AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾ ಏಷ್ಯಾಕಪ್ ಗೆಲ್ಲುತ್ತದೆ ಎಂದ ನಾಯಕ ರೋಹಿತ್ ಶರ್ಮಾ; ವಿಡಿಯೋ ನೋಡಿ

Asia Cup 2023: ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ ರೋಹಿತ್ ವಿಮಾನ ನಿಲ್ದಾಣದ ಒಳಗೆ ಹೋಗುತ್ತಿದ್ದಾರೆ. ಈ ವೇಳೆ ಅಲ್ಲೆ ಇದ್ದ ಪಾಪರಾಜಿಯೊಬ್ಬರು, ರೋಹಿತ್ ಸರ್ ನಾನು ಏಷ್ಯಾಕಪ್‌ಗಾಗಿ ಕಾಯುತ್ತಿರುತ್ತೇವೆ ಎಂದಿದ್ದಾರೆ. ಇದನ್ನು ನೋಡಿದ ರೋಹಿತ್ ನಗುತ್ತಾ, ಸಂಪೂರ್ಣ ಆತ್ಮವಿಶ್ವಾಸದಿಂದ, 'ಜೀತೇಂಗೆ, ಜೀತೆಂಗೆ' (ಏಷ್ಯಾಕಪ್ ಗೆಲ್ಲುತ್ತೇವೆ) ಎಂದಿದ್ದಾರೆ.

ಟೀಂ ಇಂಡಿಯಾ ಏಷ್ಯಾಕಪ್ ಗೆಲ್ಲುತ್ತದೆ ಎಂದ ನಾಯಕ ರೋಹಿತ್ ಶರ್ಮಾ; ವಿಡಿಯೋ ನೋಡಿ
ರೋಹಿತ್ ಶರ್ಮಾ
ಪೃಥ್ವಿಶಂಕರ
|

Updated on:Aug 24, 2023 | 7:15 AM

Share

ಮುಂಬರುವ ಕೆಲವು ತಿಂಗಳುಗಳು ಭಾರತ ಕ್ರಿಕೆಟ್ ತಂಡಕ್ಕೆ (Indian Cricket Team) ಅತ್ಯಂತ ಮಹತ್ವದ್ದಾಗಿದೆ. ಈ ಅವಧಿಯಲ್ಲಿ ಟೀಂ ಇಂಡಿಯಾ ಎರಡು ಪ್ರಮುಖ ಟೂರ್ನಿಗಳನ್ನು ಆಡಬೇಕಿದೆ. ಇದು ಆಗಸ್ಟ್ 30 ರಂದು ಪ್ರಾರಂಭವಾಗುವ ಏಷ್ಯಾ ಕಪ್‌ನೊಂದಿಗೆ ಪ್ರಾರಂಭವಾಗುತ್ತದೆ. ಈ ಬಾರಿಯ ಏಷ್ಯಾಕಪ್ (Asia Cup 2023) ಪ್ರಶಸ್ತಿ ಗೆಲ್ಲಲು ಟೀಂ ಇಂಡಿಯಾ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ಈ ಗೆಲುವು ಏಕದಿನ ವಿಶ್ವಕಪ್‌ಗೆ (ODI World Cup 2023) ತಂಡಕ್ಕೆ ಆತ್ಮವಿಶ್ವಾಸ ತುಂಬಲಿದೆ. ಏಷ್ಯಾಕಪ್‌ಗೆ ಈಗಾಗಲೇ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ (Rohit Sharma) ನೇತೃತ್ವದ ತಂಡ ಈ ಬಾರಿ ಪ್ರಶಸ್ತಿ ಎತ್ತಿ ಹಿಡಿಯುವ ಉತ್ಸಾಹದಲ್ಲಿದೆ. ಅದಕ್ಕೆ ಪೂರಕವಾಗಿ ಇತ್ತೀಚಿಗೆ ರೋಹಿತ್ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅದರಲ್ಲಿ ಹಿಟ್​ಮ್ಯಾನ್ ಏಷ್ಯಾಕಪ್ ಗೆಲ್ಲುವ ಬಗ್ಗೆ ಮಾತನಾಡಿದ್ದಾರೆ.

ವಾಸ್ತವವಾಗಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಈ ಬಾರಿಯ ಏಷ್ಯಾಕಪ್​ಗೆ ಸೋಮವಾರ ತಂಡವನ್ನು ಪ್ರಕಟಿಸಿದರು. ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಇಬ್ಬರೂ ಭಾಗವಹಿಸಿ 17 ಸದಸ್ಯರ ತಂಡವನ್ನು ಪ್ರಕಟಿಸಿದ್ದರು. ಇದೀಗ ಆಗಸ್ಟ್ 30 ರಿಂದ ಆರಂಭವಾಗಲಿರುವ ಏಷ್ಯಾಕಪ್​ಗೆ ತಯಾರಿ ಮಾಡಿಕೊಳ್ಳುವ ಸಲುವಾಗಿ ಟೀಂ ಇಂಡಿಯಾ ಆಟಗಾರರು ಬೆಂಗಳೂರಿನಲ್ಲಿರುವ ಎನ್​ಸಿಎಗೆ ಆಗಮನಿಸುತ್ತಿದ್ದಾರೆ. ಇದೇ ವೇಳೆ ಪಾಪರಾಜಿ ಕೇಳಿದ ಪ್ರಶ್ನೆಗೆ ರೋಹಿತ್ ಈ ರೀತಿಯ ಉತ್ತರ ನೀಡಿದ್ದಾರೆ.

ಟಿ20ಯಲ್ಲಿ ಅತಿ ಹೆಚ್ಚು ಡಾಟ್‌ ಬಾಲ್‌ ಆಡಿದವರಲ್ಲಿ ರೋಹಿತ್​ಗೆ ಮೊದಲ ಸ್ಥಾನ..!

‘ಜೀತೇಂಗೆ, ಜೀತೆಂಗೆ’- ರೋಹಿತ್

ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ ರೋಹಿತ್ ವಿಮಾನ ನಿಲ್ದಾಣದ ಒಳಗೆ ಹೋಗುತ್ತಿದ್ದಾರೆ. ಈ ವೇಳೆ ಅಲ್ಲೆ ಇದ್ದ ಪಾಪರಾಜಿಯೊಬ್ಬರು, ರೋಹಿತ್ ಸರ್ ನಾವು ಏಷ್ಯಾಕಪ್‌ಗಾಗಿ ಕಾಯುತ್ತಿರುತ್ತೇವೆ ಎಂದಿದ್ದಾರೆ. ಇದನ್ನು ನೋಡಿದ ರೋಹಿತ್ ನಗುತ್ತಾ, ಸಂಪೂರ್ಣ ಆತ್ಮವಿಶ್ವಾಸದಿಂದ, ‘ಜೀತೇಂಗೆ, ಜೀತೆಂಗೆ’ (ಏಷ್ಯಾಕಪ್ ಗೆಲ್ಲುತ್ತೇವೆ) ಎಂದಿದ್ದಾರೆ. ರೋಹಿತ್ ಹೀಗೆ ಹೇಳುತ್ತಾ ಒಳಗೆ ಹೋಗಿದ್ದಾರೆ. ಇದೀಗ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ.

ವಾಸ್ತವವಾಗಿ ಭಾರತ ಕೊನೆಯ ಬಾರಿಗೆ 2018 ರಲ್ಲಿ ಏಷ್ಯಾ ಕಪ್ ಗೆದ್ದುಕೊಂಡಿತು. ಆಗಲೂ ಈ ಪಂದ್ಯಾವಳಿಯನ್ನು ಏಕದಿನ ಮಾದರಿಯಲ್ಲಿ ಆಡಲಾಯಿತು. ಇದಾದ ನಂತರ 2022ರಲ್ಲಿ ಟಿ20 ಮಾದರಿಯಲ್ಲಿ ಏಷ್ಯಾಕಪ್ ನಡೆದಾಗ ಶ್ರೀಲಂಕಾ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

ಅತಿ ಹೆಚ್ಚು ಏಷ್ಯಾಕಪ್ ಗೆದ್ದ ತಂಡ ಭಾರತ

1984 ರಲ್ಲಿ ಆರಂಭವಾದ ಈ ಟೂರ್ನಿಯಲ್ಲಿ ಇದುವರೆಗೆ ಭಾರತ ಏಳು ಬಾರಿ ಈ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದೆ. 1984 ರಲ್ಲಿ ಅಂದರೆ ಚೊಚ್ಚಲ ಆವೃತ್ತಿಯಲ್ಲೇ ಭಾರತ ಚಾಂಪಿಯನ್ ಆಗಿತ್ತು. ಇದಾದ ನಂತರ ಭಾರತ 1988, 1990 ಮತ್ತು 1995ರಲ್ಲಿ ಸತತ ಮೂರು ಬಾರಿ ಏಷ್ಯಾಕಪ್ ಗೆದ್ದಿತ್ತು. ಇದರ ನಂತರ, ಭಾರತಕ್ಕೆ ಮುಂದಿನ ಏಷ್ಯಾಕಪ್ ಗೆಲ್ಲಲು 15 ವರ್ಷಗಳು ಬೇಕಾಯಿತು. 2010ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ಮತ್ತೊಮ್ಮೆ ಏಷ್ಯಾಕಪ್ ಗೆದ್ದಿತ್ತು. ನಂತರ ಭಾರತ 2016 ಮತ್ತು 2018ರಲ್ಲಿ ಏಷ್ಯಾಕಪ್ ಗೆದ್ದಿದ್ದರೆ, ಪಂದ್ಯಾವಳಿಯಲ್ಲಿ ಎರಡನೇ ಅತ್ಯಂತ ಯಶಸ್ವಿ ತಂಡವಾಗಿರುವ ಶ್ರೀಲಂಕಾ ಆರು ಬಾರಿ ಏಷ್ಯಾಕಪ್ ಗೆದ್ದಿದೆ. ಈ ಟೂರ್ನಿಯಲ್ಲಿ ಪಾಕಿಸ್ತಾನ ಎರಡು ಬಾರಿ ಮಾತ್ರ ಗೆದ್ದಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:14 am, Thu, 24 August 23

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ