Asia Cup 2023: 15 ದಿನಗಳಲ್ಲಿ ಭಾರತ-ಪಾಕಿಸ್ತಾನ್​ 3 ಬಾರಿ ಮುಖಾಮುಖಿ..?

| Updated By: ಝಾಹಿರ್ ಯೂಸುಫ್

Updated on: Jul 19, 2023 | 10:09 PM

Asia Cup 2023 Schedule: ಆಗಸ್ಟ್ 30 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯವು ಮುಲ್ತಾನ್​ನಲ್ಲಿ ನಡೆಯಲಿದೆ.

Asia Cup 2023: 15 ದಿನಗಳಲ್ಲಿ ಭಾರತ-ಪಾಕಿಸ್ತಾನ್​ 3 ಬಾರಿ ಮುಖಾಮುಖಿ..?
India vs Pakistan
Follow us on

Asia Cup 2023 Schedule: ಏಷ್ಯಾಕಪ್​ 2023 ವೇಳಾಪಟ್ಟಿ ಬಿಡುಗಡೆಯಾಗಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸುತ್ತಿರುವ ಈ ಬಾರಿಯ ಏಷ್ಯಾಕಪ್ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಅಂದರೆ 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದರೆ, ಉಳಿದ ಪಂದ್ಯಗಳು ಶ್ರೀಲಂಕಾದಲ್ಲಿ ಜರುಗಲಿದೆ. ಇದಕ್ಕೂ ಮುನ್ನ ಇಡೀ ಟೂರ್ನಿಯನ್ನು ಪಾಕಿಸ್ತಾನದಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಆದರೆ ಪಾಕ್​ನಲ್ಲಿ ಟೂರ್ನಿ ನಡೆದರೆ ಭಾರತ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿತ್ತು. ಹೀಗಾಗಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಅದರಂತೆ ಆಗಸ್ಟ್ 30 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯವು ಮುಲ್ತಾನ್​ನಲ್ಲಿ ನಡೆಯಲಿದೆ. ಇನ್ನು ಲಂಕಾದ ಕ್ಯಾಂಡಿಯಲ್ಲಿ ಆಗಸ್ಟ್ 31 ರಂದು ನಡೆಯಲಿರುವ 2ನೇ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ್ ತಂಡಗಳು ಸೆಣಸಲಿದೆ.

ಸೆಪ್ಟೆಂಬರ್ 2 ರಂದು ನಡೆಯಲಿರುವ ಮೂರನೇ ಪಂದ್ಯದ ಮೂಲಕ ಟೀಮ್ ಇಂಡಿಯಾ ಏಷ್ಯಾಕಪ್ ಅಭಿಯಾನ ಆರಂಭಿಸಲಿದ್ದು, ಈ ಪಂದ್ಯದಲ್ಲಿ ಭಾರತದ ಎದುರಾಳಿ ಪಾಕಿಸ್ತಾನ್ ಎಂಬುದು ವಿಶೇಷ. ಅಲ್ಲದೆ ಈ ಪಂದ್ಯಕ್ಕೆ ಕ್ಯಾಂಡಿಯ ಕ್ರಿಕೆಟ್ ಗ್ರೌಂಡ್ ಆತಿಥ್ಯವಹಿಸಲಿದೆ.

ಭಾರತ-ಪಾಕ್ 3 ಬಾರಿ ಮುಖಾಮುಖಿ:

ಲೀಗ್ ಹಂತದಲ್ಲಿ ಸೆಪ್ಟೆಂಬರ್ 2 ರಂದು ಭಾರತ-ಪಾಕಿಸ್ತಾನ್ ಮುಖಾಮುಖಿಯಾಗುವುದು ಖಚಿತವಾಗಿದೆ. ಇನ್ನು ಲೀಗ್ ಪಂದ್ಯಗಳ ಬಳಿಕ ಪಾಕಿಸ್ತಾನ್ ಹಾಗೂ ಟೀಮ್ ಇಂಡಿಯಾ ಸೂಪರ್-4 ಹಂತಕ್ಕೇರಿದರೆ ಸೆಪ್ಟೆಂಬರ್ 10 ರಂದು ಮತ್ತೊಮ್ಮೆ ಮುಖಾಮುಖಿಯಾಗಲಿದೆ.

ಇನ್ನು ಸೂಪರ್-4 ಹಂತದಲ್ಲೂ ಎರಡು ತಂಡಗಳು ಅಂಕಪಟ್ಟಿಯಲ್ಲಿ ಮೊದಲೆರಡು ಸ್ಥಾನ ಅಲಂಕರಿಸಿದರೆ ಫೈನಲ್ ಪ್ರವೇಶಿಸಲಿದೆ. ಅದರಂತೆ ಸೆಪ್ಟೆಂಬರ್ 17 ರಂದು ಮೂರನೇ ಬಾರಿ ಮುಖಾಮುಖಿಯಾಗಬಹುದು.

ಅದರಂತೆ ಕೇವಲ 15 ದಿನಗಳ ನಡುವೆ ಭಾರತ-ಪಾಕಿಸ್ತಾನ್ ನಡುವಣ ಮೂರು ಹೈವೋಲ್ಟೇಜ್ ಪಂದ್ಯಗಳನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ದೊರಕಲಿದೆಯಾ ಕಾದು ನೋಡಬೇಕಿದೆ.

ಇದನ್ನೂ ಓದಿ: Asia Cup 2023 Schedule: ಏಷ್ಯಾಕಪ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಏಷ್ಯಾಕಪ್​ ಭಾರತದ ವೇಳಾಪಟ್ಟಿ:

  • ಸೆಪ್ಟೆಂಬರ್ 2- ಭಾರತ vs ಪಾಕಿಸ್ತಾನ್ (ಕ್ಯಾಂಡಿ)
  • ಸೆಪ್ಟೆಂಬರ್ 4- ಭಾರತ vs ನೇಪಾಳ (ಕ್ಯಾಂಡಿ)
  • ಸೆಪ್ಟೆಂಬರ್ 6 ರಿಂದ 15 ರವರೆಗೆ ಸೂಪರ್-4 ಪಂದ್ಯಗಳು
  • ಸೆಪ್ಟೆಂಬರ್ 17- ಫೈನಲ್ ಪಂದ್ಯ (ಕೊಲಂಬೊ)

 

Published On - 10:08 pm, Wed, 19 July 23