Asia Cup 2023: ಭಾರತ vs ಶ್ರೀಲಂಕಾ ನಡುವೆ ಫೈನಲ್ ಫೈಟ್

India vs Sri Lanka Final: ಸೆಪ್ಟೆಂಬರ್ 17 ರಂದು ಭಾರತ ಮತ್ತು ಶ್ರೀಲಂಕಾ ನಡುವೆ ಫೈನಲ್ ಪಂದ್ಯ ನಡೆಯಲಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸದಲ್ಲಿದೆ.

Asia Cup 2023: ಭಾರತ vs ಶ್ರೀಲಂಕಾ ನಡುವೆ ಫೈನಲ್ ಫೈಟ್
India vs Sri Lanka
Follow us
| Updated By: ಝಾಹಿರ್ ಯೂಸುಫ್

Updated on:Sep 15, 2023 | 1:22 AM

ಏಷ್ಯಾಕಪ್​ನ ಸೂಪರ್ ಫೋರ್ ಹಂತದ 5ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಶ್ರೀಲಂಕಾ ತಂಡ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಶ್ರೀಲಂಕಾ ತಂಡ ಫೈನಲ್​ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಅದರಂತೆ ಸೆಪ್ಟೆಂಬರ್ 17 ರಂದು ನಡೆಯಲಿರುವ ಫೈನಲ್ ಫೈಟ್​ನಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ.

ಇದಕ್ಕೂ ಮುನ್ನ ಭಾರತ ತಂಡವು ಸೂಪರ್-4 ಹಂತದ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಫೈನಲ್​ಗೆ ಪ್ರವೇಶಿಸಿತ್ತು. ಇದಾಗ್ಯೂ ಶುಕ್ರವಾರ ನಡೆಯಲಿರುವ ಸೂಪರ್-4 ಹಂತದ ಕೊನೆಯ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ. ಹೀಗಾಗಿ ಈ ಪಂದ್ಯದಿಂದ ಸ್ಟಾರ್ ಆಟಗಾರರು ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.

ಕನಸಾಗಿಯೇ ಉಳಿದ ಭಾರತ-ಪಾಕ್ ಫೈನಲ್ ಫೈಟ್:

ಏಷ್ಯಾಕಪ್​ ಇತಿಹಾಸದಲ್ಲೇ ಇದುವರೆಗೆ ಭಾರತ ಮತ್ತು ಪಾಕಿಸ್ತಾನ್ ಫೈನಲ್ ಆಡಿಲ್ಲ. ಆದರೆ ಈ ಬಾರಿ ಸಾಂಪ್ರದಾಯಿಕ ಎದುರಾಳಿಗಳ ನಡುವಣ ಅಂತಿಮ ಹಣಾಹಣಿಯನ್ನು ನಿರೀಕ್ಷಿಸಲಾಗಿತ್ತು. ಏಕೆಂದರೆ ಶ್ರೀಲಂಕಾ ವಿರುದ್ಧ ಗೆದ್ದರೆ ಪಾಕಿಸ್ತಾನ್ ಹಾಗೂ ಭಾರತ ಫೈನಲ್​ನಲ್ಲಿ ಮುಖಾಮುಖಿಯಾಗುವ ಸಾಧ್ಯತೆಯಿತ್ತು. ಆದರೆ ನಿರ್ಣಾಯಕ ಪಂದ್ಯದಲ್ಲಿ ಬಾಬರ್ ಪಡೆ ಮುಗ್ಗರಿಸಿದೆ. ಇದರೊಂದಿಗೆ 16ನೇ ಆವೃತ್ತಿಯಲ್ಲೂ ಭಾರತ-ಪಾಕಿಸ್ತಾನ್ ನಡುವಣ ಫೈನಲ್ ಫೈಟ್​ನ ನಿರೀಕ್ಷೆ ಹುಸಿಯಾಗಿದೆ.

ಏಷ್ಯಾಕಪ್ ಫೈನಲ್ ಯಾವಾಗ?

ಸೆಪ್ಟೆಂಬರ್ 17 ರಂದು ಭಾರತ ಮತ್ತು ಶ್ರೀಲಂಕಾ ನಡುವೆ ಫೈನಲ್ ಪಂದ್ಯ ನಡೆಯಲಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸದಲ್ಲಿದೆ.

ಶ್ರೀಲಂಕಾ ತಂಡ: ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಪೆರೇರ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಗೆ, ಮಥೀಶ ಪತಿರಾಣ, ಕಸುನ್ ರಜಿತ, ದುಶನ್ ಹೇಮಂತ, ಬಿನೂರ ಫರ್ನಾಂಡೊ, ಪ್ರಮೋದ್ ಮಧುಶನ್.

ಇದನ್ನೂ ಓದಿ: ಕಿಂಗ್ ಕೊಹ್ಲಿಯ 1 ಶತಕಕ್ಕೆ 10 ದಾಖಲೆಗಳು ಉಡೀಸ್..!

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.

ಏಷ್ಯಾಕಪ್ ವಿನ್ನರ್ – ರನ್ನರ್ ತಂಡಗಳ ಪಟ್ಟಿ ಹೀಗಿದೆ:

1984 ರಿಂದ 2023 ರವರೆಗಿನ ಏಷ್ಯಾಕಪ್ ವಿಜೇತರ ಪಟ್ಟಿ
ವರ್ಷ ವಿಜೇತ ತಂಡ ರನ್ನರ್ ಅಪ್ ತಂಡ  ಪಂದ್ಯ ನಡೆದ ಸ್ಥಳ
1984 ಭಾರತ ಶ್ರೀಲಂಕಾ ಯುಎಇ
1986 ಶ್ರೀಲಂಕಾ ಪಾಕಿಸ್ತಾನ್ ಶ್ರೀಲಂಕಾ
1988 ಭಾರತ ಶ್ರೀಲಂಕಾ ಬಾಂಗ್ಲಾದೇಶ್
1991 ಭಾರತ ಶ್ರೀಲಂಕಾ ಭಾರತ
1995 ಭಾರತ ಶ್ರೀಲಂಕಾ ಯುಎಇ
1997 ಶ್ರೀಲಂಕಾ ಭಾರತ ಶ್ರೀಲಂಕಾ
2000 ಪಾಕಿಸ್ತಾನ್ ಶ್ರೀಲಂಕಾ ಬಾಂಗ್ಲಾದೇಶ್
2004 ಶ್ರೀಲಂಕಾ ಭಾರತ ಶ್ರೀಲಂಕಾ
2008 ಶ್ರೀಲಂಕಾ ಭಾರತ ಪಾಕಿಸ್ತಾನ
2010 ಭಾರತ ಶ್ರೀಲಂಕಾ ಶ್ರೀಲಂಕಾ
2012 ಪಾಕಿಸ್ತಾನ್ ಬಾಂಗ್ಲಾದೇಶ್ ಬಾಂಗ್ಲಾದೇಶ್
2014 ಶ್ರೀಲಂಕಾ ಪಾಕಿಸ್ತಾನ್ ಬಾಂಗ್ಲಾದೇಶ್
2016 ಭಾರತ ಬಾಂಗ್ಲಾದೇಶ್ ಬಾಂಗ್ಲಾದೇಶ್
2018 ಭಾರತ ಬಾಂಗ್ಲಾದೇಶ್ ಯುಎಇ
2022 ಶ್ರೀಲಂಕಾ ಪಾಕಿಸ್ತಾನ್ ಯುಎಇ

Published On - 1:06 am, Fri, 15 September 23

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ