ಭಾರತ vs ಶ್ರೀಲಂಕಾ ಮುಖಾಮುಖಿ: ಯಾರು ಬಲಿಷ್ಠ..?

Asia Cup 2023: ಏಷ್ಯಾಕಪ್​ನಲ್ಲಿ ಭಾರತ ಮತ್ತು ಶ್ರೀಲಂಕಾ 8 ಬಾರಿ ಫೈನಲ್​ನಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಭಾರತ ತಂಡವು 5 ಬಾರಿ ಜಯ ಸಾಧಿಸಿದರೆ, ಶ್ರೀಲಂಕಾ ತಂಡವು 3 ಬಾರಿ ಟೀಮ್ ಇಂಡಿಯಾಗೆ ಸೋಲುಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಅಂಕಿ ಅಂಶಗಳ ಪ್ರಕಾರ ಲಂಕಾ ತಂಡದಿಂದ ಅಂತಿಮ ಹಣಾಹಣಿಯಲ್ಲಿ ಭರ್ಜರಿ ಪೈಪೋಟಿ ಎದುರಾಗಬಹುದು.

ಭಾರತ vs ಶ್ರೀಲಂಕಾ ಮುಖಾಮುಖಿ: ಯಾರು ಬಲಿಷ್ಠ..?
India vs Sri Lanka
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 16, 2023 | 7:59 PM

ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ 8ನೇ ಬಾರಿ ಚಾಂಪಿಯನ್ ಪಟ್ಟಕ್ಕೇರುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಏಕೆಂದರೆ ಏಕದಿನ ಕ್ರಿಕೆಟ್​ನಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡವು ಪಾರುಪತ್ಯ ಮೆರೆಯುತ್ತಾ ಬಂದಿದೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು.

ಭಾರತ ಮತ್ತು ಶ್ರೀಲಂಕಾ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ 166 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಶ್ರೀಲಂಕಾ ಗೆದ್ದಿರುವುದು ಕೇವಲ 57 ಪಂದ್ಯಗಳಲ್ಲಿ ಮಾತ್ರ. ಇದೇ ವೇಳೆ ಭಾರತ ತಂಡವು ಬರೋಬ್ಬರಿ 97 ಮ್ಯಾಚ್​ಗಳಲ್ಲಿ ಲಂಕಾ ತಂಡವನ್ನು ಬಗ್ಗು ಬಡಿದಿದೆ. ಇನ್ನು 11 ಪಂದ್ಯಗಳು ರದ್ದಾರೆ, 1 ಮ್ಯಾಚ್ ಟೈ ಆಗಿತ್ತು.

ಹಾಗೆಯೇ ಕೊನೆಯ 6 ಮುಖಾಮುಖಿಯಲ್ಲಿ ಟೀಮ್ ಇಂಡಿಯಾ ಐದರಲ್ಲಿ ಜಯ ಸಾಧಿಸಿದರೆ, ಶ್ರೀಲಂಕಾ ಗೆದ್ದಿರುವುದು ಕೇವಲ 1 ಪಂದ್ಯದಲ್ಲಿ ಮಾತ್ರ. ಅಂದರೆ ಇಲ್ಲಿ ಲಂಕಾ ಪಡೆಯ ವಿರುದ್ಧ ಟೀಮ್ ಇಂಡಿಯಾ ಮೇಲುಗೈ ಹೊಂದಿರುವುದು ಸ್ಪಷ್ಟ.

ಏಷ್ಯಾಕಪ್​ ಫೈನಲ್ ಫೈಟ್:

ಏಷ್ಯಾಕಪ್​ನಲ್ಲಿ ಭಾರತ ಮತ್ತು ಶ್ರೀಲಂಕಾ 8 ಬಾರಿ ಫೈನಲ್​ನಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಭಾರತ ತಂಡವು 5 ಬಾರಿ ಜಯ ಸಾಧಿಸಿದರೆ, ಶ್ರೀಲಂಕಾ ತಂಡವು 3 ಬಾರಿ ಟೀಮ್ ಇಂಡಿಯಾಗೆ ಸೋಲುಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಅಂಕಿ ಅಂಶಗಳ ಪ್ರಕಾರ ಲಂಕಾ ತಂಡದಿಂದ ಅಂತಿಮ ಹಣಾಹಣಿಯಲ್ಲಿ ಭರ್ಜರಿ ಪೈಪೋಟಿ ಎದುರಾಗಬಹುದು.

ಲಂಕಾ ಪಡೆಗೆ ಪ್ಲಸ್ ಪಾಯಿಂಟ್:

ಏಷ್ಯಾಕಪ್​ನ ಫೈನಲ್ ಪಂದ್ಯವು ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿರುವುದು ಶ್ರೀಲಂಕಾ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಒಂದೆಡೆ ತವರಿನ ಅಭಿಮಾನಿಗಳ ಬೆಂಬಲದೊಂದಿಗೆ ತವರು ಪಿಚ್​ನಲ್ಲಿ ಶ್ರೀಲಂಕಾ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದೆ.

ಅದರಲ್ಲೂ ಸೂಪರ್-4 ಹಂತದಲ್ಲಿ ಇದೇ ಮೈದಾನದಲ್ಲಿ ಟೀಮ್ ಇಂಡಿಯಾವನ್ನು ಶ್ರೀಲಂಕಾ ತಂಡ 213 ರನ್​ಗಳಿಗೆ ಆಲೌಟ್ ಮಾಡಿತ್ತು. ಇದಾಗ್ಯೂ ಬೌಲರ್​ಗಳ ಸಾಂಘಿಕ ಪ್ರದರ್ಶನದಿಂದಾಗಿ ಈ ಪಂದ್ಯದಲ್ಲಿ ಭಾರತ ತಂಡವು 41 ರನ್​ಗಳಿಂದ ಜಯ ಸಾಧಿಸಿತ್ತು. ಇದೀಗ ಇದೇ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯುತ್ತಿರುವುದರಿಂದ ಶ್ರೀಲಂಕಾ ತಂಡದಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಯಾರು ಬಲಿಷ್ಠ?

ಇಲ್ಲಿ ಒಟ್ಟಾರೆ ಅಂಕಿ ಅಂಶಗಳ ಪ್ರಕಾರ ಟೀಮ್ ಇಂಡಿಯಾ ಬಲಿಷ್ಠ ಎಂಬುದು ಸ್ಪಷ್ಟ. ಇದಾಗ್ಯೂ ತವರು ಮೈದಾನದ ಬೆಂಬಲ ಶ್ರೀಲಂಕಾ ತಂಡಕ್ಕಿರಲಿದೆ. ಅದರಲ್ಲೂ ಕೆಲ ಆಟಗಾರರಿಗೆ ಕೊಲಂಬೊ ತವರು ಪಿಚ್​. ಹೀಗಾಗಿ ಲಂಕಾ ಪಡೆಯಿಂದ ಕಠಿಣ ಪೈಪೋಟಿ ಎದುರಾಗುವ ಸಾಧ್ಯತೆಯಿದೆ.

ಶ್ರೀಲಂಕಾ ತಂಡ: ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಪೆರೇರ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ದುನಿತ್ ವೆಲ್ಲಾಲಗೆ, ಮಥೀಶ ಪತಿರಾಣ, ಕಸುನ್ ರಜಿತ, ದುಶನ್ ಹೇಮಂತ, ಬಿನೂರ ಫರ್ನಾಂಡೊ, ಪ್ರಮೋದ್ ಮಧುಶನ್.

ಇದನ್ನೂ ಓದಿ: ಕಿಂಗ್ ಕೊಹ್ಲಿಯ 1 ಶತಕಕ್ಕೆ 10 ದಾಖಲೆಗಳು ಉಡೀಸ್..!

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ