Asia Cup 2023: ಇಶಾನ್ ಕಿಶನ್ಗೆ ಬ್ಯಾಟಿಂಗ್ ಕ್ರಮಾಂಕ ಫಿಕ್ಸ್
Asia Cup 2023: ಯುವ ಎಡಗೈ ದಾಂಡಿಗನನ್ನು ಆರಂಭಿಕನಾಗಿ ಕಣಕ್ಕಿಳಿಸಿದರೆ ಇಡೀ ತಂಡದ ಬ್ಯಾಟಿಂಗ್ ಕ್ರಮಾಂಕ ಬದಲಾಗಲಿದೆ. ಹೀಗಾಗಿ ಕೆಎಲ್ ರಾಹುಲ್ ಅವರಿಗೆ ಮೀಸಲಾಗಿದ್ದ ಸ್ಥಾನದಲ್ಲೇ ಇಶಾನ್ ಅವರನ್ನು ಕಣಕ್ಕಿಳಿಸಲು ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಭರ್ಜರಿ ಪ್ಲ್ಯಾನ್ ರೂಪಿಸಿದ್ದಾರೆ.
ಸೆಪ್ಟೆಂಬರ್ 2 ರಂದು ಶ್ರೀಲಂಕಾದಲ್ಲಿ ನಡೆಯಲಿರುವ ಪಾಕಿಸ್ತಾನ್ ವಿರುದ್ಧದ ಪಂದ್ಯದ ಮೂಲಕ ಟೀಮ್ ಇಂಡಿಯಾ (Team India) ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಆದರೆ ಈ ಪಂದ್ಯದಿಂದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಹೊರಗುಳಿದಿದ್ದಾರೆ. ಹೀಗಾಗಿ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ. ಅಂದರೆ ಇಲ್ಲಿ ರಾಹುಲ್ ಬದಲಿಗೆ ಇಶಾನ್ ಕಿಶನ್ ಕಣಕ್ಕಿಳಿಯುವುದು ಖಚಿತ ಎನ್ನಬಹುದು.
ಏಕೆಂದರೆ ಇಶಾನ್ ಕಿಶನ್ ಅವರನ್ನು ಹೊರತುಪಡಿಸಿದರೆ ಭಾರತ ತಂಡದಲ್ಲಿ ಬೇರೆ ವಿಕೆಟ್ ಕೀಪರ್ ಬ್ಯಾಟರ್ ಇಲ್ಲ. ಹೀಗಾಗಿ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಎಡಗೈ ದಾಂಡಿಗ ಕಣಕ್ಕಿಳಿಯಲಿದ್ದಾರೆ. ಆದರೆ ಕಿಶನ್ ಕಣಕ್ಕಿಳಿದರೆ ಯಾವ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತ್ತು.
ಇದಕ್ಕೆ ಮುಖ್ಯ ಕಾರಣ ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಕ್ರಮಾಂಕ. ಏಕೆಂದರೆ ರಾಹುಲ್ ಏಕದಿನ ಪಂದ್ಯಗಳಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು. ಆದರೆ ಇಶಾನ್ ಕಿಶನ್ಗೆ ಮಧ್ಯಮ ಕ್ರಮಾಂಕದಲ್ಲಿ ಆಡಿದ ಅನುಭವಿಲ್ಲ.
ಅಲ್ಲದೆ ಟೀಮ್ ಇಂಡಿಯಾ ಪರ ಬಹುತೇಕ ಪಂದ್ಯಗಳಲ್ಲೂ ಆರಂಭಿಕನಾಗಿಯೇ ಕಣಕ್ಕಿಳಿದಿದ್ದಾರೆ. ಹೀಗಾಗಿ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಇಶಾನ್ ಕಿಶನ್ ಆರಂಭಿಕರಾಗುತ್ತಾರಾ ಅಥವಾ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಾರಾ ಎಂಬ ಪ್ರಶ್ನೆ ಮೂಡುವುದು ಸಹಜ.
ಆದರೆ ಇಲ್ಲಿ ಯುವ ಎಡಗೈ ದಾಂಡಿಗನನ್ನು ಆರಂಭಿಕನಾಗಿ ಕಣಕ್ಕಿಳಿಸಿದರೆ ಇಡೀ ತಂಡದ ಬ್ಯಾಟಿಂಗ್ ಕ್ರಮಾಂಕ ಬದಲಾಗಲಿದೆ. ಹೀಗಾಗಿ ಕೆಎಲ್ ರಾಹುಲ್ ಅವರಿಗೆ ಮೀಸಲಾಗಿದ್ದ ಸ್ಥಾನದಲ್ಲೇ ಇಶಾನ್ ಅವರನ್ನು ಕಣಕ್ಕಿಳಿಸಲು ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಭರ್ಜರಿ ಪ್ಲ್ಯಾನ್ ರೂಪಿಸಿದ್ದಾರೆ.
ಇದಕ್ಕಾಗಿ ಆಲೂರಿನಲ್ಲಿ ನಡೆದ ಅಭ್ಯಾಸ ಪಂದ್ಯಗಳ ವೇಳೆ ಇಶಾನ್ ಕಿಶನ್ ಅವರನ್ನು 5ನೇ ಕ್ರಮಾಂಕದಲ್ಲೇ ಕಣಕ್ಕಿಳಿಸಲಾಗಿದೆ. ಈ ವೇಳೆ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಜೊತೆ ಇಶಾನ್ ಹೆಚ್ಚು ಹೊತ್ತು ಬ್ಯಾಟಿಂಗ್ ಅಭ್ಯಾಸ ನಡೆಸಿದ್ದಾರೆ.
ಅಂದರೆ ಇಲ್ಲಿ ಹಾರ್ದಿಕ್ ಪಾಂಡ್ಯ 6ನೇ ಕ್ರಮಾಂಕದ ಬ್ಯಾಟ್ಸ್ಮನ್. ಇನ್ನು ರವೀಂದ್ರ ಜಡೇಜಾ 7ನೇ ಕ್ರಮಾಂಕದ ಆಟಗಾರ. ಇವರಿಬ್ಬರೊಂದಿಗೆ ಹೆಚ್ಚಿನ ಹೊಂದಾಣಿಕೆ ಸಾಧಿಸಲು ಅಭ್ಯಾಸದ ವೇಳೆಯೇ ಇಶಾನ್ ಕಿಶನ್ ಅವರನ್ನು 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಸಲಾಗಿದೆ.
ಹೀಗಾಗಿಯೇ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಇಶಾನ್ ಕಿಶನ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಟೀಮ್ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕದಲ್ಲೂ ಯಾವುದೇ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ.
ಇದನ್ನೂ ಓದಿ: ಏಕದಿನ ವಿಶ್ವಕಪ್ನಲ್ಲಿನ ಟೀಮ್ ಇಂಡಿಯಾದ 9 ಎದುರಾಳಿಗಳು ಇವರೇ..!
ಏಷ್ಯಾಕಪ್ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).