ಏಷ್ಯಾಕಪ್ ಪ್ರೊಮೊ ವಿಡಿಯೋ ಬಿಡುಗಡೆ: ರೋಹಿತ್ ಶರ್ಮಾ ಎಲ್ಲಿ ಎಂದು ಕೇಳಿದ ಫ್ಯಾನ್ಸ್

Asia Cup 2023: ಈ ಬಾರಿಯ ಏಷ್ಯಾಕಪ್​ ಆಗಸ್ಟ್ 30 ರಿಂದ ಶುರುವಾಗಲಿದ್ದು, ಈ ಟೂರ್ನಿಯ ಎಲ್ಲಾ ಪಂದ್ಯಗಳು ಮಧ್ಯಾಹತ್ನ 3 ಗಂಟೆಯಿಂದ ಶುರುವಾಗಲಿದೆ. ಇನ್ನು ಈ ಪಂದ್ಯಗಳನ್ನು ಸ್ಟಾರ್​ ಸ್ಪೋರ್ಟ್ಸ್​ ನೆಟ್​ವರ್ಕ್​ನ ಚಾನೆಲ್​ಗಳಲ್ಲಿ ಲೈವ್ ವೀಕ್ಷಿಸಬಹುದು.‘

ಏಷ್ಯಾಕಪ್ ಪ್ರೊಮೊ ವಿಡಿಯೋ ಬಿಡುಗಡೆ: ರೋಹಿತ್ ಶರ್ಮಾ ಎಲ್ಲಿ ಎಂದು ಕೇಳಿದ ಫ್ಯಾನ್ಸ್
Asia Cup 2023 promo Video
Follow us
TV9 Web
| Updated By: ಝಾಹಿರ್ ಯೂಸುಫ್

Updated on:Aug 08, 2023 | 6:58 PM

Asia Cup 2023: ಬಹುನಿರೀಕ್ಷಿತ ಏಷ್ಯಾಕಪ್​ ಟೂರ್ನಿಯ ಪ್ರೊಮೊ ವಿಡಿಯೋ ಬಿಡುಗಡೆಯಾಗಿದೆ. ಸ್ಟಾರ್​ ಸ್ಪೋರ್ಟ್ಸ್ ನೆಟ್​ವರ್ಕ್​ ರಿಲೀಸ್ ಮಾಡಿರುವ ಈ ವಿಡಿಯೋದಲ್ಲಿ ಭಾರತೀಯ ಅಭಿಮಾನಿಗಳ ಕಾತುರತೆ, ಭಾವಪರವಶತೆ ಹಾಗೂ ಕೌತುಕತೆಯನ್ನು ತೋರಿಸಲಾಗಿದೆ. ವಿಶೇಷ ಎಂದರೆ ಈ ರೋಚಕ ಕ್ಷಣಗಳ ನಡುವೆ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಕಾಣಿಸಿಕೊಳ್ಳುತ್ತಾರೆ. ಆದರೆ ಪ್ರಸ್ತುತ ತಂಡದ ನಾಯಕ ರೋಹಿತ್ ಶರ್ಮಾ ಅವರ ಯಾವುದೇ ಕ್ಲಿಪ್ ಅನ್ನು ಇಲ್ಲಿ ಬಳಸಿಕೊಂಡಿಲ್ಲ ಎಂಬುದು ವಿಶೇಷ.

ರೋಹಿತ್ ಶರ್ಮಾ ಎಲ್ಲಿ?

ಈ ವಿಡಿಯೋ ಬಿಡುಗಡೆ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಎಲ್ಲಿ ಎಂಬ ಪ್ರಶ್ನೆಗಳನ್ನು ಅಭಿಮಾನಿಗಳು ಮುಂದಿಟ್ಟಿದ್ದಾರೆ. ಸಾಮಾನ್ಯವಾಗಿ ಆಯಾ ದೇಶದ ನಾಯಕರುಗಳನ್ನು ಟೂರ್ನಿಯ ಪ್ರೊಮೊ ವಿಡಿಯೋದಲ್ಲಿ ಬಳಸಿಕೊಳ್ಳಲಾಗುತ್ತದೆ. ಆದರೆ ಈ ಬಾರಿ ಸ್ಟಾರ್ ಸ್ಪೋರ್ಟ್ಸ್​ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಮತ್ತು ಪೋಸ್ಟರ್​​ನಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾಗೆ ಸ್ಥಾನ ನೀಡಿಲ್ಲ.

ಅಲ್ಲದೆ ಏಷ್ಯಾಕಪ್ ಟೂರ್ನಿಯ ಪೋಸ್ಟರ್​ನಲ್ಲಿ ಎಲ್ಲಾ ತಂಡಗಳ ನಾಯಕರುಗಳೊಂದಿಗೆ ವಿರಾಟ್ ಕೊಹ್ಲಿಯ ಫೋಟೋ ಬಳಸಲಾಗಿದೆ. ಇದುವೇ ಈಗ ಹಿಟ್​ಮ್ಯಾನ್ ಅಭಿಮಾನಿಗಳನ್ನು ಕೆರಳಿಸುವಂತೆ ಮಾಡಿದೆ.

ಕೊಹ್ಲಿ ಬ್ರಾಂಡ್ ಅಂಬಾಸಿಡರ್:

ವಿರಾಟ್ ಕೊಹ್ಲಿ ಸ್ಟಾರ್ ಸ್ಪೋರ್ಟ್ಸ್​ ನೆಟ್​ವರ್ಕ್​ನ ಬ್ರಾಂಡ್ ಅಂಬಾಸಿಡರ್. ಇದೇ ಕಾರಣದಿಂದಾಗಿ ಪ್ರೊಮೊ ವಿಡಿಯೋದಲ್ಲಿ ಕೊಹ್ಲಿಯ ಕ್ಲಿಪ್ ಅನ್ನು ಮಾತ್ರ ಬಳಸಲಾಗಿದೆ ಎಂಬ ವಾದ ಸೋಷಿಯಲ್ ಮೀಡಿಯಾದಲ್ಲಿ ಕೇಳಿ ಬಂದಿದೆ. ಇದಾಗ್ಯೂ ವಿಡಿಯೋ ಕೊನೆಯಲ್ಲಿ ಕಾಣುವ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ಪೋಸ್ಟರ್​ನಲ್ಲಿ ರೋಹಿತ್ ಶರ್ಮಾ ಅವರ ಫೋಟೋ ಬಳಸಲಾಗಿದೆ.

ಹ್ಯಾಂಡ್ಸ್ ​ಅಪ್​ ಫರ್ ​ಇಂಡಿಯಾ:

ಈ ಬಾರಿಯ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾವನ್ನು ಹುರಿದುಂಬಿಸಲು #HandsUpForIndia ಎಂಬ ಹ್ಯಾಶ್‌ಟ್ಯಾಗ್ ಅನ್ನು ಸ್ಟಾರ್​ ಸ್ಪೋರ್ಟ್ಸ್​ ಸೃಷ್ಟಿಸಿದ್ದು, ಅಭಿಮಾನಿಗಳು ಭಾರತೀಯ ಅಭಿಮಾನಿಗಳು ಕೈ ಎತ್ತಿ ತಂಡಕ್ಕೆ ಬೆಂಬಲ ಸೂಚಿಸುವಂತೆ ತಿಳಿಸಲಾಗಿದೆ.

ಏಷ್ಯಾಕಪ್ ವೇಳಾಪಟ್ಟಿ:

  • ಆಗಸ್ಟ್ 30- ಪಾಕಿಸ್ತಾನ್ vs ನೇಪಾಳ (ಮುಲ್ತಾನ್)
  • ಆಗಸ್ಟ್ 31- ಬಾಂಗ್ಲಾದೇಶ್ vs ಶ್ರೀಲಂಕಾ (ಕ್ಯಾಂಡಿ)
  • ಸೆಪ್ಟೆಂಬರ್ 2- ಭಾರತ vs ಪಾಕಿಸ್ತಾನ್ (ಕ್ಯಾಂಡಿ)
  • ಸೆಪ್ಟೆಂಬರ್ 3- ಬಾಂಗ್ಲಾದೇಶ್ vs ಅಫ್ಘಾನಿಸ್ತಾನ್ (ಲಾಹೋರ್)
  • ಸೆಪ್ಟೆಂಬರ್ 4- ಭಾರತ vs ನೇಪಾಳ (ಕ್ಯಾಂಡಿ)
  • ಸೆಪ್ಟೆಂಬರ್ 5- ಶ್ರೀಲಂಕಾ vs ಅಫ್ಘಾನಿಸ್ತಾನ್ (ಲಾಹೋರ್)

ಸೂಪರ್-4 ಹಂತದ ವೇಳಾಪಟ್ಟಿ:

  • ಸೆಪ್ಟೆಂಬರ್ 6- A1 Vs B2 (ಲಾಹೋರ್)
  • ಸೆಪ್ಟೆಂಬರ್ 9- B1 Vs B2 (ಕೊಲಂಬೊ)
  • ಸೆಪ್ಟೆಂಬರ್ 10- A1 Vs A2 (ಕೊಲಂಬೊ)
  • ಸೆಪ್ಟೆಂಬರ್ 12- A2 Vs B1 (ಕೊಲಂಬೊ)
  • ಸೆಪ್ಟೆಂಬರ್ 14- A1 Vs B1 (ಕೊಲಂಬೊ)
  • ಸೆಪ್ಟೆಂಬರ್ 15- A2 Vs B2 (ಕೊಲಂಬೊ)
  • ಸೆಪ್ಟೆಂಬರ್ 17- ಫೈನಲ್ ಪಂದ್ಯ (ಕೊಲಂಬೊ)

ಇದನ್ನೂ ಓದಿ: ಪೂರನ್ ಪವರ್​ಗೆ ಹಳೆಯ ದಾಖಲೆ ಉಡೀಸ್​: ಟೀಮ್ ಇಂಡಿಯಾ ವಿರುದ್ದ ಹೊಸ ರೆಕಾರ್ಡ್

ಯಾವ  ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಬಾರಿಯ ಏಷ್ಯಾಕಪ್​ ಆಗಸ್ಟ್ 30 ರಿಂದ ಶುರುವಾಗಲಿದ್ದು, ಈ ಟೂರ್ನಿಯ ಎಲ್ಲಾ ಪಂದ್ಯಗಳು ಮಧ್ಯಾಹತ್ನ 3 ಗಂಟೆಯಿಂದ ಶುರುವಾಗಲಿದೆ. ಇನ್ನು ಈ ಪಂದ್ಯಗಳನ್ನು ಸ್ಟಾರ್​ ಸ್ಪೋರ್ಟ್ಸ್​ ನೆಟ್​ವರ್ಕ್​ನ ಚಾನೆಲ್​ಗಳಲ್ಲಿ ಲೈವ್ ವೀಕ್ಷಿಸಬಹುದು.‘

Published On - 5:56 pm, Tue, 8 August 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್