ಏಷ್ಯಾಕಪ್ ಫೈನಲ್ನಲ್ಲಿ ಭಾರತ ಸೋತಿದ್ದು ಶ್ರೀಲಂಕಾ ವಿರುದ್ಧ ಮಾತ್ರ..!
Asia Cup 2023: ಏಷ್ಯಾಕಪ್ ಫೈನಲ್ನಲ್ಲಿ ಟೀಮ್ ಇಂಡಿಯಾಗೆ ಸೋಲುಣಿಸಿದ ಏಕೈಕ ತಂಡ ಎನಿಸಿಕೊಂಡಿರುವ ಶ್ರೀಲಂಕಾ ಇದೇ ಆತ್ಮ ವಿಶ್ವಾಸದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಮತ್ತೊಂದೆಡೆ ಟೀಮ್ ಇಂಡಿಯಾ ವಿಶ್ವಕಪ್ಗೂ ಮುನ್ನ ಏಷ್ಯಕಪ್ ಕಿರೀಟ ಮುಡಿಗೇರಿಸಿಕೊಳ್ಳುವ ತವಕದಲ್ಲಿದೆ.
16ನೇ ಆವೃತ್ತಿ ಏಷ್ಯಾಕಪ್ ಫೈನಲ್ನಲ್ಲಿ ಭಾರತ ಮತ್ತು ಶ್ರೀಲಂಕಾ (India vs Sri Lanka) ತಂಡಗಳು ಮುಖಾಮುಖಿಯಾಗಲಿದೆ. ಭಾನುವಾರ ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಏಕೆಂದರೆ ಏಷ್ಯಾಕಪ್ ಇತಿಹಾಸದಲ್ಲೇ ಭಾರತ ತಂಡವು ಫೈನಲ್ನಲ್ಲಿ ಸೋತಿರುವುದು ಶ್ರೀಲಂಕಾ ವಿರುದ್ಧ ಮಾತ್ರ.
ಕಳೆದ 15 ಏಷ್ಯಾಕಪ್ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಒಟ್ಟು 10 ಬಾರಿ ಫೈನಲ್ ಆಡಿದೆ. ಈ ವೇಳೆ ಮೂರು ಬಾರಿ ಫೈನಲ್ನಲ್ಲಿ ಮುಗ್ಗರಿಸಿದೆ. ಹೀಗೆ ಸೋತು ನಿರಾಸೆ ಅನುಭವಿಸಿದ್ದು ಶ್ರೀಲಂಕಾ ವಿರುದ್ಧ ಎಂಬುದು ಇಲ್ಲಿ ಉಲ್ಲೇಖಾರ್ಹ.
1984 ರಲ್ಲಿ ಶುರುವಾದ ಏಷ್ಯಾಕಪ್ನ ಮೊದಲ ಆವೃತ್ತಿಯಲ್ಲಿ ಟೀಮ್ ಇಂಡಿಯಾ ಶ್ರೀಲಂಕಾವನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದಾದ ಬಳಿಕ 1988, 1991 ಮತ್ತು 1995 ರ ಫೈನಲ್ನಲ್ಲಿ ಲಂಕಾವನ್ನು ಬಗ್ಗು ಬಡಿದು ಭಾರತ ತಂಡವು ಏಷ್ಯಾಕಪ್ನಲ್ಲಿ ಹ್ಯಾಟ್ರಿಕ್ ಚಾಂಪಿಯನ್ಸ್ ಸಾಧನೆ ಮಾಡಿದ್ದರು.
ಆದರೆ 1997 ರಲ್ಲಿ ಭಾರತ ತಂಡಕ್ಕೆ ಸೋಲುಣಿಸುವ ಮೂಲಕ ಶ್ರೀಲಂಕಾ ಮೊದಲ ಬಾರಿ ಏಷ್ಯನ್ ಚಾಂಪಿಯನ್ ಎನಿಸಿಕೊಂಡರು. ಆ ನಂತರ 2004 ಮತ್ತು 2008 ರಲ್ಲೂ ಟೀಮ್ ಇಂಡಿಯಾಗೆ ಸೋಲುಣಿಸಿ ಶ್ರೀಲಂಕಾ ತಂಡ ಏಷ್ಯಾಕಪ್ ಮುಡಿಗೇರಿಸಿಕೊಂಡಿತು.
ಇನ್ನು 2010 ರ ಏಷ್ಯಾಲಪ್ ಫೈನಲ್ನಲ್ಲಿ ಶ್ರೀಲಂಕಾ ತಂಡಕ್ಕೆ ಸೋಲುಣಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿತ್ತು. ಇದಾದ ಬಳಿಕ ಉಭಯ ತಂಡಗಳು ಫೈನಲ್ನಲ್ಲಿ ಮುಖಾಮುಖಿಯಾಗಿಲ್ಲ. ಇದೀಗ ಬರೋಬ್ಬರಿ 13 ವರ್ಷಗಳ ಬಳಿಕ ಉಭಯ ತಂಡಗಳು ಏಷ್ಯಾಕಪ್ ಫೈನಲ್ನಲ್ಲಿ ಸೆಣಸಲು ಸಜ್ಜಾಗಿದೆ.
ಇತ್ತ ಏಷ್ಯಾಕಪ್ ಫೈನಲ್ನಲ್ಲಿ ಟೀಮ್ ಇಂಡಿಯಾಗೆ ಸೋಲುಣಿಸಿದ ಏಕೈಕ ತಂಡ ಎನಿಸಿಕೊಂಡಿರುವ ಶ್ರೀಲಂಕಾ ಇದೇ ಆತ್ಮ ವಿಶ್ವಾಸದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಮತ್ತೊಂದೆಡೆ ಟೀಮ್ ಇಂಡಿಯಾ ವಿಶ್ವಕಪ್ಗೂ ಮುನ್ನ ಏಷ್ಯಕಪ್ ಕಿರೀಟ ಮುಡಿಗೇರಿಸಿಕೊಳ್ಳುವ ತವಕದಲ್ಲಿದೆ. ಹೀಗಾಗಿ ಭಾನುವಾರ ನಡೆಯಲಿರುವ ಫೈನಲ್ ಫೈಟ್ನಲ್ಲಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ಶ್ರೀಲಂಕಾ ತಂಡ: ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಪೆರೇರ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ದುನಿತ್ ವೆಲ್ಲಾಲಗೆ, ಮಥೀಶ ಪತಿರಾಣ, ಕಸುನ್ ರಜಿತ, ದುಶನ್ ಹೇಮಂತ, ಬಿನೂರ ಫರ್ನಾಂಡೊ, ಪ್ರಮೋದ್ ಮಧುಶನ್.
ಇದನ್ನೂ ಓದಿ: ಕಿಂಗ್ ಕೊಹ್ಲಿಯ 1 ಶತಕಕ್ಕೆ 10 ದಾಖಲೆಗಳು ಉಡೀಸ್..!
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.
Published On - 5:34 pm, Sat, 16 September 23