Asia Cup 2023: ಪಾಕ್ ವಿರುದ್ಧದ ಪಂದ್ಯಕ್ಕೆ ರಾಹುಲ್ ಡೌಟ್! ಖಚಿತ ಪಡಿಸಿದ ಅಗರ್ಕರ್

KL Rahul: ಏಷ್ಯಾಕಪ್​ಗೆ 17 ಸದಸ್ಯರ ಟೀಂ ಇಂಡಿಯಾವನ್ನು ಇಂದು ಅಂದರೆ ಆಗಸ್ಟ್ 21 ರಿಂದ ಬಿಸಿಸಿಐ ಪ್ರಕಟಿಸಿದೆ. ಇದರೊಂದಿಗೆ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಬಗ್ಗೆ ಇದ್ದ ಗೊಂದಲಗಳು ಕೂಡ ನಿವಾರಣೆಯಾಗಿವೆ. ಆದರೆ ಇದೀಗ ಕೇಳಿಬಂದಿರುವ ವರದಿಯ ಪ್ರಕಾರ, ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಏಷ್ಯಾಕಪ್​ನ ಆರಂಭಿಕ ಪಂದ್ಯಗಳಿಗೆ ಲಭ್ಯರಾಗುವುದು ಅನುಮಾನ ಎಂದು ವರದಿಯಾಗಿದೆ.

Asia Cup 2023: ಪಾಕ್ ವಿರುದ್ಧದ ಪಂದ್ಯಕ್ಕೆ ರಾಹುಲ್ ಡೌಟ್! ಖಚಿತ ಪಡಿಸಿದ ಅಗರ್ಕರ್
ಕೆಎಲ್ ರಾಹುಲ್
Follow us
ಪೃಥ್ವಿಶಂಕರ
|

Updated on:Aug 21, 2023 | 2:38 PM

ಬಹುನಿರೀಕ್ಷಿತ ಏಷ್ಯಾಕಪ್​ಗೆ (Asia Cup 2023) 17 ಸದಸ್ಯರ ಟೀಂ ಇಂಡಿಯಾವನ್ನು (Team India) ಇಂದು ಅಂದರೆ ಆಗಸ್ಟ್ 21 ರಿಂದ ಬಿಸಿಸಿಐ (BCCI) ಪ್ರಕಟಿಸಿದೆ. ಹೊಸದಿಲ್ಲಿಯಲ್ಲಿ ನಡೆದ ಆಯ್ಕೆ ಸಮಿತಿ ಹಾಗೂ ನಾಯಕ ರೋಹಿತ್ ಶರ್ಮಾ (Rohit Sharma) ನಡುವಿನ ಸಭೆಯ ನಂತರ, ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ (Ajit Agarkar) ಮತ್ತು ನಾಯಕ ರೋಹಿತ್ ಶರ್ಮಾ ಅವರು ಪತ್ರಿಕಾಗೋಷ್ಠಿಯಲ್ಲಿ ಏಷ್ಯಾಕಪ್‌ಗೆ ಭಾರತ ತಂಡವನ್ನು ಪ್ರಕಟಿಸಿದರು. ಈ ಮೊದಲೇ ಊಹಿಸಿದ ಹೆಸರುಗಳು ತಂಡದಲ್ಲಿ ಕಾಣಿಸಿಕೊಂಡಿವೆ. ಇದರೊಂದಿಗೆ ಕೆಎಲ್ ರಾಹುಲ್ (KL Rahul) ಹಾಗೂ ಶ್ರೇಯಸ್ ಅಯ್ಯರ್ (Shreyas Iyer) ಬಗ್ಗೆ ಇದ್ದ ಗೊಂದಲಗಳು ಕೂಡ ನಿವಾರಣೆಯಾಗಿವೆ. ಆದರೆ ಇದೀಗ ಕೇಳಿಬಂದಿರುವ ವರದಿಯ ಪ್ರಕಾರ, ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಏಷ್ಯಾಕಪ್​ನ ಆರಂಭಿಕ ಪಂದ್ಯಗಳಿಗೆ ಲಭ್ಯರಾಗುವುದು ಅನುಮಾನ ಎಂದು ವರದಿಯಾಗಿದೆ.

ಮೊದಲ ಪಂದ್ಯಕ್ಕೆ ರಾಹುಲ್ ಡೌಟ್?

ಏಷ್ಯಾಕಪ್ ವೇಳಾಪಟ್ಟಿಯ ಪ್ರಕಾರ, ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಸೆಪ್ಟೆಂಬರ್ 2 ರಂದು ಪಾಕಿಸ್ತಾನದ ವಿರುದ್ಧ ಕ್ಯಾಂಡಿಯಲ್ಲಿ ಆಡಲಿದೆ. ಆದರೆ ಈ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಅನುಮಾನವಾಗಿದೆ. ವರದಿಯ ಪ್ರಕಾರ, ಪ್ರಸ್ತುತ ಎನ್​ಸಿಎನಲ್ಲಿ ರಿಹ್ಯಾಬ್​ನಲ್ಲಿರುವ ರಾಹುಲ್ ತಮ್ಮ ಫಿಟ್ನೆಸ್ ಸಾಭೀತುಪಡಿಸುವ ಸಲುವಾಗಿ ಅಭ್ಯಾಸ ಪಂದ್ಯವನ್ನಾಡಿದ್ದರು. ಇದರಲ್ಲಿ ಯಾವುದೇ ತೊಂದರೆ ಇಲ್ಲದೆ ಬ್ಯಾಟ್ ಬೀಸಿದ ರಾಹುಲ್, ವಿಕೆಟ್ ಕೀಪಿಂಗ್​ನಲ್ಲಿ ಕೊಂಚ ತೊಂದರೆ ಎದುರಿಸಿದರು ಎಂದು ವರದಿಯಾಗಿದೆ.

Breaking news: ಏಕದಿನ ಏಷ್ಯಾಕಪ್​ಗೆ ಟೀಂ ಇಂಡಿಯಾ ಪ್ರಕಟ; ಸಂಜು ಔಟ್, ತಿಲಕ್ ಇನ್..!

ಬ್ಯಾಕ್ ಅಪ್ ಆಗಿ ಸಂಜು

ಇದಕ್ಕೆ ಪೂರಕವಾಗಿ ಪತ್ರಿಕಾಗೋಷ್ಠಿಯಲ್ಲಿ ಕೆಎಲ್ ರಾಹುಲ್ ಲಭ್ಯತೆಯ ಬಗ್ಗೆ ಮಾತನಾಡಿದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್, ಕೆಎಲ್ ರಾಹುಲ್ ಪಂದ್ಯಾವಳಿಯ ಎರಡು ಅಥವಾ ಮೂರನೇ ಪಂದ್ಯದ ವೇಳೆಗೆ ತಂಡ ಸೇರಿಕೊಳ್ಳಲಿದ್ದಾರೆ ಎಂದಿದ್ದಾರೆ. ಒಂದು ವೇಳೆ ಅಷ್ಟರಲ್ಲಿ ಕೆಎಲ್ ರಾಹುಲ್ ಪೂರ್ಣ ಫಿಟ್ ಆಗದಿದ್ದರೆ, ಅವರ ಬದಲಿಯಾಗಿ ಬ್ಯಾಕ್ ಅಪ್ ಆಟಗಾರನಾಗಿ ಆಯ್ಕೆಯಾಗಿರುವ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ.

ಶ್ರೇಯಸ್ ಫುಲ್ ಫಿಟ್

ಇನ್ನು ಶ್ರೇಯಸ್ ಅಯ್ಯರ್ ಫಿಟ್​ನೆಸ್​ ಬಗ್ಗೆ ಮಾಹಿತಿ ನೀಡಿದ ಅಜಿತ್ ಅಗರ್ಕರ್, ಶ್ರೇಯಸ್ ಅಯ್ಯರ್ ಸಂಪೂರ್ಣ ಫಿಟ್ ಆಗಿದ್ದಾರೆ. ಹೀಗಾಗಿ ಅವರು ಇಡೀ ಪಂದ್ಯಾವಳಿಗೆ ಲಭ್ಯರಿರಲಿದ್ದಾರೆ ಎಂದಿದ್ದಾರೆ.

ಏಷ್ಯಾಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಬ್ಯಾಕ್ಅಪ್).

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Mon, 21 August 23

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ