ಏಷ್ಯಾಕಪ್ ವೇಳಾಪಟ್ಟಿ ಬಗ್ಗೆ ಮಹತ್ವದ ನಿರ್ಧಾರ: ಭಾರತ- ಪಾಕ್ ಮುಖಾಮುಖಿ ಯಾವ ಮೈದಾನದಲ್ಲಿ? ಫೈನಲ್ ಎಲ್ಲಿ ಗೊತ್ತಾ?

Asia Cup 2023: ಈ ಹಿಂದೆ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಲೀಗ್​ ಹಂತದ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದೀಗ ಸೂಪರ್ -4 ಹಂತದಲ್ಲಿ ಈ ಎರಡು ತಂಡಗಳು ಸೆಪ್ಟೆಂಬರ್ 10 ರಂದು ಮತ್ತೆ ಮುಖಾಮುಖಿಯಾಗಲಿದ್ದು, ಈ ಪಂದ್ಯ ಕೊಲಂಬೊದಲ್ಲಿ ನಡೆಯಲಿದೆ.

ಏಷ್ಯಾಕಪ್ ವೇಳಾಪಟ್ಟಿ ಬಗ್ಗೆ ಮಹತ್ವದ ನಿರ್ಧಾರ: ಭಾರತ- ಪಾಕ್ ಮುಖಾಮುಖಿ ಯಾವ ಮೈದಾನದಲ್ಲಿ? ಫೈನಲ್ ಎಲ್ಲಿ ಗೊತ್ತಾ?
ಭಾರತ- ಪಾಕಿಸ್ತಾನ
Follow us
ಪೃಥ್ವಿಶಂಕರ
|

Updated on:Sep 06, 2023 | 7:37 AM

ಶ್ರೀಲಂಕಾದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಏಷ್ಯಾಕಪ್ (Asia Cup 2023)​ ಆಯೋಜನೆಗೆ ಹಿನ್ನಡೆಯುಂಟಾಗಿದೆ. ಈ ಕಾಂಟಿನೆಂಟಲ್ ಈವೆಂಟ್​ನ ಹೈವೋಲ್ಟೇಜ್ ಪಂದ್ಯವಾಗಿದ್ದ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯವೇ ಮಳೆಯಿಂದಾಗಿ ರದ್ದಾಗಿತ್ತು. ಇದರ ನಂತರ, ಮಳೆಯಿಂದಾಗಿ, ಏಷ್ಯಾಕಪ್‌ನ ಸೂಪರ್-4 ರೌಂಡ್ ಮತ್ತು ಫೈನಲ್‌ ಪಂದ್ಯಗಳ ಸ್ಥಳಗಳನ್ನು ಬದಲಾಹಿಸುವ ಸಾಧ್ಯತೆಗಳಿವೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದು, ಏಷ್ಯಾಕಪ್ ಪಂದ್ಯಗಳು ನಡೆಯುವ ಸ್ಥಳಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಪಂದ್ಯಗಳನ್ನು ಈ ಮೊದಲೇ ನಿರ್ಧರಿಸಿದ ಸ್ಥಳಗಳಲ್ಲಿ ಅಂದರೆ ಕೊಲಂಬೊದಲ್ಲಿಯೇ (Colombo) ಆಡಲಾಗುತ್ತದೆ ಎಂಬ ಮಾಹಿತಿ ನೀಡಿದೆ.

ಈ ಹಿಂದೆ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಲೀಗ್​ ಹಂತದ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದೀಗ ಸೂಪರ್ -4 ಹಂತದಲ್ಲಿ ಈ ಎರಡು ತಂಡಗಳು ಸೆಪ್ಟೆಂಬರ್ 10 ರಂದು ಮತ್ತೆ ಮುಖಾಮುಖಿಯಾಗಲಿದ್ದು, ಈ ಪಂದ್ಯ ಕೊಲಂಬೊದಲ್ಲಿ ನಡೆಯಲಿದೆ.

Asia Cup 2023: ಏಷ್ಯಾಕಪ್ ಸೂಪರ್-4 ಹಂತದ ಪಂದ್ಯಕ್ಕೆ ಪಾಕ್ ತಂಡ ಪ್ರಕಟ; ಸ್ಟಾರ್ ಬೌಲರ್​ಗೆ ಕೋಕ್

ಹಂಬಂಟೋಟದಲ್ಲಿ ನಡೆಯುವ ವದಂತಿ

ಪಲ್ಲೆಕೆಲೆ ಮತ್ತು ಕೊಲಂಬೊದಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಸೂಪರ್-4 ಮತ್ತು ಫೈನಲ್ ಪಂದ್ಯಗಳನ್ನು ಹಂಬಂಟೋಟಾದಲ್ಲಿ ನಡೆಸಬಹುದು ಎಂದು ಈ ಹಿಂದೆ ವರದಿಯಾಗಿತ್ತು. ಏಕೆಂದರೆ ಅಲ್ಲಿ ಹವಾಮಾನವು ಸ್ಪಷ್ಟವಾಗಿದ್ದು, ಮಳೆಯಾಗುವ ಸಾಧ್ಯತೆಗಳಿಲ್ಲದಿರುವುದರಿಂದ ಯಾವುದೇ ತೊಂದರೆಯಿಲ್ಲದೆ ಪಂದ್ಯಗಳನ್ನು ಆಯೋಜಿಸಬಹುದು ಎಂದು ವರದಿಯಾಗಿತ್ತು. ಆದರೆ ಈಗ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಎಸಿಸಿ ಸ್ಪಷ್ಟಪಡಿಸಿದೆ.

ಪಿಸಿಬಿ ಹೇಳಿದ್ದೇನು?

ಶ್ರೀಲಂಕಾದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಮತ್ತು ಎಸಿಸಿ ಅಧ್ಯಕ್ಷ ಜೈ ಶಾ ಅವರಿಗೆ ಕರೆ ಮಾಡಿ ದುಬೈನಲ್ಲಿ ಏಷ್ಯಾಕಪ್ ಪಂದ್ಯಗಳನ್ನು ಆಯೋಜಿಸುವಂತೆ ಕೇಳಿಕೊಂಡಿದ್ದೆ. ಅಲ್ಲದೆ ಶ್ರೀಲಂಕಾದ ಡಂಬುಲಾದಲ್ಲಿ ಪಂದ್ಯ ನಡೆಸುವಂತೆ ಕೇಳಿಕೊಂಡಿದ್ದೆ. ಆದರೆ ಪಿಸಿಬಿ ಮನವಿಯನ್ನು ಎಸಿಸಿ ಒಪ್ಪಿಕೊಳ್ಳಲಿಲ್ಲ. ಅಲ್ಲದೆ ಮಳೆಯ ಮುನ್ಸೂಚನೆ ಇದ್ದರೂ ಶ್ರೀಲಂಕಾದ ಉಳಿದ ಮೈದಾನಗಳನ್ನು ಪಂದ್ಯ ಆಯೋಜನೆಗೆ ಆಯ್ಕೆ ಮಾಡಲಾಗಲಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಝಾಕಾ ಅಶ್ರಫ್ ಎಸಿಸಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಭಾರತ ಪಾಕಿಸ್ತಾನ ಪಂದ್ಯದ ಮೇಲೆ ಕಣ್ಣು

ಭಾರತ ಮತ್ತು ಪಾಕಿಸ್ತಾನ ನಡುವಿನ ಲೀಗ್ ಹಂತದ ಪಂದ್ಯ ಮಳೆಯಿಂದ ರದ್ದಾಗಿತ್ತು. ಹೀಗಾಗಿ ಅಭಿಮಾನಿಗಳಿಗೆ ಇದು ಭಾರಿ ನಿರಾಸೆಯನ್ನುಂಟು ಮಾಡಿತ್ತು. ಆದರೆ ಇದೀಗ ಸೂಪರ್ 4 ಹಂತದಲ್ಲಿ ಈ ಉಭಯ ತಂಡಗಳು ಇದೇ ಸೆಪ್ಟೆಂಬರ್ 10 ರಂದು ಮತ್ತೊಮ್ಮೆ ಮುಖಾಮುಖಿಯಾಗಲಿವೆ. ಈ ಬಾರಿಯಾದರೂ ಮಳೆಯಿಂದಾಗಿ ಪಂದ್ಯ ರದ್ದಾಗದಿರಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:35 am, Wed, 6 September 23

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?