Asia Cup 2023: ಜು.14 ರಂದು ಏಷ್ಯಾಕಪ್ ವೇಳಾಪಟ್ಟಿ ಪ್ರಕಟ; 3 ಬಾರಿ ಭಾರತ-ಪಾಕ್ ಮುಖಾಮುಖಿ?

Asia Cup 2023 Schedule: ಈ ಬಾರಿಯ ಏಷ್ಯಾಕಪ್​ನ ವೇಳಾಪಟ್ಟಿಯನ್ನು ನಾಳೆ ಅಂದರೆ ಜುಲೈ 14 ರಂದು ಬಿಡುಗಡೆ ಮಾಡಲಾಗತ್ತಿದೆ.

Asia Cup 2023: ಜು.14 ರಂದು ಏಷ್ಯಾಕಪ್ ವೇಳಾಪಟ್ಟಿ ಪ್ರಕಟ; 3 ಬಾರಿ ಭಾರತ-ಪಾಕ್ ಮುಖಾಮುಖಿ?
ಏಷ್ಯಾಕಪ್ ವೇಳಾಪಟ್ಟಿImage Credit source: insidesport
Follow us
ಪೃಥ್ವಿಶಂಕರ
|

Updated on:Jul 13, 2023 | 12:59 PM

ಏಷ್ಯಾಕಪ್ (Asia Cup 2023) ಆಯೋಜನೆಗಿದ್ದ ಎಲ್ಲಾ ಅಡೆತಡೆಗಳು ನಿವಾರಣೆಯಾಗಿದ್ದು, 2023ರ ಏಷ್ಯಾಕಪ್ ವೇಳಾಪಟ್ಟಿಯ ಪ್ರಕಟಣೆಗೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿಯ ಏಷ್ಯಾಕಪ್​ನ ವೇಳಾಪಟ್ಟಿಯನ್ನು ನಾಳೆ ಅಂದರೆ ಜುಲೈ 14 ರಂದು ಬಿಡುಗಡೆ ಮಾಡಲಾಗತ್ತಿದೆ. ಇದರೊಂದಿಗೆ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಕ್ರಿಕೆಟ್​ ಕದನವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿರುವ ಕೋಟ್ಯಾಂತರ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಲು ಎಸಿಸಿ (ACC) ಮುಂದಾಗಿದೆ. ಈಗಾಗಲೇ ಬಿಸಿಸಿಐ (BCCI) ಮತ್ತು ಪಿಸಿಬಿ (PCB) ಹೈಬ್ರಿಡ್ ಮಾದರಿಗೆ (Hybrid Model) ಒಪ್ಪಿಗೆ ಸೂಚಿಸಿದ್ದು, ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ಶ್ರೀಲಂಕಾದ ದಂಬುಲ್ಲಾದಲ್ಲಿ ಎರಡು ಬಾರಿ ಮುಖಾಮುಖಿಯಾಗಲಿವೆ ಎಂದು ಇನ್​ಸೈಡ್ ಸ್ಪೋರ್ಟ್​ ವರದಿ ಮಾಡಿದೆ. ಈ ಹಿಂದೆ ಕೊಲಂಬೊದಲ್ಲಿ ಭಾರತ ಮತ್ತು ಪಾಕಿಸ್ತಾನದ ಪಂದ್ಯಗಳನ್ನು ಆಯೋಸಲು ತೀರ್ಮಾನಿಸಲಾಗಿತ್ತು. ಆದರೆ ಉಭಯ ತಂಡಗಳ ಕದನಕ್ಕೆ ಮಳೆ ಕಾಟ ಕೊಡುವ ಸಾಧ್ಯತೆ ಇರುವುದರಿಂದ ದಂಬುಲ್ಲಾದಲ್ಲಿ ಪಂದ್ಯ ಆಯೋಜಿಸಲು ತೀರ್ಮಾನಿಸಲಾಗಿದೆ.

ಇನ್​ಸೈಡ್ ಸ್ಪೋರ್ಟ್​ ವರದಿ ಮಾಡಿರುವ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ನಡುವಿನ ಎರಡೂ ಪಂದ್ಯಗಳು ದಂಬುಲ್ಲಾದಲ್ಲಿ ನಡೆಯುವ ಎಲ್ಲಾ ಸಾಧ್ಯತೆಗಳಿವೆ. ಒಂದು ವೇಳೆ ಉಭಯ ತಂಡಗಳು ಫೈನಲ್‌ಗೆ ಅರ್ಹತೆ ಪಡೆದರೆ, 3 ನೇ ಪಂದ್ಯ ಕೂಡ ದಂಬುಲ್ಲಾದಲ್ಲಿ ನಡೆಯಲ್ಲಿದೆ. ಏಷ್ಯಾಕಪ್ ವೇಳಾಪಟ್ಟಿ ಮತ್ತು ಸ್ಥಳಗಳ ಕುರಿತು ಚರ್ಚಿಸಲು ಪಿಸಿಬಿ ಮುಖ್ಯಸ್ಥ ಝಕಾ ಅಶ್ರಫ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಡರ್ಬನ್‌ನಲ್ಲಿ ಸಭೆ ನಡೆಸಿದ್ದರು. ಈ ಇಬ್ಬರ ಮುಖಾಮುಖಿ ಭೇಟಿಯ ಬಳಿಕ ಈ ಹಿಂದೆ ನಿಗದಿ ಪಡಿಸಿದಂತೆ ಶ್ರೀಲಂಕಾದಲ್ಲಿ ಒಂಬತ್ತು ಪಂದ್ಯಗಳನ್ನು ಆಡಲು ಒಪ್ಪಿಗೆ ಸೂಚಿಸಲಾಗಿದೆ. ಇನ್ನುಳಿದಂತೆ ಪಾಕಿಸ್ತಾನದಲ್ಲಿ ನಾಲ್ಕು ಪಂದ್ಯಗಳು ನಡೆಯಲಿವೆ.

ಪಂದ್ಯಾವಳಿಯ ಪೂರ್ಣ ಮಾಹಿತಿ ಹೀಗಿದೆ

ಏಷ್ಯಾಕಪ್ ಯಾವಾಗ ನಡೆಯಲಿದೆ?

ಏಷ್ಯಾಕಪ್ ಆಗಸ್ಟ್ 31 ರಿಂದ ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ.

ಏಷ್ಯಾಕಪ್ ಎಲ್ಲಿ ನಡೆಯಲಿದೆ?

ಈ ಬಾರಿಯ ಏಷ್ಯಾಕಪ್ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ.

ಏಷ್ಯಾಕಪ್‌ನಲ್ಲಿ ಎಷ್ಟು ತಂಡಗಳು ಆಡಲಿವೆ?

ಭಾರತ, ಶ್ರೀಲಂಕಾ, ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ನೇಪಾಳ ತಂಡಗಳು ಏಷ್ಯಾಕಪ್ ಆಡಲಿವೆ.

ಏಷ್ಯಾಕಪ್‌ನಲ್ಲಿ ಎಷ್ಟು ಪಂದ್ಯಗಳನ್ನು ಆಡಲಾಗುತ್ತದೆ?

ಏಷ್ಯಾಕಪ್‌ನಲ್ಲಿ 13 ಏಕದಿನ ಪಂದ್ಯಗಳು ನಡೆಯಲಿವೆ. ಪ್ರತಿ ತಂಡವು ಆಯಾ ಗುಂಪಿನಲ್ಲಿರುವ ಇತರ ತಂಡಗಳ ವಿರುದ್ಧ ತಲಾ ಒಂದೊಂದು ಪಂದ್ಯವನ್ನು ಆಡಲಿದೆ. ಆ ಬಳಿಕ ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಸೂಪರ್ ಫೋರ್ ಹಂತಕ್ಕೆ ಎಂಟ್ರಿಕೊಡಲಿವೆ. ಅಂತಿಮವಾಗಿ ಸೂಪರ್ ಫೋರ್ ಹಂತದಲ್ಲಿ ಅಗ್ರ ಸ್ಥಾನ ಪಡೆಯುವ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.

ಏಷ್ಯಾಕಪ್‌ನ ಲೈವ್ ಸ್ಟ್ರೀಮ್ ಅನ್ನು ಎಲ್ಲಿ ವೀಕ್ಷಿಸಬಹುದು?

ಡಿಸ್ನಿ + ಹಾಟ್‌ಸ್ಟಾರ್ ಏಷ್ಯಾಕಪ್ ಅನ್ನು ಲೈವ್ ಸ್ಟ್ರೀಮ್ ಮಾಡುತ್ತಿದ್ದು, ಏಷ್ಯಾಕಪ್‌ನ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ವೀಕ್ಷಿಸಬಹುದಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:52 pm, Thu, 13 July 23

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?