ಭಾರತ-ಪಾಕ್ ಪಂದ್ಯ ರದ್ದು: ಸೂಪರ್-4 ಹಂತಕ್ಕೇರಿದ ಪಾಕಿಸ್ತಾನ್

Pakistan vs India: ಆರಂಭಿಕ ಆಟಗಾರ ರೋಹಿತ್ ಶರ್ಮಾ (11) ಶಾಹೀನ್ ಅಫ್ರಿದಿ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ (4) ಕೂಡ ಅಫ್ರಿದಿಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಶುಭ್​ಮನ್ ಗಿಲ್ (6) ವಿಕೆಟ್ ಪಡೆದು ಹ್ಯಾರಿಸ್ ರೌಫ್ ಪಾಕ್ ತಂಡಕ್ಕೆ 3ನೇ ಯಶಸ್ಸು ತಂದುಕೊಟ್ಟರು. ಆ ನಂತರ ಬಂದ ಶ್ರೇಯಸ್ ಅಯ್ಯರ್ ವೇಗವಾಗಿ 14 ರನ್ ಬಾರಿಸಿದರೂ ಹೆಚ್ಚು ಹೊತ್ತು ನಿಲ್ಲಲಿಲ್ಲ.

ಭಾರತ-ಪಾಕ್ ಪಂದ್ಯ ರದ್ದು: ಸೂಪರ್-4 ಹಂತಕ್ಕೇರಿದ ಪಾಕಿಸ್ತಾನ್
Pakistan vs India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 02, 2023 | 10:25 PM

ಭಾರತ-ಪಾಕಿಸ್ತಾನ್ (India vs Pakistan) ನಡುವಣ​ ಪಂದ್ಯವು ಮಳೆಗೆ ಅಹುತಿಯಾಗಿದೆ. ಶ್ರೀಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ದ್ವಿತೀಯ ಇನಿಂಗ್ಸ್​ ವೇಳೆ ಧಾರಾಕಾರ ಮಳೆ ಸುರಿದಿದ್ದು, ಹೀಗಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಪಾಕ್ ವೇಗಿಗಳ ಮಾರಕ ಬೌಲಿಂಗ್ ಮುಂದೆ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು.

ಆರಂಭಿಕ ಆಟಗಾರ ರೋಹಿತ್ ಶರ್ಮಾ (11) ಶಾಹೀನ್ ಅಫ್ರಿದಿ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ (4) ಕೂಡ ಅಫ್ರಿದಿಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಶುಭ್​ಮನ್ ಗಿಲ್ (6) ವಿಕೆಟ್ ಪಡೆದು ಹ್ಯಾರಿಸ್ ರೌಫ್ ಪಾಕ್ ತಂಡಕ್ಕೆ 3ನೇ ಯಶಸ್ಸು ತಂದುಕೊಟ್ಟರು. ಆ ನಂತರ ಬಂದ ಶ್ರೇಯಸ್ ಅಯ್ಯರ್ ವೇಗವಾಗಿ 14 ರನ್ ಬಾರಿಸಿದರೂ ಹೆಚ್ಚು ಹೊತ್ತು ನಿಲ್ಲಲಿಲ್ಲ.

ಈ ಹಂತದಲ್ಲಿ ಜೊತೆಗೂಡಿದ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ 5ನೇ ವಿಕೆಟ್​ಗೆ 138 ರನ್​ಗಳ ಜೊತೆಯಾಟವಾಡಿದರು. 81 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 82 ರನ್ ಬಾರಿಸಿ ಇಶಾನ್ ಕಿಶನ್ ಹ್ಯಾರಿಸ್ ಎಸೆತದಲ್ಲಿ ಔಟಾದರು.

ಇದರ ಬೆನ್ನಲ್ಲೇ 90 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 87 ರನ್​ ಬಾರಿಸಿದ್ದ ಹಾರ್ದಿಕ್ ಪಾಂಡ್ಯ ಕೂಡ ಶಾಹೀನ್ ಅಫ್ರಿದಿ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಇತ್ತ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ ವಿಕೆಟ್ ಸಿಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಪಾಕ್ ಬೌಲರ್​ಗಳು ಆ ಬಳಿಕ ಬಂದ ರವೀಂದ್ರ ಜಡೇಜಾ (14) ಬೇಗನೆ ಔಟ್ ಮಾಡಿದರು.

ಇನ್ನು ಶಾರ್ದೂಲ್ ಠಾಕೂರ್ (3), ಕುಲ್ದೀಪ್ ಯಾದವ್ (4) ನಸೀಮ್ ಶಾ ಎಸೆತಗಳಲ್ಲಿ ವಿಕೆಟ್ ಒಪ್ಪಿಸಿದರು. ಅಂತಿಮ ಹಂತದಲ್ಲಿ ಜಸ್​ಪ್ರೀತ್ ಬುಮ್ರಾ 14 ಎಸೆತಗಳಲ್ಲಿ 16 ರನ್​ಗಳ ಕೊಡುಗೆ ನೀಡಿದರು. ಆದರೆ 49ನೇ ಓವರ್​ನ 5ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ನಸೀಮ್​ಗೆ ವಿಕೆಟ್ ಒಪ್ಪಿಸಿದರು. ಇದರೊಂದಿಗೆ 48.5 ಓವರ್​ಗಳಲ್ಲಿ ಟೀಮ್ ಇಂಡಿಯಾ 266 ರನ್​ಗಳಿಗೆ ಆಲೌಟ್ ಆಯಿತು.

267 ರನ್​ಗಳ ಸುಲಭ ಗುರಿ ಪಡೆದ ಪಾಕಿಸ್ತಾನ್ ತಂಡದ ಇನಿಂಗ್ಸ್​ಗೆ ಮಳೆ ಅಡ್ಡಿಪಡಿಸಿತು. ನಿರಂತರವಾಗಿ ಸುರಿದ ಮಳೆಯಿಂದಾಗಿ ಮೈದಾನದಲ್ಲಿ ಸಂಪೂರ್ಣ ನೀರು ತುಂಬಿತ್ತು. ಕಟ್ ಆಫ್ ಟೈಮ್​ಗೂ ಮುನ್ನ ಮೈದಾನವನ್ನು ಪರಿಶೀಲಿಸಿದ ಅಂಪೈರ್​ಗಳು ಪಂದ್ಯವನ್ನು ರದ್ದುಗೊಳಿಸುವ ಅಂತಿಮ ನಿರ್ಧಾರ ತೆಗೆದುಕೊಂಡರು. ಅಲ್ಲದೆ ಉಭಯ ತಂಡಗಳು ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ.

ಸೂಪರ್-4 ಹಂತಕ್ಕೇರಿದ ಪಾಕಿಸ್ತಾನ್:

ಟೀಮ್ ಇಂಡಿಯಾ ವಿರುದ್ಧ ಪಂದ್ಯ ರದ್ದಾಗುವುದರೊಂದಿಗೆ ಪಾಕಿಸ್ತಾನ್ ತಂಡವು ಒಂದು ಅಂಕ ಪಡೆದುಕೊಂಡಿದೆ. ಇದಕ್ಕೂ ಮುನ್ನ ನೇಪಾಳ ವಿರುದ್ಧ ಭರ್ಜರಿ ಜಯ ಸಾಧಿಸಿ 2 ಅಂಕಗಳನ್ನು ಪಡೆದುಕೊಂಡಿತ್ತು. ಇದೀಗ ಒಟ್ಟು 3 ಅಂಕಗಳನ್ನು ಪಡೆದಿರುವ ಪಾಕಿಸ್ತಾನ್ ತಂಡವು ಗ್ರೂಪ್-ಎ ನಿಂದ ಸೂಪರ್​-4 ಹಂತಕ್ಕೇರಿದೆ.  ಇನ್ನು ಟೀಮ್ ಇಂಡಿಯಾ ನೇಪಾಳ ವಿರುದ್ಧ ಜಯ ಸಾಧಿಸಿದರೆ ಸೂಪರ್ ಫೋರ್ ಹಂತಕ್ಕೇರಬಹುದು.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

ಪಾಕಿಸ್ತಾನ್ ಪ್ಲೇಯಿಂಗ್ 11: ಫಖರ್ ಝಮಾನ್, ಇಮಾಮ್-ಉಲ್-ಹಕ್, ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಝ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ