ಹಲವು ವಿವಾದಗಳ ಬಳಿಕ ಅಂತಿಮವಾಗಿ ಈ ಬಾರಿಯ ಏಷ್ಯಾಕಪ್ (Asia Cup 2023 ) ಆಗಸ್ಟ್ 30 ರಿಂದ ಆರಂಭವಾಗಲಿದೆ. ಪಾಕಿಸ್ತಾನ ಹಾಗೂ ಶ್ರೀಲಂಕಾ (Pakistan and Sri Lanka) ದೇಶಗಳು ಈ ಮೆಗಾ ಈವೆಂಟ್ಗೆ ಜಂಟಿಯಾಗಿ ಆತಿಥ್ಯವಹಿಸುತ್ತಿವೆ. ವೇಳಾಪಟ್ಟಿಯ ಪ್ರಕಾರ ಸೆಪ್ಟೆಂಬರ್ 2 ರಂದು ಭಾರತ ಮತ್ತು ಪಾಕಿಸ್ತಾನದ (India vs Pakistan) ನಡುವೆ ಹೈವೋಲ್ಟೇಜ್ ಕದನ ನಡೆಯಲ್ಲಿದೆ. ಶ್ರೀಲಂಕಾದ ಕ್ಯಾಂಡಿಯಲ್ಲಿ ಈ ಪಂದ್ಯ ನಡೆಯುತ್ತಿದ್ದು, ಪಂದ್ಯಾವಳಿಯು ಆಗಸ್ಟ್ 30 ರಂದು ಪಾಕಿಸ್ತಾನದ ಮುಲ್ತಾನ್‌ನಿಂದ ಆರಂಭವಾಗಲಿದೆ. ಏತನ್ಮಧ್ಯೆ, ಪಂದ್ಯಾವಳಿಯ ಫೈನಲ್ ಸೆಪ್ಟೆಂಬರ್ 17 ರಂದು ಕೊಲಂಬೊದಲ್ಲಿ ನಡೆಯಲಿದೆ. ಹೈಬ್ರಿಡ್ ಮಾದರಿ ಅಡಿಯಲ್ಲಿ, 13 ಪಂದ್ಯಗಳ ಪಂದ್ಯಾವಳಿಯ 4 ಪಂದ್ಯಗಳನ್ನು ಮೂಲ ಆತಿಥೇಯ ಪಾಕಿಸ್ತಾನದಲ್ಲಿ ನಡೆಯಲ್ಲಿದ್ದು, ಫೈನಲ್ ಸೇರಿದಂತೆ 9 ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲ್ಲಿವೆ.
ಪಂದ್ಯಾವಳಿಯು ಆಗಸ್ಟ್ 30 ರಂದು ಪಾಕಿಸ್ತಾನದ ಮುಲ್ತಾನ್‌ನಲ್ಲಿ ಪ್ರಾರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ನೇಪಾಳ ಹಾಗೂ ಆತಿಥೇಯ ಪಾಕಿಸ್ತಾನ ಮುಖಾಮುಖಿಯಾಗಲಿವೆ. ಪಾಕಿಸ್ತಾನದ ಉಳಿದ 3 ಪಂದ್ಯಗಳು ಲಾಹೋರ್‌ನಲ್ಲಿ ನಡೆಯಲಿವೆ. ಶ್ರೀಲಂಕಾದಲ್ಲಿ ಗುಂಪು ಹಂತದ ಪಂದ್ಯಗಳು ಕ್ಯಾಂಡಿಯಲ್ಲಿ ನಡೆಯಲಿದ್ದರೆ, ಸೂಪರ್-4 ಮತ್ತು ಫೈನಲ್ ಪಂದ್ಯ ಕೊಲಂಬೊದಲ್ಲಿ ನಡೆಯಲಿದೆ.
Asia Cup: ಏಕದಿನ ಏಷ್ಯಾಕಪ್ನಲ್ಲಿ ಪಾಕ್ ಎದುರು ಭಾರತದ್ದೇ ಪಾರುಪತ್ಯ..!
ಈ ಪಂದ್ಯಾವಳಿಯಲ್ಲಿ 6 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಪ್ರತಿಯೊಂದು ಗುಂಪು ಮೂರು ತಂಡಗಳನ್ನು ಒಳಗೊಂಡಿದೆ. ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೂಪರ್ ಫೋರ್ ಹಂತಕ್ಕೆ ಮುನ್ನಡೆಯುತ್ತವೆ. ಅಂತಿಮವಾಗಿ, ಸೂಪರ್ ಫೋರ್‌ನ ಅಗ್ರ ಎರಡು ತಂಡಗಳು ಅಂತಿಮ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಏಷ್ಯಾಕಪ್ 2023 ರ ಉಚಿತ ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ+ಹಾಟ್‌ಸ್ಟಾರ್ ಮೊಬೈಲ್ ಅಪ್ಲಿಕೇಶನ್ ಮೂಲಕ ಯಾವುದೇ ವೆಚ್ಚವಿಲ್ಲದೆ ವೀಕ್ಷಿಸಬಹುದಾಗಿದೆ. ಆದಾಗ್ಯೂ, ಈ ಉಚಿತ ಲೈವ್ ಸ್ಟ್ರೀಮಿಂಗ್ ಆಯ್ಕೆ ಕೇವಲ ಮೊಬೈಲ್ ಅಪ್ಲಿಕೇಶನ್‌ಗೆ ಮಾತ್ರ ಸೀಮಿತವಾಗಿದೆ ಎಂಬುದನ್ನು ಗಮನಿಸುವುದು ಮುಖ್ಯವಾಗಿದೆ. ಮೊಬೈಲ್ ಹೊರತುಪಡಿಸಿ ದೊಡ್ಡ ಪರದೆಗಳಲ್ಲಿ ಪಂದ್ಯಾವಳಿಯನ್ನು ಲೈವ್ ಆಗಿ ವೀಕ್ಷಿಸಲು ಚಂದಾದಾರಿಕೆ ಅಗತ್ಯ.
ಶ್ರೀಲಂಕಾ, ಅಫ್ಘಾನಿಸ್ತಾನ, ನೇಪಾಳ, ಬಾಂಗ್ಲಾದೇಶ, ಪಾಕಿಸ್ತಾನ, ಮಾಲ್ಡೀವ್ಸ್ ಮತ್ತು ಭೂತಾನ್ ಸೇರಿದಂತೆ ಭಾರತ ಮತ್ತು ಅದರ ನೆರೆಯ ಉಪಖಂಡದ ರಾಷ್ಟ್ರಗಳಲ್ಲಿ ಏಷ್ಯಾಕಪ್ 2023 ರ ನೇರ ಪ್ರಸಾರದ ಹಕ್ಕನ್ನು ಸ್ಟಾರ್ ಸ್ಪೋರ್ಟ್ಸ್ ಪಡೆದುಕೊಂಡಿದೆ. ಡಿಪಿ ವರ್ಲ್ಡ್ ಏಷ್ಯಾಕಪ್ 2023 ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 1 ಎಚ್‌ಡಿ, ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ, ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ ಎಚ್‌ಡಿ, ಸ್ಟಾರ್ ಸ್ಪೋರ್ಟ್ಸ್ ಸೆಲೆಕ್ಟ್ 1, ಸ್ಟಾರ್ ಸ್ಪೋರ್ಟ್ಸ್ ಸೆಲೆಕ್ಟ್ 1 ಎಚ್‌ಡಿ, ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ ಇತರೆ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:55 am, Thu, 24 August 23