AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಟೀಮ್ ಇಂಡಿಯಾದ ಇಬ್ಬರು ಆಟಗಾರರ ಕಂಬ್ಯಾಕ್ ಬಹುತೇಕ ಖಚಿತ..!

Asia Cup 2023: ಈ ಬಾರಿಯ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ.

Asia Cup 2023: ಟೀಮ್ ಇಂಡಿಯಾದ ಇಬ್ಬರು ಆಟಗಾರರ ಕಂಬ್ಯಾಕ್ ಬಹುತೇಕ ಖಚಿತ..!
Team India
TV9 Web
| Edited By: |

Updated on: Aug 05, 2023 | 7:08 PM

Share

Asia Cup 2023: ಮುಂದಿನ ಎರಡು ತಿಂಗಳಲ್ಲಿ ಟೀಮ್ ಇಂಡಿಯಾ 2 ಪ್ರಮುಖ ಟೂರ್ನಿಗಳನ್ನು ಆಡಲಿದೆ. ಇದರಲ್ಲಿ ಮೊದಲು ಏಷ್ಯಾಕಪ್ ಜರುಗಿದರೆ, ಆ ಬಳಿಕ ಏಕದಿನ ವಿಶ್ವಕಪ್ ಶುರುವಾಗಲಿದೆ. ಅಂದರೆ ಈ ಎರಡೂ ಟೂರ್ನಿಗಳಿಗಾಗಿ ಟೀಮ್ ಇಂಡಿಯಾ ಬಲಿಷ್ಠ ಬಳಗವನ್ನು ರೂಪಿಸಬೇಕಿದೆ. ಹೀಗಾಗಿಯೇ ಎಲ್ಲಾ ಸ್ಟಾರ್ ಆಟಗಾರರು ಏಷ್ಯಾಕಪ್​ನಲ್ಲಿ ಕಣಕ್ಕಿಳಿಯುವುದು ಖಚಿತ. ಇನ್ನು ಏಷ್ಯಾಕಪ್​ನಲ್ಲಿ ಕಾಣಿಸಿಕೊಂಡ ಬಹುತೇಕ ಆಟಗಾರರು ಏಕದಿನ ವಿಶ್ವಕಪ್​ ತಂಡಕ್ಕೆ ಆಯ್ಕೆಯಾಗಲಿದ್ದಾರೆ.

ಏಕೆಂದರೆ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದೆ. ಅತ್ತ ಏಕದಿನ ವಿಶ್ವಕಪ್​ಗೆ ತಂಡವನ್ನು ಘೋಷಿಸಲು ಐಸಿಸಿ ವಿಧಿಸಿರುವ ಗಡುವು ಸೆಪ್ಟೆಂಬರ್ 5. ಅಂದರೆ ಏಷ್ಯಾಕಪ್ ನಡುವೆಯೇ ಭಾರತ ತಂಡ ಏಕದಿನ ವಿಶ್ವಕಪ್ ಬಳಗವನ್ನು ಪ್ರಕಟಿಸಬೇಕಿದೆ.

ಎನ್​ಸಿಎ ಶಿಬಿರ:

ಇತ್ತ ಏಷ್ಯಾಕಪ್ ಆರಂಭಕ್ಕೂ ಒಂದು ವಾರ ಮುಂಚಿತವಾಗಿ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಟೀಮ್ ಇಂಡಿಯಾಗೆ ವಿಶೇಷ ಶಿಬಿರವನ್ನು ಏರ್ಪಡಿಲಾಗಿದೆ. ಆಗಸ್ಟ್ 24 ರಿಂದ 29 ರವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಏಷ್ಯಾಕಪ್​ಗೆ ಆಯ್ಕೆಯಾಗುವ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ.

ವಿಶೇಷ ಎಂದರೆ ಈ ಶಿಬಿರದಲ್ಲಿ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಅಂದರೆ ಈ ಇಬ್ಬರು ಆಟಗಾರರು ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಚೇತರಿಕೆಯ ಅಂತಿಮ ಹಂತದಲ್ಲಿರುವ ಇಬ್ಬರೂ ಕೂಡ ಎನ್​ಸಿಎ ಶಿಬಿರದಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ.

ಕೆಎಲ್ ರಾಹುಲ್ ಅಥವಾ ಶ್ರೇಯಸ್ ಅಯ್ಯರ್ ಈಗ ಸಂಪೂರ್ಣವಾಗಿ ಫಿಟ್ ಆಗಿಲ್ಲ. ಇದಾಗ್ಯೂ ಅವರು ತಂಡದ ಪ್ರಮುಖ ಭಾಗವಾಗಿದ್ದಾರೆ. ಹೀಗಾಗಿ ಇಬ್ಬರೂ ಶಿಬಿರಕ್ಕೆ ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಅಂದರೆ ಏಷ್ಯಾಕಪ್ ಆರಂಭದ ವೇಳೆಗೆ ಈ ಇಬ್ಬರು ಆಟಗಾರರು ಫಿಟ್​ ಆಗುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರನ್ನು ಏಷ್ಯಾಕಪ್​ನಲ್ಲೂ ಎದುರು ನೋಡಬಹುದಾಗಿದೆ. ಇದೇ ಕಾರಣದಿಂದಾಗಿ ಇಬ್ಬರು ಆಟಗಾರರಿಗೆ ಎನ್​ಸಿಎ ಶಿಬಿರಕ್ಕೆ ಬುಲಾವ್ ನೀಡಲಾಗುತ್ತಿದೆ.

ಏಷ್ಯಾಕಪ್ ವೇಳಾಪಟ್ಟಿ:

  • ಆಗಸ್ಟ್ 30- ಪಾಕಿಸ್ತಾನ್ vs ನೇಪಾಳ (ಮುಲ್ತಾನ್)
  • ಆಗಸ್ಟ್ 31- ಬಾಂಗ್ಲಾದೇಶ್ vs ಶ್ರೀಲಂಕಾ (ಕ್ಯಾಂಡಿ)
  • ಸೆಪ್ಟೆಂಬರ್ 2- ಭಾರತ vs ಪಾಕಿಸ್ತಾನ್ (ಕ್ಯಾಂಡಿ)
  • ಸೆಪ್ಟೆಂಬರ್ 3- ಬಾಂಗ್ಲಾದೇಶ್ vs ಅಫ್ಘಾನಿಸ್ತಾನ್ (ಲಾಹೋರ್)
  • ಸೆಪ್ಟೆಂಬರ್ 4- ಭಾರತ vs ನೇಪಾಳ (ಕ್ಯಾಂಡಿ)
  • ಸೆಪ್ಟೆಂಬರ್ 5- ಶ್ರೀಲಂಕಾ vs ಅಫ್ಘಾನಿಸ್ತಾನ್ (ಲಾಹೋರ್)

ಇದನ್ನೂ ಓದಿ: Team India: ಶತಕ ಬಾರಿಸದೇ ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ

ಸೂಪರ್-4 ಹಂತದ ವೇಳಾಪಟ್ಟಿ:

  • ಸೆಪ್ಟೆಂಬರ್ 6- A1 Vs B2 (ಲಾಹೋರ್)
  • ಸೆಪ್ಟೆಂಬರ್ 9- B1 Vs B2 (ಕೊಲಂಬೊ)
  • ಸೆಪ್ಟೆಂಬರ್ 10- A1 Vs A2 (ಕೊಲಂಬೊ)
  • ಸೆಪ್ಟೆಂಬರ್ 12- A2 Vs B1 (ಕೊಲಂಬೊ)
  • ಸೆಪ್ಟೆಂಬರ್ 14- A1 Vs B1 (ಕೊಲಂಬೊ)
  • ಸೆಪ್ಟೆಂಬರ್ 15- A2 Vs B2 (ಕೊಲಂಬೊ)
  • ಸೆಪ್ಟೆಂಬರ್ 17- ಫೈನಲ್ ಪಂದ್ಯ (ಕೊಲಂಬೊ)
Follow Us
TV9 Web
TV9 Web

TV9 Kannada

Read More
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ