Asia Cup 2023: ಭಾರತದ ನಿರ್ಧಾರದಲ್ಲಿ ಬದಲಾವಣೆಯಿಲ್ಲ: ತಟಸ್ಥ ಸ್ಥಳದಲ್ಲಿ ಏಷ್ಯಾಕಪ್?

Asia Cup 2023: 2023 ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯಲಿದೆ. ಅಕ್ಟೋಬರ್​ನಲ್ಲಿ ಶುರುವಾಗಲಿರುವ ಏಕದಿನ ವಿಶ್ವಕಪ್​ಗೂ ಮುನ್ನ ಏಷ್ಯಾಕಪ್​ ನಡೆಸಲು ನಿರ್ಧರಿಸಲಾಗಿದೆ.

Asia Cup 2023: ಭಾರತದ ನಿರ್ಧಾರದಲ್ಲಿ ಬದಲಾವಣೆಯಿಲ್ಲ: ತಟಸ್ಥ ಸ್ಥಳದಲ್ಲಿ ಏಷ್ಯಾಕಪ್?
Asia Cup 2023
Follow us
| Updated By: ಝಾಹಿರ್ ಯೂಸುಫ್

Updated on: Feb 05, 2023 | 3:58 PM

ಏಷ್ಯಾಕಪ್ 2023 (Asia Cup 2023) ಎಲ್ಲಿ ನಡೆಯಲಿದೆ ಎಂಬುದರ ಚರ್ಚೆಗಳು ಮುಂದುವರೆದಿದೆ. ಈ ಹಿಂದೆ ಪಾಕಿಸ್ತಾನ್​​ನಲ್ಲಿ ಏಷ್ಯಾಕಪ್ ಆಯೋಜಿಸಿದರೆ ಭಾರತ ತಂಡ ಪಾಲ್ಗೊಳ್ಳುವುದಿಲ್ಲ ಎಂಬುದನ್ನು ಬಿಸಿಸಿಐ ಸ್ಪಷ್ಟಪಡಿಸಿತ್ತು. ಹೀಗಾಗಿ ತಟಸ್ಥ ಸ್ಥಳದಲ್ಲಿ ಟೂರ್ನಿಯನ್ನು ಆಯೋಜಿಸುವಂತೆ ಪಾಕ್​ ಕ್ರಿಕೆಟ್ ಮಂಡಳಿಗೆ ತಿಳಿಸಲಾಗಿತ್ತು. ಇದಾಗ್ಯೂ ಪಾಕ್​ನಲ್ಲೇ ಟೂರ್ನಿ ಆಯೋಜಿಸಲು ಪಿಸಿಬಿ ಬಯಸಿದೆ. ಆದರೆ ಫೆಬ್ರವರಿ 4, ಶನಿವಾರದಂದು ಬಹ್ರೇನ್‌ನಲ್ಲಿ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯ ನಂತರ ತಟಸ್ಥ ಸ್ಥಳದಲ್ಲಿ ಏಷ್ಯಾಕಪ್ ಆಯೋಜನೆಯ ಬಗ್ಗೆ ಚರ್ಚೆಗಳು ಮತ್ತೆ ಮುನ್ನಲೆಗೆ ಬಂದಿದೆ.

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ ಪಾಕಿಸ್ತಾನ್​ನಲ್ಲಿ ಏಷ್ಯಾಕಪ್ ಆಯೋಜಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಅಲ್ಲದೆ ಮಾರ್ಚ್​ನಲ್ಲಿ ಮತ್ತೊಂದು ಸಭೆಯನ್ನು ನಡೆಸಲು ನಿರ್ಧರಿಸಲಾಗಿದೆ. ಹೀಗಾಗಿ ಟೂರ್ನಿಯು ತಟಸ್ಥ ಸ್ಥಳದಲ್ಲಿ ನಡೆಯುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ.

ಪ್ರಸ್ತುತ ಮಾಹಿತಿ ಪ್ರಕಾರ, 2023ರ ಏಷ್ಯಾಕಪ್ ಯುಎಇನಲ್ಲಿ ನಡೆಯುವ ಸಾಧ್ಯತೆ ಹೆಚ್ಚು. ಕಳೆದ ಬಾರಿ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಟೂರ್ನಿಯನ್ನು ರಾಜಕೀಯ ಬಿಕ್ಕಿಟ್ಟಿನ ಕಾರಣ ಯುಎಇನಲ್ಲಿ ಆಯೋಜಿಸಲಾಗಿತ್ತು. ಅದರಂತೆ ಈ ಬಾರಿ ಕೂಡ ಅರಬರ ನಾಡಿನಲ್ಲಿ ಏಷ್ಯಾಕಪ್ 2023 ನಡೆಯುವ ಸಾಧ್ಯತೆಯಿದೆ.

ಇದನ್ನೂ ಓದಿ
Image
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
Image
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Image
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
Image
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ಏಷ್ಯಾ ಕಪ್ ಅಥವಾ ಅದರ ಸ್ಥಳಾಂತರದ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಮುಂದಿನ ಸಭೆಗೆ ಈ ವಿಚಾರವನ್ನು ಮುಂದೂಡಲಾಗಿದೆ. ಮುಂದಿನ ಸಭೆ ನಡೆದಾಗ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಈ ವರ್ಷದ ಮಾರ್ಚ್‌ನಲ್ಲಿ ಸಭೆ ನಡೆಯುವ ನಿರೀಕ್ಷೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಪಿಟಿಐ ವರದಿ ಪ್ರಕಾರ, ಏಷ್ಯಾ ಕಪ್ ಅನ್ನು ಪಾಕಿಸ್ತಾನದಲ್ಲಿ ಆಯೋಜಿಸಲಾಗುವುದಿಲ್ಲ. ಮಾರ್ಚ್‌ನಲ್ಲಿ ನಡೆಯಲಿರುವ ಮುಂದಿನ ಸಭೆಯಲ್ಲಿ ಹೊಸ ಸ್ಥಳದ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಲಾಗಿದೆ. ಈ ಬಗ್ಗೆ ಪಿಸಿಬಿ ತನ್ನ ನಿರ್ಧಾರವನ್ನು ಬದಲಿಸದಿದ್ದರೆ, ಭಾರತ ತಂಡ ಪಾಕಿಸ್ತಾನಕ್ಕೆ ತೆರಳಿ ಆಡುವುದಿಲ್ಲ ಎಂಬುದು ಖಚಿತ. ಇದೇ ಕಾರಣದಿಂದಾಗಿ ಪಾಕ್ ಕ್ರಿಕೆಟ್ ಮಂಡಳಿ ತನ್ನ ನಿಲುವಿನಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ.

ಇದನ್ನೂ ಓದಿ: ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಟೀಮ್ ಇಂಡಿಯಾದ 7 ಬ್ಯಾಟ್ಸ್​ಮನ್​ಗಳ ಪಟ್ಟಿ ಇಲ್ಲಿದೆ

ಪಾಕಿಸ್ತಾನದ ಪ್ರಸ್ತುತ ಆರ್ಥಿಕ ಪರಿಸ್ಥಿತಿಯು ತುಂಬಾ ಹದಗೆಟ್ಟಿದೆ. ಇಂತಹ ಸಂದರ್ಭದಲ್ಲಿ ಟೂರ್ನಿಯನ್ನು ಆಯೋಜಿಸುವುದು ಕೂಡ ಕಷ್ಟಕರ. ಹೀಗಾಗಿ ಟೂರ್ನಿ ಆಯೋಜನೆಗೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಬೇಕಾದ ಅನಿವಾರ್ಯತೆಯಲ್ಲಿದೆ. ಈಗಾಗಲೇ ಬಿಸಿಸಿಐ ಟೂರ್ನಿಯಿಂದ ಹೊರಗುಳಿದರೆ ಏಷ್ಯಾಕಪ್​ ಪ್ರಾಯೋಕತ್ವದಲ್ಲೂ ಹಿನ್ನಡೆಯಾಗಲಿದೆ. ಅಷ್ಟೇ ಅಲ್ಲದೆ ಭಾರತ ತಂಡ ಹೊರಗುಳಿದಿರುವ ಕಾರಣ, ಶ್ರೀಲಂಕಾ, ಬಾಂಗ್ಲಾದೇಶ್ ತಂಡಗಳು ಕೂಡ ಪಾಕಿಸ್ತಾನದಲ್ಲಿ ಟೂರ್ನಿ ಆಡಲು ಹಿಂದೇಟು ಹಾಕಬಹುದು. ಈ ಎಲ್ಲಾ ಕಾರಣಗಳಿಂದ ಪಾಕಿಸ್ತಾನದಲ್ಲಿ ಈ ಬಾರಿ ಏಷ್ಯಾಕಪ್ ನಡೆಯುವುದು ಅನುಮಾನ ಎಂದೇ ಹೇಳಬಹುದು.

ಏಕದಿನ ವಿಶ್ವಕಪ್​ಗೂ ಮುನ್ನ ಏಷ್ಯಾಕಪ್​: 

2023 ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯಲಿದೆ. ಅಕ್ಟೋಬರ್​ನಲ್ಲಿ ಶುರುವಾಗಲಿರುವ ಏಕದಿನ ವಿಶ್ವಕಪ್​ಗೂ ಮುನ್ನ ಏಷ್ಯಾಕಪ್​ ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಸೆಪ್ಟೆಂಬರ್​ ತಿಂಗಳಲ್ಲಿ ಏಷ್ಯಾಕಪ್ ಜರುಗುವ ಸಾಧ್ಯತೆಯಿದೆ. ಈ ಬಾರಿ ಏಕದಿನ ವಿಶ್ವಕಪ್​ಗೂ ಮುನ್ನ ಟೂರ್ನಿ ನಡೆಯುತ್ತಿರುವುದರಿಂದ 50 ಓವರ್​ಗಳ ಮಾದರಿಯಲ್ಲಿ ಏಷ್ಯಾಕಪ್ ನಡೆಯಲಿದೆ.

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ