AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023 Schedule: ಏಷ್ಯಾಕಪ್ ವೇಳಾಪಟ್ಟಿ ಪ್ರಕಟ

Asia Cup 2023 Schedule: ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿದ್ದು, ಈ ಪಂದ್ಯಗಳಿಗಾಗಿ ಉಳಿದ ತಂಡಗಳು ಲಂಕಾಗೆ ಆಗಮಿಸಲಿದೆ. ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

Asia Cup 2023 Schedule: ಏಷ್ಯಾಕಪ್ ವೇಳಾಪಟ್ಟಿ ಪ್ರಕಟ
Asia Cup 2023 Schedule
TV9 Web
| Edited By: |

Updated on:Jul 19, 2023 | 7:21 PM

Share

Asia Cup 2023 Schedule: ಏಷ್ಯಾಕಪ್ 2023ರ ವೇಳಾಪಟ್ಟಿ ಪ್ರಕಟವಾಗಿದೆ. ಆಗಸ್ಟ್ 30 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ. ಸೆಪ್ಟೆಂಬರ್ 2 ರಂದು ಪಾಕಿಸ್ತಾನ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯವು ಶ್ರೀಲಂಕಾದ ಕ್ಯಾಂಡಿಯಲ್ಲಿ ನಡೆಯಲಿರುವುದು ವಿಶೇಷ.

ಅಂದರೆ ಈ ಬಾರಿಯ ಏಷ್ಯಾಕಪ್ ಹೈ ಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ ಆಯೋಜಿಸುತ್ತಿರುವ ಈ ಟೂರ್ನಿಯು ಪಾಕ್​ನಲ್ಲಿ ನಡೆಯಬೇಕಿತ್ತು. ಆದರೆ ಪಾಕಿಸ್ತಾನದಲ್ಲಿ ಟೂರ್ನಿ ನಡೆದರೆ ಭಾರತ ತಂಡವು ಪಾಲ್ಗೊಳ್ಳುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿತ್ತು. ಹೀಗಾಗಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಮುಂದಾಗಿದೆ.

ಅದರಂತೆ ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿದ್ದು, ಈ ಪಂದ್ಯಗಳಿಗಾಗಿ ಉಳಿದ ತಂಡಗಳು ಲಂಕಾಗೆ ಆಗಮಿಸಲಿದೆ. ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

ಏಷ್ಯಾಕಪ್ ವೇಳಾಪಟ್ಟಿ:

  1. ಆಗಸ್ಟ್ 30- ಪಾಕಿಸ್ತಾನ್ vs ನೇಪಾಳ (ಮುಲ್ತಾನ್)
  2. ಆಗಸ್ಟ್ 31- ಬಾಂಗ್ಲಾದೇಶ್ vs ಶ್ರೀಲಂಕಾ (ಕ್ಯಾಂಡಿ)
  3. ಸೆಪ್ಟೆಂಬರ್ 2- ಭಾರತ vs ಪಾಕಿಸ್ತಾನ್ (ಕ್ಯಾಂಡಿ)
  4. ಸೆಪ್ಟೆಂಬರ್ 3- ಬಾಂಗ್ಲಾದೇಶ್ vs ಅಫ್ಘಾನಿಸ್ತಾನ್ (ಲಾಹೋರ್)
  5. ಸೆಪ್ಟೆಂಬರ್ 4- ಭಾರತ vs ನೇಪಾಳ (ಕ್ಯಾಂಡಿ)
  6. ಸೆಪ್ಟೆಂಬರ್ 5- ಶ್ರೀಲಂಕಾ vs ಅಫ್ಘಾನಿಸ್ತಾನ್ (ಲಾಹೋರ್)

ಸೂಪರ್-4 ಹಂತದ ವೇಳಾಪಟ್ಟಿ:

  1. ಸೆಪ್ಟೆಂಬರ್ 6- A1 Vs B2 (ಲಾಹೋರ್)
  2. ಸೆಪ್ಟೆಂಬರ್ 9- B1 Vs B2 (ಕೊಲಂಬೊ)
  3. ಸೆಪ್ಟೆಂಬರ್ 10- A1 Vs A2 (ಕೊಲಂಬೊ)
  4. ಸೆಪ್ಟೆಂಬರ್ 12- A2 Vs B1 (ಕೊಲಂಬೊ)
  5. ಸೆಪ್ಟೆಂಬರ್ 14- A1 Vs B1 (ಕೊಲಂಬೊ)
  6. ಸೆಪ್ಟೆಂಬರ್ 15- A2 Vs B2 (ಕೊಲಂಬೊ)
  7. ಸೆಪ್ಟೆಂಬರ್ 17- ಫೈನಲ್ ಪಂದ್ಯ (ಕೊಲಂಬೊ)

ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದೆ. ವಿಶೇಷ ಎಂದರೆ ಈ ಹಿಂದಿನ 5 ತಂಡಗಳ ಜೊತೆ ಈ ಬಾರಿ ನೇಪಾಳ ತಂಡವು ಅರ್ಹತೆ ಪಡೆದುಕೊಂಡಿದೆ. ಅದರಂತೆ ಇದೇ ಮೊದಲ ಬಾರಿಗೆ ಕಣಕ್ಕಿಳಿಯುತ್ತಿರುವ ನೇಪಾಳ ತಂಡವು ಗ್ರೂಪ್​-ಬಿ ನಲ್ಲಿದ್ದು, ಏಷ್ಯಾದ ಬಲಿಷ್ಠ ಎರಡು ತಂಡಗಳಾದ ಭಾರತ ಮತ್ತು ಪಾಕಿಸ್ತಾನ್ ವಿರುದ್ಧ ಸೆಣಸಲಿದೆ.

ಏಷ್ಯಾಕಪ್ ಗ್ರೂಪ್​ಗಳು:

  • ಗ್ರೂಪ್​- A ತಂಡಗಳು:
  • ಭಾರತ
  • ಪಾಕಿಸ್ತಾನ್
  • ನೇಪಾಳ

ಇದನ್ನೂ ಓದಿ: Team India: ಒಟ್ಟು 47 ಪ್ಲೇಯರ್ಸ್​: ಟೀಮ್ ಇಂಡಿಯಾದಿಂದ 32 ಆಟಗಾರರು ಔಟ್..!

  • ಗ್ರೂಪ್​- B ತಂಡಗಳು
  • ಶ್ರೀಲಂಕಾ
  • ಅಫ್ಘಾನಿಸ್ತಾನ್
  • ಬಾಂಗ್ಲಾದೇಶ್

ಏಕದಿನ ಮಾದರಿ ಟೂರ್ನಿ:

ಈ ಬಾರಿಯ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದೆ. ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ಹಿನ್ನಲೆಯಲ್ಲಿ 50 ಓವರ್​ಗಳ ಸ್ವರೂಪದಲ್ಲಿ ಟೂರ್ನಿ ಆಯೋಜಿಸಲು ನಿರ್ಧರಿಸಲಾಗಿದೆ. ಅಂದರೆ ಆಯಾ ಏಷ್ಯಾಕಪ್​ನ ನಂತರ ಐಸಿಸಿ ಟೂರ್ನಿ ಜರುಗುತ್ತಿದ್ದರೆ ಅದೇ ಸ್ವರೂಪದಲ್ಲಿ ಟೂರ್ನಿಯನ್ನು ಆಯೋಜಿಸಲಾಗುತ್ತದೆ. ಕಳೆದ ವರ್ಷ ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ಏಷ್ಯಾಕಪ್ ಅನ್ನು ಕೂಡ ಟಿ20 ಮಾದರಿಯಲ್ಲಿ ಆಯೋಜಿಸಲಾಗಿತ್ತು. ಇದೀಗ ಏಕದಿನ ವಿಶ್ವಕಪ್ ಹಿನ್ನಲೆಯಲ್ಲಿ ಏಷ್ಯಾಕಪ್ ಕೂಡ 50 ಓವರ್​ಗಳಲ್ಲಿ ನಡೆಯಲಿದೆ.

Published On - 7:17 pm, Wed, 19 July 23

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್