India vs Pakistan: ಭಾರತ-ಪಾಕಿಸ್ತಾನ್ ನಡುವಣ 2ನೇ ಮ್ಯಾಚ್​ಗೆ ಡೇಟ್ ಫಿಕ್ಸ್

| Updated By: ಝಾಹಿರ್ ಯೂಸುಫ್

Updated on: Sep 04, 2023 | 11:38 PM

India vs Pakistan: ಸೂಪರ್-4 ಹಂತದ ಅಂಕ ಪಟ್ಟಿಯಲ್ಲಿ ಉಭಯ ತಂಡಗಳು ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದರೆ ಏಷ್ಯಾಕಪ್ ಫೈನಲ್​ನಲ್ಲಿ ಮತ್ತೆ ಮುಖಾಮುಖಿಯಾಗಬಹುದು. ಹೀಗಾಗಿ ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ-ಪಾಕ್ ನಡುವಣ ಮೂರು ಪಂದ್ಯಗಳನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್​ ಪ್ರೇಮಿಗಳಿಗೆ ದೊರೆಯಲಿದೆಯಾ ಕಾದು ನೋಡಬೇಕಿದೆ.

India vs Pakistan: ಭಾರತ-ಪಾಕಿಸ್ತಾನ್ ನಡುವಣ 2ನೇ ಮ್ಯಾಚ್​ಗೆ ಡೇಟ್ ಫಿಕ್ಸ್
India vs Pakistan
Follow us on

ಏಷ್ಯಾಕಪ್​ನ 5ನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಸೂಪರ್-4 ಹಂತಕ್ಕೇರಿದೆ. ಪಲ್ಲೆಕಲೆ ಮೈದಾನದಲ್ಲಿ ನಡೆದ ನೇಪಾಳ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಗ್ರೂಪ್-A ನಿಂದ ಸೂಪರ್ ಫೋರ್ ಹಂತಕ್ಕೇರಿದ 2ನೇ ತಂಡ ಎನಿಸಿಕೊಂಡಿದೆ.

ಇದಕ್ಕೂ ಮುನ್ನ ಪಾಕಿಸ್ತಾನ್ ತಂಡವು ಸೂಪರ್​ ಫೋರ್ ಹಂತಕ್ಕೇರಿತ್ತು. ಇದೀಗ ಇದೇ ಗ್ರೂಪ್​ನಿಂದ ಭಾರತ ತಂಡ ಕೂಡ ಮುಂದಿನ ಸುತ್ತಿಗೆ ಪ್ರವೇಶಿಸಿದೆ. ಇದರೊಂದಿಗೆ ಮತ್ತೊಮ್ಮೆ ಉಭಯ ತಂಡಗಳ ಮುಂದಿನ ಮುಖಾಮುಖಿಗೆ ಡೇಟ್ ಫಿಕ್ಸ್ ಆದಂತಾಗಿದೆ.

ಅಂದರೆ ಸೂಪರ್-4 ಹಂತದಲ್ಲಿ ಒಟ್ಟು 4 ತಂಡಗಳು ಪರಸ್ಪರ ಸೆಣಸಲಿದೆ. ಇಲ್ಲಿ ಭಾರತ ಹಾಗೂ ಪಾಕಿಸ್ತಾನ್ ತಂಡಗಳು ಸೆಪ್ಟೆಂಬರ್ 10 ರಂದು ಮುಖಾಮುಖಿಯಾಗುವುದು ಖಚಿತವಾಗಿದೆ.

ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹೈವೋಲ್ಟೇಜ್ ಪೈಪೋಟಿಯನ್ನು ನಿರೀಕ್ಷಿಸಬಹುದು. ಇದಕ್ಕೂ ಮುನ್ನ ನಡೆದ ಮೊದಲ ಮುಖಾಮುಖಿಯು ಮಳೆಗೆ ಅಹುತಿಯಾಗಿತ್ತು.

ಇದೀಗ ದ್ವಿತೀಯ ಸುತ್ತಿನಲ್ಲಿ ಭಾರತ-ಪಾಕಿಸ್ತಾನ್ ಮುಖಾಮುಖಿಯಾಗುತ್ತಿರುವುದು ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ.
ಇನ್ನು ಸೂಪರ್-4 ಹಂತದ ಅಂಕ ಪಟ್ಟಿಯಲ್ಲಿ ಉಭಯ ತಂಡಗಳ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದರೆ ಏಷ್ಯಾಕಪ್ ಫೈನಲ್​ನಲ್ಲಿ ಮತ್ತೆ ಮುಖಾಮುಖಿಯಾಗಬಹುದು.

ಅದರಂತೆ ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ-ಪಾಕ್ ನಡುವಣ ಮೂರು ಪಂದ್ಯಗಳನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್​ ಪ್ರೇಮಿಗಳಿಗೆ ದೊರೆಯಲಿದೆಯಾ ಕಾದು ನೋಡಬೇಕಿದೆ.

ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾಮ್-ಉಲ್-ಹಕ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಸಲ್ಮಾನ್ ಅಲಿ ಅಘಾ, ಸೌದ್ ಶಕೀಲ್, ಶಾಹೀನ್ ಅಫ್ರಿದಿ ಮತ್ತು ಉಸಾಮಾ ಮಿರ್, ತಯ್ಯಬ್ ತಾಹಿರ್ (ಮೀಸಲು ಆಟಗಾರ).

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).