಸಿಐ ಆಯ್ಕೆ ಸಮಿತಿ 17 ಸದಸ್ಯರನ್ನು ಆಯ್ಕೆ ಮಾಡಿದೆ. ಈ ಹದಿನೇಳು ಸದಸ್ಯರಿಂದ 11 ಆಟಗಾರರನ್ನು ಆಯ್ಕೆ ಮಾಡುವುದೇ ಇದೀಗ ಟೀಮ್ ಇಂಡಿಯಾ ಮುಂದಿರುವ ದೊಡ್ಡ ಸವಾಲು. ಏಕೆಂದರೆ ಭಾರತ ತಂಡವು ಏಷ್ಯಾಕಪ್​ನಲ್ಲಿ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನ್ ವಿರುದ್ಧ ಆಡಲಿದೆ. ಈ ಪಂದ್ಯಕ್ಕಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಅನ್ನು ರೂಪಿಸಬೇಕಿದೆ.

ಆದರೆ ಇದೀಗ ತಂಡಕ್ಕೆ ಆಯ್ಕೆಯಾಗಿರುವ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಕಳೆದ ನಾಲ್ಕೈದು ತಿಂಗಳುಗಳಿಂದ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಯೇ ಇಲ್ಲ. ಇನ್ನು ತಂಡದಲ್ಲಿರುವ ಸೂರ್ಯಕುಮಾರ್ ಯಾದವ್ ಫಾರ್ಮ್​ನಲ್ಲಿಲ್ಲ. ಹಾಗೆಯೇ ಹೊಸದಾಗಿ ಆಯ್ಕೆಯಾಗಿರುವ ತಿಲಕ್ ವರ್ಮಾಗೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ನ ಅನುಭವ ಇಲ್ಲ.

ಹೀಗಾಗಿಯೇ ಪಾಕಿಸ್ತಾನ್ ವಿರುದ್ಧದ ಪಂದ್ಯಕ್ಕಾಗಿ ಪ್ಲೇಯಿಂಗ್ ಇಲೆವೆನ್ ರೂಪಿಸುವುದು ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್ ದ್ರಾವಿಡ್ ಮುಂದಿರುವ ದೊಡ್ಡ ಸವಾಲು ಎನ್ನಬಹುದು.

ಇಲ್ಲಿ ಆರಂಭಿಕರಾಗಿ ಶುಭ್​ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿಯುವುದು ಖಚಿತ ಎನ್ನಬಹುದು. ಹಾಗೆಯೇ ಮೂರನೇ ಕ್ರಮಾಂಕ ವಿರಾಟ್ ಕೊಹ್ಲಿಗೆ ಖಾಯಂ. ನಾಲ್ಕನೇ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯಬೇಕಾಗುತ್ತದೆ. ಹಾಗೆಯೇ ಐದನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್. ಇದರ ಜೊತೆಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಕೂಡ ನಿರ್ವಹಿಸಬೇಕು.

ಆದರೆ ಸಂಪೂರ್ಣ ಫಿಟ್​ನೆಸ್ ಹೊಂದಿಲ್ಲದ ಕಾರಣ ರಾಹುಲ್ ಮೊದಲ ಪಂಧ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಖುದ್ದು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತಿಳಿಸಿದ್ದಾರೆ. ಒಂದು ವೇಳೆ ರಾಹುಲ್ ಹೊರಗುಳಿದರೆ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಕಣಕ್ಕಿಳಿಯಬೇಕಾಗುತ್ತದೆ.

ಇಲ್ಲಿ ಗಮನಿಸಬೇಕಾದ ವಿಷಯ ಎಂದರೆ ಇಶಾನ್ ಕಿಶನ್ ಆರಂಭಿಕನಾಗಿ ಮಾತ್ರ ಇದುವರೆಗೆ ಯಶಸ್ಸು ಸಾಧಿಸಿದ್ದಾರೆ. ಹೀಗಾಗಿ ಓಪನರ್ ಆಗಿ ಕಣಕ್ಕಿಳಿಸಿದರೆ, ಶುಭ್​ಮನ್ ಗಿಲ್ ಅವರ ಬ್ಯಾಟಿಂಗ್ ಕ್ರಮಾಂಕದಲ್ಲೂ ಬದಲಾವಣೆ ಮಾಡಬೇಕಾಗುತ್ತದೆ.

ಇತ್ತ ಗಿಲ್​ಗೆ 3ನೇ ಕ್ರಮಾಂಕಗಿಂತ ಕೆಳಗಿನ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿದ ಅನುಭವವಿಲ್ಲ. ಹಾಗಾಗಿ ಪಾಕಿಸ್ತಾನ್ ವಿರುದ್ಧದ ಪಂದ್ಯಕ್ಕೂ ಮುನ್ನ ಕೆಎಲ್ ರಾಹುಲ್ ಅವರ ಸಂಪೂರ್ಣ ಚೇತರಿಸಿಕೊಳ್ಳಬೇಕಿರುವುದು ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯ.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ತಂಡಕ್ಕೆ ಬಲ ತುಂಬುವ ನಿರೀಕ್ಷೆಯಿದೆ. ಇಲ್ಲಿ 7 ಕ್ರಮಾಂಕಗಳು ಪೂರ್ಣ ಎನ್ನಬಹುದು. ಇನ್ನುಳಿದ ನಾಲ್ಕು ಸ್ಥಾನಗಳಲ್ಲಿ ಮೂವರು ವೇಗಿಗಳು ಕಾಣಿಸಿಕೊಳ್ಳುವುದು ಖಚಿತ. ಈ ಸ್ಥಾನಗಳಲ್ಲಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಕಾಣಿಸಿಕೊಳ್ಳಬಹುದು. ಹಾಗೆಯೇ 11ನೇ ಆಟಗಾರನಾಗಿ ಸ್ಪಿನ್ನರ್ ಕುಲ್ದೀಪ್​ ಯಾದವ್​ಗೆ ಅವಕಾಶ ಸಿಗಬಹುದು.

ಈ ಲೆಕ್ಕಾಚಾರಗಳೊಂದಿಗೆ ಪ್ಲೇಯಿಂಗ್ ಇಲೆವೆನ್ ರೂಪಿಸಿದರೆ ಆಲ್​ರೌಂಡರ್​ಗಳಾದ ಅಕ್ಷರ್ ಪಟೇಲ್ ಹಾಗೂ ಶಾರ್ದೂಲ್ ಠಾಕೂರ್ ಅವರನ್ನು ಕೈ ಬಿಡಬೇಕಾಗುತ್ತದೆ.

ಒಟ್ಟಿನಲ್ಲಿ ಮೊದಲ ಪಂದ್ಯದಲ್ಲೇ ಸಾಂಪ್ರದಾಯಿಕ ಎದುರಾಳಿಯನ್ನು ಎದುರಿಸಲಿರುವ ಭಾರತ ತಂಡಕ್ಕೆ ಕಂಬ್ಯಾಕ್ ಮಾಡಿರುವ ಆಟಗಾರರದ್ದೇ ಚಿಂತೆಯಾಗಿದೆ. ಇಲ್ಲಿ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಫಾರ್ಮ್​ನಲ್ಲಿದ್ದಾರಾ ಎಂಬುದು ಪಾಕ್​ ವಿರುದ್ಧದ ಪಂದ್ಯದ ಬಳಿಕವಷ್ಟೇ ತಿಳಿಯಲಿದೆ. ಹೀಗಾಗಿ ರೋಹಿತ್ ಶರ್ಮಾ ಇವರಿಬ್ಬರಲ್ಲಿ ಒಬ್ಬರನ್ನು ಕೈ ಬಿಡಲಿದ್ದಾರಾ ಅಥವಾ ಇಬ್ಬರನ್ನೂ ಕಣಕ್ಕಿಳಿಸಲಿದ್ದಾರಾ ಕಾದು ನೋಡಬೇಕಿದೆ.

ಇದನ್ನೂ ಓದಿ: ಸ್ಪೋಟಕ ಬ್ಯಾಟಿಂಗ್​ ಮೂಲಕ ದಾಖಲೆ ಬರೆದ ರಿಂಕು ಸಿಂಗ್

ಏಷ್ಯಾಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್