ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್: ಏಷ್ಯಾಕಪ್ನ್ನು ಉಚಿತವಾಗಿ ಲೈವ್ ವೀಕ್ಷಿಸಬಹುದು
Asia Cup 2023: ಈ ಬಾರಿಯ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ನೇಪಾಳ ಹಾಗೂ ಪಾಕಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ. ಇನ್ನು ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧದ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.
ಏಷ್ಯಾಕಪ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಆಗಸ್ಟ್ 30 ರಿಂದ ಶುರುವಾಗಲಿರುವ ಈ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ್, ಶ್ರೀಲಂಕಾ, ನೇಪಾಳ, ಅಫ್ಘಾನಿಸ್ತಾನ್ ಹಾಗೂ ಬಾಂಗ್ಲಾದೇಶ್ ತಂಡಗಳು ಕಣಕ್ಕಿಳಿಯಲಿದೆ. ಒಟ್ಟು 13 ಪಂದ್ಯಗಳ ಈ ಟೂರ್ನಿಯ ಎಲ್ಲಾ ಮ್ಯಾಚ್ಗಳನ್ನು ಸ್ಟಾರ್ ನೆಟ್ವರ್ಕ್ ನೇರ ಪ್ರಸಾರ ಮಾಡಲಿದೆ.
ಅದರಂತೆ ಕನ್ನಡ ಸೇರಿದಂತೆ ಸ್ಟಾರ್ ಸ್ಪೋರ್ಟ್ಸ್ನ ಬಹುತೇಕ ಚಾನೆಲ್ಗಳಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್ಸ್ಟಾರ್ ಆ್ಯಪ್ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ಉಚಿತವಾಗಿ ವೀಕ್ಷಿಸಬಹುದು ಎಂದು ಸ್ಟಾರ್ ನೆಟ್ವರ್ಕ್ ತಿಳಿಸಿದೆ.
ಇದರೊಂದಿಗೆ ಡಿಸ್ನಿ ಹಾಟ್ ಸ್ಟಾರ್ ಮೊಬೈಲ್ ಆ್ಯಪ್ ಮೂಲಕ ಈ ಬಾರಿಯ ಏಷ್ಯಾಕಪ್ನ ಎಲ್ಲಾ ಪಂದ್ಯಗಳನ್ನು ವೀಕ್ಷಿಸಬಹುದು. ಇದಕ್ಕೂ ಮುನ್ನ ಜಿಯೋ ಸಿನಿಮಾ ಆ್ಯಪ್ನಲ್ಲಿ ಕ್ರಿಕೆಟ್ ಅನ್ನು ಉಚಿತ ಲೈವ್ ಸ್ಟ್ರೀಮಿಂಗ್ ಮಾಡಲಾಗಿತ್ತು. ಇದೀಗ ಜಿಯೋ ಜೊತೆ ಪೈಪೋಟಿಗೆ ಇಳಿದಿರುವ ಡಿಸ್ನಿ ಹಾಟ್ ಸ್ಟಾರ್ ಕೂಡ ಏಷ್ಯಾಕಪ್ ಅನ್ನು ಉಚಿತವಾಗಿ ಪ್ರದರ್ಶಿಸಲು ಮುಂದಾಗಿದೆ.
ಏಕದಿನ ವಿಶ್ವಕಪ್ ಕೂಡ ಫ್ರೀ:
ಏಷ್ಯಾಕಪ್ ಮುಕ್ತಾಯದ ಬೆನ್ನಲ್ಲೇ ಏಕದಿನ ವಿಶ್ವಕಪ್ ಕೂಡ ಶುರುವಾಗಲಿದೆ. ಈ ಟೂರ್ನಿಯ ಪ್ರಸಾರ ಹಕ್ಕನ್ನು ಸ್ಟಾರ್ ನೆಟ್ವರ್ಕ್ ಹೊಂದಿದ್ದು, ಅದರಂತೆ ಏಕದಿನ ವಿಶ್ವಕಪ್ನ ಎಲ್ಲಾ ಪಂದ್ಯಗಳನ್ನೂ ಕೂಡ ಡಿಸ್ನಿ ಹಾಟ್ ಸ್ಟಾರ್ ಉಚಿತವಾಗಿ ಲೈವ್ ಸ್ಟ್ರೀಮಿಂಗ್ ಮಾಡಲಿದ್ದಾರೆ.
ಏಷ್ಯಾಕಪ್ ಯಾವಾಗ ಶುರು?
ಈ ಬಾರಿಯ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ನೇಪಾಳ ಹಾಗೂ ಪಾಕಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ. ಇನ್ನು ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧದ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.
ಏಷ್ಯಾಕಪ್ ವೇಳಾಪಟ್ಟಿ ಹೀಗಿದೆ:
- ಆಗಸ್ಟ್ 30- ಪಾಕಿಸ್ತಾನ್ vs ನೇಪಾಳ (ಮುಲ್ತಾನ್)
- ಆಗಸ್ಟ್ 31- ಬಾಂಗ್ಲಾದೇಶ್ vs ಶ್ರೀಲಂಕಾ (ಕ್ಯಾಂಡಿ)
- ಸೆಪ್ಟೆಂಬರ್ 2- ಭಾರತ vs ಪಾಕಿಸ್ತಾನ್ (ಕ್ಯಾಂಡಿ)
- ಸೆಪ್ಟೆಂಬರ್ 3- ಬಾಂಗ್ಲಾದೇಶ್ vs ಅಫ್ಘಾನಿಸ್ತಾನ್ (ಲಾಹೋರ್)
- ಸೆಪ್ಟೆಂಬರ್ 4- ಭಾರತ vs ನೇಪಾಳ (ಕ್ಯಾಂಡಿ)
- ಸೆಪ್ಟೆಂಬರ್ 5- ಶ್ರೀಲಂಕಾ vs ಅಫ್ಘಾನಿಸ್ತಾನ್ (ಲಾಹೋರ್)
ಸೂಪರ್-4 ಹಂತದ ವೇಳಾಪಟ್ಟಿ:
- ಸೆಪ್ಟೆಂಬರ್ 6- A1 Vs B2 (ಲಾಹೋರ್)
- ಸೆಪ್ಟೆಂಬರ್ 9- B1 Vs B2 (ಕೊಲಂಬೊ)
- ಸೆಪ್ಟೆಂಬರ್ 10- A1 Vs A2 (ಕೊಲಂಬೊ)
- ಸೆಪ್ಟೆಂಬರ್ 12- A2 Vs B1 (ಕೊಲಂಬೊ)
- ಸೆಪ್ಟೆಂಬರ್ 14- A1 Vs B1 (ಕೊಲಂಬೊ)
- ಸೆಪ್ಟೆಂಬರ್ 15- A2 Vs B2 (ಕೊಲಂಬೊ)
- ಸೆಪ್ಟೆಂಬರ್ 17- ಫೈನಲ್ ಪಂದ್ಯ (ಕೊಲಂಬೊ)
ಇದನ್ನೂ ಓದಿ: ಜಸ್ಪ್ರೀತ್ ಬುಮ್ರಾ ಟಿ20 ತಂಡದ 11ನೇ ನಾಯಕ: ಉಳಿದ 10 ಕ್ಯಾಪ್ಟನ್ಗಳ ಪಟ್ಟಿ ಇಲ್ಲಿದೆ
ಏಷ್ಯಾಕಪ್ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).
Published On - 4:43 pm, Tue, 22 August 23