ಬದಲಾಗುತ್ತಾ ಕೊಹ್ಲಿಯ ಬ್ಯಾಟಿಂಗ್ ಕ್ರಮಾಂಕ? ತಂಡದ ತರಬೇತಿ ಶಿಬಿರದಲ್ಲಿ ಸಿಕ್ತು ಉತ್ತರ

Asia Cup 2023: ಈ ಹಿಂದೆ ವಿರಾಟ್ ಕೊಹ್ಲಿ ನಂಬರ್-4ರಲ್ಲಿ ಬ್ಯಾಟಿಂಗ್ ಮಾಡಬೇಕು ಎಂದು ಹಲವು ತಜ್ಞರು ಸಲಹೆ ನೀಡಿದ್ದರು. ಆದರೆ ಶಿಬಿರದಲ್ಲಿ ಕೊಹ್ಲಿ ತಮ್ಮ ಎಂದಿನ ಕ್ರಮಾಂಕದಲ್ಲಿ ಅಭ್ಯಾಸ ನಡೆಸಿರುವುದರಿಂದ ಟೀಂ ಇಂಡಿಯಾ ಯಾವುದೇ ಬದಲಾವಣೆ ಮಾಡುವ ಮೂಡ್​ನಲ್ಲಿಲ್ಲ ಎನ್ನಿಸುತ್ತಿದೆ.

ಬದಲಾಗುತ್ತಾ ಕೊಹ್ಲಿಯ ಬ್ಯಾಟಿಂಗ್ ಕ್ರಮಾಂಕ? ತಂಡದ ತರಬೇತಿ ಶಿಬಿರದಲ್ಲಿ ಸಿಕ್ತು ಉತ್ತರ
ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್
Follow us
ಪೃಥ್ವಿಶಂಕರ
|

Updated on: Aug 26, 2023 | 11:40 AM

ಸದ್ಯ ಭಾರತ ಕ್ರಿಕೆಟ್ ತಂಡದ (Team India) ತರಬೇತಿ ಶಿಬಿರ ಬೆಂಗಳೂರಿನ ಆಲೂರಿನಲ್ಲಿ ನಡೆಯುತ್ತಿದೆ. ಈ ಶಿಬಿರದಲ್ಲಿ ಏಷ್ಯಾಕಪ್ (Asia Cup 2023) ತಂಡಕ್ಕೆ ಆಯ್ಕೆಯಾಗಿರುವ ಆಟಗಾರರು ಭಾಗವಹಿಸುತ್ತಿದ್ದಾರೆ. ಈ ಶಿಬಿರದಲ್ಲಿ ಎಲ್ಲರ ಕಣ್ಣು ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ವಾಪಸಾಗುತ್ತಿರುವ ಕೆಎಲ್ ರಾಹುಲ್ (KL Rahul) ಮತ್ತು ಶ್ರೇಯಸ್ ಅಯ್ಯರ್ (Shreyas Iyer) ಮೇಲಿದ್ದು, ನಾಯಕ ರೋಹಿತ್ (Rohit Sharma) ಮತ್ತು ಕೋಚ್ ದ್ರಾವಿಡ್ (Rahul Dravid) ಈ ಇಬ್ಬರ ಆಟದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಇನ್ನು ಈ ಶಿಬಿರ ಆರಂಭಕ್ಕೂ ಮುನ್ನ ಎಲ್ಲಾ ಆಟಗಾರರು ಫಿಟ್ನೆಸ್ ಪರೀಕ್ಷೆ ನಡೆಸಿದ್ದರು. ಅದರಲ್ಲಿ ಕೆಲವರ ಫಲಿತಾಂಶ ಕೂಡ ಹೊರಬಿದ್ದಿತ್ತು. ಇದೀಗ ಕ್ರಿಕ್‌ಬಜ್ ವರದಿ ಮಾಡಿರುವ ಪ್ರಕಾರ, ಇಂಜುರಿಯಿಂದ ಚೇತರಿಸಿಕೊಂಡು ತಂಡ ಸೇರಿರುವ ರಾಹುಲ್ ಮತ್ತು ಅಯ್ಯರ್ ಅವರ ಫಿಟ್‌ನೆಸ್ ಪರೀಕ್ಷೆ ನಡೆದಿಲ್ಲ ಎಂದು ತಿಳಿದುಬಂದಿದೆ. ಅಲ್ಲದೆ ಟೀಂ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕ ಹೇಗಿರಲಿದೆ ಎಂಬ ಸೂಚನೆಗಳೂ ಸಹ ಈ ಶಿಬಿರದಲ್ಲಿ ಸಿಕ್ಕಿವೆ.

ಶಿಬಿರದ ಮೊದಲು ತಮ್ಮ ಫಿಟ್ನೆಸ್ ಪರೀಕ್ಷಿಸಲು ಎಲ್ಲಾ ಆಟಗಾರರು ಯೋ-ಯೋ ಟೆಸ್ಟ್​ಗೆ ಒಳಗಾಗಿದ್ದರು. ಆದರೆ ರಾಹುಲ್ ಮತ್ತು ಅಯ್ಯರ್ ಈ ಪರೀಕ್ಷೆಗೆ ಒಳಗಾಗಿರಲಿಲ್ಲ. ಕ್ರಿಕ್‌ಬಜ್ ವರದಿ ಮಾಡಿರುವ ಪ್ರಕಾರ ರಾಹುಲ್ ಮತ್ತು ಅಯ್ಯರ್ ನಂತರ ಯೋ-ಯೋ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ. ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ತಿಲಕ್ ವರ್ಮಾ ಮತ್ತು ಸಂಜು ಸ್ಯಾಮ್ಸನ್ ಸೇರಿದಂತೆ ಐರ್ಲೆಂಡ್ ಪ್ರವಾಸಕ್ಕೆ ತೆರಳಿದ್ದ ಹಲವು ಆಟಗಾರರು ಈ ಶಿಬಿರದಲ್ಲಿಲ್ಲ. ಇನ್ನೆರಡು ದಿನಗಳಲ್ಲಿ ಎಲ್ಲರೂ ಶಿಬಿರಕ್ಕೆ ಬರಲಿದ್ದು, ಆ ನಂತರ ಅವರೆಲ್ಲರಿಗೂ ಯೋ-ಯೋ ಪರೀಕ್ಷೆ ನಡೆಯಲಿದೆ ಎಂದು ವರದಿಯಾಗಿದೆ.

ಏಷ್ಯಾಕಪ್ ವೀಕ್ಷಿಸಲು ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಬಿಸಿಸಿಐನ ಉನ್ನತ ಅಧಿಕಾರಿಗಳು! ವರದಿ

ಪಕ್ಕಾ ಆಯ್ತು ಟಾಪ್ ಆರ್ಡರ್

ಶುಕ್ರವಾರ ನಡೆದ ಶಿಬಿರದಲ್ಲಿ ಎಲ್ಲರೂ ಕಠಿಣ ಅಭ್ಯಾಸ ನಡೆಸಿದರು. ಇದರೊಂದಿಗೆ ತಂಡದ ಬ್ಯಾಟಿಂಗ್ ಕ್ರಮಾಂಕ ಹೇಗರಲಿದೆ ಎಂಬುದಕ್ಕೆ ಕೆಲವು ಸೂಚನೆಗಳೂ ಸಿಕ್ಕಿವೆ. ಭಾರತದ ಬ್ಯಾಟ್ಸ್‌ಮನ್‌ಗಳು ಜೋಡಿಯಾಗಿ ಅಭ್ಯಾಸ ನಡೆಸಿದರು. ಇದರಲ್ಲಿ ಮೊದಲಿಗೆ, ರೋಹಿತ್ ಶರ್ಮಾ ಮತ್ತು ಶುಭ್​ಮನ್ ಗಿಲ್ ಜೋಡಿ ಹೊಸ ಚೆಂಡಿನೊಂದಿಗೆ ಬ್ಯಾಟಿಂಗ್ ಅಭ್ಯಾಸ ಮಾಡಿತು. ಇಬ್ಬರೂ ಕೂಡ ವೇಗದ ಬೌಲರ್‌ಗಳು, ಆ ನಂತರ ಸ್ಪಿನ್ನರ್‌ಗಳನ್ನು ಎದುರಿಸಿದರು. ಇದಾದ ಬಳಿಕ ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಹಾಗೂ ಅಯ್ಯರ್ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದರು. ಇಬ್ಬರೂ ಮೊಹಮ್ಮದ್ ಶಮಿ ಮತ್ತು ಯಶ್ ದಯಾಳ್ ಅವರ ಎಸೆತಗಳನ್ನು ಎದುರಿಸಿದರು.

ಬ್ಯಾಟಿಂಗ್ ಕ್ರಮಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ

ಈ ಮೂಲಕ ಟೀಂ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕದಲ್ಲಿ ಹೆಚ್ಚು ಬದಲಾವಣೆ ಇರುವುದಿಲ್ಲ ಎಂಬುದು ಶಿಬಿರದಲ್ಲಿ ಖಚಿತವಾಗಿದೆ. ಈ ಹಿಂದೆ ವಿರಾಟ್ ಕೊಹ್ಲಿ ನಂಬರ್-4ರಲ್ಲಿ ಬ್ಯಾಟಿಂಗ್ ಮಾಡಬೇಕು ಎಂದು ಹಲವು ತಜ್ಞರು ಸಲಹೆ ನೀಡಿದ್ದರು. ಆದರೆ ಶಿಬಿರದಲ್ಲಿ ಕೊಹ್ಲಿ ತಮ್ಮ ಎಂದಿನ ಕ್ರಮಾಂಕದಲ್ಲಿ ಅಭ್ಯಾಸ ನಡೆಸಿರುವುದರಿಂದ ಟೀಂ ಇಂಡಿಯಾ ಯಾವುದೇ ಬದಲಾವಣೆ ಮಾಡುವ ಮೂಡ್​ನಲ್ಲಿಲ್ಲ ಎನ್ನಿಸುತ್ತಿದೆ. ಅದೇ ಸಮಯದಲ್ಲಿ, ಭಾರತದ ಆರಂಭಿಕ ಜೋಡಿ ಬಗ್ಗೆ ಮಾಡಲಾಗುತ್ತಿದ್ದ ಊಹಾಪೋಹಗಳಿಗೂ ತೆರೆ ಎಳೆಯಲಾಗಿದೆ.

ಇನ್ನು ಸೆಪ್ಟೆಂಬರ್ 2 ಅಥವಾ 3ನೇ ದಿನಾಂಕದೊಳಗೆ ರಾಹುಲ್ ಫಿಟ್ ಆಗಿ ತಂಡಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಏಷ್ಯಾಕಪ್​ಗೆ ತಂಡವನ್ನು ಪ್ರಕಟಿಸುವ ವೇಳೆ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಹೇಳಿದ್ದರು. ಅವರ ಹೇಳಿಕೆಯ ಪ್ರಕಾರ, ರಾಹುಲ್, ಸೆಪ್ಟೆಂಬರ್ 2 ರಂದು ನಡೆಯಲ್ಲಿರುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಆಡುವುದು ಕಷ್ಟ ಎಂಬುದು ಖಚಿತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಇಶಾನ್ ಕಿಶನ್ ತಂಡಕ್ಕೆ ಆಯ್ಕಯಾಗುವುದು ಖಚಿತ. ಆದರೆ ಅವರು ಯಾವ ಕ್ರಮಾಂಕದಲ್ಲಿ ಆಡುತ್ತಾರೆ ಎಂಬುದು ಇನ್ನು ಪಕ್ಕಾ ಆಗಿಲ್ಲ.

ಕಠಿಣ ಅಭ್ಯಾಸ ನಡೆಸಿದ ರಾಹುಲ್

ಇಶಾನ್ ಕಿಶನ್, ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಅವರೊಂದಿಗೆ ವಿಕೆಟ್ ಕೀಪಿಂಗ್ ಅಭ್ಯಾಸ ನಡೆಸಿದರು. ಇವರಲ್ಲದೆ ರಾಹುಲ್, ಸೂರ್ಯಕುಮಾರ್ ಯಾದವ್ ಜೊತೆ ಜೋಡಿಯಾಗಿ ಅಭ್ಯಾಸ ನಡೆಸಿದರು. ಸುಮಾರು ಒಂದು ಗಂಟೆ ಕಾಲ ರಾಹುಲ್ ಬ್ಯಾಟಿಂಗ್ ಮಾಡಿದರು. ಮೊದಲು ವೇಗಿಗಳನ್ನು ಎದುರಿಸಿದ ರಾಹುಲ್, ಆನಂತರ ಸ್ಪಿನ್ನರ್‌ಗಳ ವಿರುದ್ಧ ಸ್ವೀಪ್ ಮತ್ತು ರಿವರ್ಸ್ ಸ್ವೀಪ್ ಆಡಿದರು. ನಾಯಕ ರೋಹಿತ್ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ರಾಹುಲ್ ಬ್ಯಾಟಿಂಗ್ ಮೇಲೆ ತೀವ್ರ ನಿಗಾ ಇರಿಸಿದ್ದರು. ಅಭ್ಯಾಸದ ನಂತರ ರಾಹುಲ್ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಅವರೊಂದಿಗೆ ಮಾತನಾಡುತ್ತಿರುವುದು ಕಂಡುಬಂತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ