Asia Cup 2023 schedule: ಏಷ್ಯಾಕಪ್ ವೇಳಾಪಟ್ಟಿಯಲ್ಲಿ ಲೋಪ; ಹೀಗಾದರೆ ಪಾಕಿಸ್ತಾನಕ್ಕೆ ಕಾಲಿಡಬೇಕಿದೆ ಟೀಂ ಇಂಡಿಯಾ..!

Asia Cup 2023 schedule: ಕ್ರಿಕೆಟ್ ಬಿಗ್​ಬಾಸ್​ಗಳ ಮುಂದೆ ಮಂಡಿಯೂರಿದ ಪಾಕ್ ಇದೀಗ ಈ ಹಿಂದೆ ನಿರ್ಧರಿಸಿದಂತೆಯೇ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಲು ಒಪ್ಪಿಗೆ ಸೂಚಿಸಿದೆ.

Asia Cup 2023 schedule: ಏಷ್ಯಾಕಪ್ ವೇಳಾಪಟ್ಟಿಯಲ್ಲಿ ಲೋಪ; ಹೀಗಾದರೆ ಪಾಕಿಸ್ತಾನಕ್ಕೆ ಕಾಲಿಡಬೇಕಿದೆ ಟೀಂ ಇಂಡಿಯಾ..!
ಏಷ್ಯಾಕಪ್ 2023
Follow us
ಪೃಥ್ವಿಶಂಕರ
|

Updated on:Jul 20, 2023 | 11:00 AM

ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಿನ ಶೀತಲ ಸಮರಕ್ಕೆ ಕೊನೆಗೂ ಅಂತ್ಯ ಹಾಡಲಾಗಿದೆ. ಬಹಳ ದಿನಗಳಿಂದ ಉಭಯ ದೇಶಗಳ ನಡುವೆ ನಡೆದ ಪ್ರತಿಷ್ಠೆಯ ಕದನದ ಬಳಿಕ ಏಷ್ಯಾಕಪ್ ವೇಳಾಪಟ್ಟಿಯನ್ನು (Asia Cup 2023 schedule) ಪ್ರಕಟಿಸಲಾಗಿದೆ. ಕ್ರಿಕೆಟ್ ಬಿಗ್​ಬಾಸ್​ಗಳ ಮುಂದೆ ಮಂಡಿಯೂರಿದ ಪಾಕ್ ಇದೀಗ ಈ ಹಿಂದೆ ನಿರ್ಧರಿಸಿದಂತೆಯೇ ಹೈಬ್ರಿಡ್ ಮಾದರಿಯಲ್ಲಿ (Hybrid Model) ಪಂದ್ಯಾವಳಿಯನ್ನು ಆಯೋಜಿಸಲು ಒಪ್ಪಿಗೆ ಸೂಚಿಸಿದೆ. ಏಷ್ಯಾಕಪ್ ವೇಳಾಪಟ್ಟಿಯಂತೆ ಪಾಕಿಸ್ತಾನದಲ್ಲಿ ಒಟ್ಟು ನಾಲ್ಕು ಪಂದ್ಯಗಳು ನಡೆಯಲಿವೆ. ಇನ್ನುಳಿದ 9 ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲ್ಲಿವೆ. ಭಾರತ ತನ್ನೇಲ್ಲ ಪಂದ್ಯಗಳನ್ನು ಲಂಕಾ ನೆಲದಲ್ಲಿಯೇ ಆಡಲಿದೆ. ಆದರೆ ಈಗಿನ ವೇಳಾಪಟ್ಟಿಯನ್ನು ಬದಲಾಯಿಸದೇ ಹೊದರೆ, ಒಂದೇ ಒಂದು ಪಂದ್ಯಕ್ಕಾಗಿ ಟೀಂ ಇಂಡಿಯಾ (Team India), ಪಾಕಿಸ್ತಾನದ ನೆಲಕ್ಕೆ ಕಾಲಿಡಬೇಕಿದೆ.

ಈಗ ನಿಗದಿಯಾಗಿರುವಂತೆ ಪಾಕಿಸ್ತಾನದಲ್ಲಿ ನಾಲ್ಕು ಪಂದ್ಯಗಳು ನಡೆಯಲ್ಲಿದ್ದು, ಮೊದಲ ಪಂದ್ಯ ಪಾಕಿಸ್ತಾನ ಮತ್ತು ನೇಪಾಳ ನಡುವೆ ಮುಲ್ತಾನ್‌ನಲ್ಲಿ ನಡೆಯಲಿದೆ. ಎರಡನೇ ಪಂದ್ಯ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ನಡುವೆ ಲಾಹೋರ್‌ನಲ್ಲಿ ನಡೆಯಲಿದೆ. ಮೂರನೇ ಪಂದ್ಯ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ನಡುವೆ ಲಾಹೋರ್‌ನಲ್ಲಿ ನಡೆಯಲಿದೆ. ಹಾಗೆಯೇ ಸೂಪರ್ ಫೋರ್ ಹಂತದಲ್ಲಿ ಏಕೈಕ ಪಂದ್ಯ ಪಾಕ್ ನೆಲದಲ್ಲಿ ನಡೆಯಲ್ಲಿದ್ದು, ಈ ಪಂದ್ಯದಲ್ಲಿ ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ ಹಾಗೂ ಬಿ ಗುಂಪಿನಲ್ಲಿ ಎರಡನೇ ಸ್ಥಾನ ಪಡೆಯುವ ತಂಡಗಳು ಮುಖಾಮುಖಿಗುತ್ತವೆ. ಇದೀಗ ಈ ಪಂದ್ಯ ಟೀಂ ಇಂಡಿಯಾದ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

IND vs WI: ಕಿಂಗ್ ಕೊಹ್ಲಿಯ 500ನೇ ಪಂದ್ಯದ ನೇರ ಪ್ರಸಾರ ಯಾವ ಚಾನೆಲ್​ನಲ್ಲಿ? ಇಲ್ಲಿದೆ ಪೂರ್ಣ ಮಾಹಿತಿ

ಪಾಕ್ ನೆಲದಲ್ಲಿ ಸೂಪರ್ ಹಂತದ ಮೊದಲ ಪಂದ್ಯ

ಅಂದರೆ ವೇಳಾಪಟ್ಟಿಯ ಪ್ರಕಾರ ಭಾರತ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಹೀಗಾಗಿ ಟೀಂ ಇಂಡಿಯಾ ಲೀಗ್ ಹಂತದಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡರೆ, ಆಗ ಸೂಪರ್ ಫೋರ್ ಹಂತದಲ್ಲಿ ಬಿ ಗುಂಪಿನಲ್ಲಿ ಎರಡನೇ ಸ್ಥಾನ ಪಡೆಯುವ ತಂಡವನ್ನು ಎದುರಿಸಲು ಲಾಹೋರ್​ಗೆ ಪ್ರಯಾಣ ಬೆಳೆಸಬೇಕಾಗುತ್ತದೆ. ಏಕೆಂದರೆ ಸೂಪರ್​ ಫೋರ್ ಹಂತದ ಮೊದಲ ಪಂದ್ಯವನ್ನು ಲಾಹೋರ್​ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಇದನ್ನು ನಾವು ವೇಳಾಪಟ್ಟಿಯಲ್ಲೂ ಗಮನಿಸಬಹುದಾಗಿದೆ. ಈ ಪಂದ್ಯ ಸೆಪ್ಟೆಂಬರ್ 6 ರಂದು ನಡೆಯಲಿದೆ. ಹೀಗಾಗಿ ಭಾರತ ಲೀಗ್ ಹಂತದಲ್ಲಿ ಮೊದಲ ಸ್ಥಾನ ಪಡೆದರೆ, ಸೂಪರ್ ಫೋರ್ ಹಂತದ ಮೊದಲ ಪಂದ್ಯ ಆಡಲು ಪಾಕಿಸ್ತಾನಕ್ಕೆ ಹೋಗಲಿದೆಯೇ ಎಂಬ ಪ್ರಶ್ನೆ ಮೂಡಿದೆ.

ಒಂದು ವೇಳೆ ಭಾರತ ಸೂಪರ್ ಫೋರ್ ಘಟ್ಟದಲ್ಲಿ ಎ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದರೆ, ಆಗ ಶ್ರೀಲಂಕಾದಲ್ಲಿ ಪಂದ್ಯವನ್ನು ಆಡಬಹುದಾಗಿದೆ. ಏಕೆಂದರೆ ಈಗ ನಿಗದಿಯಾಗಿರುವ ವೇಳಾಪಟ್ಟಿಯ ಪ್ರಕಾರ ಸೂಪರ್ ಫೋರ್ ಹಂತದಲ್ಲಿ ಎ ಗುಂಪಿನಲ್ಲಿ 2ನೇ ಸ್ಥಾನ ಪಡೆಯುವ ತಂಡವು ಬಿ ಗುಂಪಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡವನ್ನು ಸೆಪ್ಟಂಬರ್ 12 ರಂದು ಕೊಲಂಬೊದಲ್ಲಿ ಎದುರಿಸಲಿದೆ.

ಮೂರು ತಂಡಗಳ ಎರಡು ಗುಂಪು

ಏಷ್ಯಾಕಪ್​ನಲ್ಲಿ ಒಟ್ಟು ಆರು ತಂಡಗಳಿದ್ದು, ಮೂರು ತಂಡಗಳ ಎರಡು ಗುಂಪುಗಳನ್ನು ರಚಿಸಲಾಗಿದೆ. ಭಾರತ, ಪಾಕಿಸ್ತಾನ ಮತ್ತು ನೇಪಾಳ ಒಂದು ಗುಂಪಿನಲ್ಲಿ ಅಂದರೆ ಎ ಗುಂಪಿನಲ್ಲಿದ್ದರೆ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ಮತ್ತೊಂದು ಗುಂಪಿನಲ್ಲಿ ಅಂದರೆ ಬಿ ಗುಂಪಿನಲ್ಲಿ ಸ್ಥಾನ ಪಡೆದಿವೆ. ಎರಡೂ ಗುಂಪಿನ ಅಗ್ರ ಎರಡು ತಂಡಗಳು ಸೂಪರ್ ಫೋರ್‌ಗೆ ಅರ್ಹತೆ ಪಡೆಯುತ್ತವೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿದ್ದು, ಈ ಎರಡೂ ತಂಡಗಳು ಸೂಪರ್ ಫೋರ್ ತಲುಪುವುದು ಖಚಿತವಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:56 am, Thu, 20 July 23

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ