ಫೈನಲ್ಗೂ ಮುನ್ನ ಶ್ರೀಲಂಕಾ ತಂಡಕ್ಕೆ ಬಿಗ್ ಶಾಕ್: ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್
Asia Cup 2023: ಭಾನುವಾರ (ಸೆಪ್ಟೆಂಬರ್ 17) ನಡೆಯಲಿರುವ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಚಾಂಪಿಯನ್ ಪಟ್ಟಕ್ಕಾಗಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ಏಷ್ಯಾಕಪ್ ಫೈನಲ್ ಆರಂಭಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಸ್ಪಿನ್ನರ್ ಮಹೀಶ್ ತೀಕ್ಷಣ ಗಾಯದ ತಂಡದಿಂದ ಹೊರಬಿದ್ದಿದ್ದಾರೆ. ಪಾಕಿಸ್ತಾನ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ತೀಕ್ಷಣ ಮಂಡಿರಜ್ಜು ಸಮಸ್ಯೆಗೆ ಒಳಗಾಗಿದ್ದರು. ಇದೀಗ ಗಾಯವು ಗಂಭೀರವೆಂಬ ವೈದ್ಯಕೀಯ ವರದಿ ಬಂದಿದೆ. ಹೀಗಾಗಿ ಏಷ್ಯಾಕಪ್ ಫೈನಲ್ನಲ್ಲಿ ಅವರು ಕಣಕ್ಕಿಳಿಯುವುದಿಲ್ಲ.
ಲಂಕಾ ತಂಡದ 5 ಬೌಲರ್ಗಳು ಔಟ್:
ಈ ಬಾರಿಯ ಏಷ್ಯಾಕಪ್ನಲ್ಲಿ ಶ್ರೀಲಂಕಾ ತಂಡವು ನಾಲ್ವರು ಪ್ರಮುಖ ಬೌಲರ್ಗಳ ಅನುಪಸ್ಥಿತಿಯಲ್ಲಿ ಕಣಕ್ಕಿಳಿದಿತ್ತು. ಇದಾಗ್ಯೂ ದಸುನ್ ಶಾನಕ ಪಡೆ ಫೈನಲ್ಗೇರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೀಗ ಫೈನಲ್ಗೂ ಮುನ್ನ ಮತ್ತೋರ್ವ ಆಟಗಾರನನ್ನು ಕಳೆದುಕೊಂಡಿದೆ.
ಇದಕ್ಕೂ ಮುನ್ನ ಗಾಯದ ಕಾರಣ ವನಿಂದು ಹಸರಂಗ, ಲಹಿರು ಕುಮಾರ, ದುಷ್ಮಂತ ಚಮೀರಾ ಹಾಗೂ ಮಧುಶಂಕ ಲಂಕಾ ತಂಡದಿಂದ ಹೊರುಗುಳಿದಿದ್ದರು. ಇದೀಗ 5ನೇ ಆಟಗಾರನಾಗಿ ಮಹೀಶ್ ತೀಕ್ಷಣ ಕೂಡ ಹೊರಬಿದ್ದಿರುವುದು ಶ್ರೀಲಂಕಾ ತಂಡದ ಪಾಲಿಗೆ ಹಿನ್ನಡೆಯನ್ನುಂಟು ಮಾಡಲಿದೆ.
ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್:
ಇತ್ತ ಮಹೀಶ್ ತೀಕ್ಷಣ ಹೊರಗುಳಿಯುತ್ತಿರುವ ಟೀಮ್ ಇಂಡಿಯಾ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಈ ಬಾರಿಯ ಏಷ್ಯಾಕಪ್ನಲ್ಲಿ ಶ್ರೀಲಂಕಾ ಪರ ಅತ್ಯಧಿಕ ವಿಕೆಟ್ ಬೌಲರ್ಗಳ ಪಟ್ಟಿಯಲ್ಲಿ ತೀಕ್ಷಣ 3ನೇ ಸ್ಥಾನದಲ್ಲಿದ್ದಾರೆ.
ಒಟ್ಟು 5 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮಹೀಶ್ ತೀಕ್ಷಣ 8 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ವೇಳೆ 45.1 ಓವರ್ಗಳನ್ನು ಎಸೆದಿದ್ದು 5.16 ಸರಾಸರಿಯಲ್ಲಿ ಕೇವಲ 271 ರನ್ ಮಾತ್ರ ನೀಡಿದ್ದಾರೆ. ಇದೀಗ ಫೈನಲ್ ಪಂದ್ಯದಲ್ಲಿ ಮಹೀಶ್ ತೀಕ್ಷಣ ಹೊರಗುಳಿಯುತ್ತಿರುವುದು ಭಾರತ ತಂಡದ ಪಾಲಿಗೆ ಪ್ಲಸ್ ಪಾಯಿಂಟ್ ಆಗುವುದರಲ್ಲಿ ಅನುಮಾನವೇ ಇಲ್ಲ.
ಏಷ್ಯಾಕಪ್ ಫೈನಲ್ ಯಾವಾಗ?
ಭಾನುವಾರ (ಸೆಪ್ಟೆಂಬರ್ 17) ನಡೆಯಲಿರುವ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಚಾಂಪಿಯನ್ ಪಟ್ಟಕ್ಕಾಗಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.
ಇದನ್ನೂ ಓದಿ: ಕಿಂಗ್ ಕೊಹ್ಲಿಯ 1 ಶತಕಕ್ಕೆ 10 ದಾಖಲೆಗಳು ಉಡೀಸ್..!