ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕೆ
Asia Cup 2023: ಶ್ರೇಯಸ್ ಅಯ್ಯರ್ 4ನೇ ಕ್ರಮಾಂಕಕ್ಕೆ ಸೂಕ್ತ ಬ್ಯಾಟರ್. ಏಕೆಂದರೆ ಈ ಕ್ರಮಾಂಕದಲ್ಲಿ ಇದುವರೆಗೆ 20 ಏಕದಿನ ಇನಿಂಗ್ಸ್ ಆಡಿರುವ ಅಯ್ಯರ್ ಕಲೆಹಾಕಿರುವುದು ಬರೋಬ್ಬರಿ 805 ರನ್ಗಳು. ಈ ವೇಳೆ 2 ಶತಕ ಹಾಗೂ 5 ಅರ್ಧಶತಕಗಳನ್ನು ಕೂಡ ಬಾರಿಸಿದ್ದಾರೆ.
ಏಷ್ಯಾಕಪ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಆಗಸ್ಟ್ 30 ರಿಂದ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಭಾರತ ತಂಡವು ಸೆಪ್ಟೆಂಬರ್ 2 ರಂದು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನು ಎದುರಿಸುವ ಮೂಲಕ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ.
ಇದಕ್ಕಾಗಿ ಟೀಮ್ ಇಂಡಿಯಾ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಭರ್ಜರಿ ಕಸರತ್ತಿನಲ್ಲಿದೆ. ಈ ಅಭ್ಯಾಸ ಪಂದ್ಯದ ವೇಳೆ ಟೀಮ್ ಇಂಡಿಯಾ ಪರ ಶ್ರೇಯಸ್ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದಾರೆ. ಇದರೊಂದಿಗೆ ಏಷ್ಯಾಕಪ್ನಲ್ಲಿ ಅಯ್ಯರ್ ನಾಲ್ಕನೇ ಸ್ಥಾನದಲ್ಲಿ ಆಡುವುದು ಖಚಿತವಾಗಿದೆ. ಅಲ್ಲದೆ ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಮುಂದುವರೆಯಲಿದ್ದಾರೆ.
ಮೊದಲ ದಿನದ ಅಭ್ಯಾಸ ಪಂದ್ಯ 🏏🏏
ಮೊದಲ ದಿನದ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಶುಭ್ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು. ಒಂದು ಗಂಟೆಗಳ ಅಭ್ಯಾಸ ಬಳಿಕ ಮತ್ತಿಬ್ಬರು ಬ್ಯಾಟರ್ಗಳು ಕಣಕ್ಕಿಳಿದರು.
ಇಲ್ಲಿ ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿದರೆ, ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಿದ್ದರು. ಇದಾದ ಬಳಿಕ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಜೋಡಿಯಾಗಿ ಬ್ಯಾಟಿಂಗ್ ಅಭ್ಯಾಸ ನಡೆಸಿದರು.
ಅಂದರೆ ಟೀಮ್ ಇಂಡಿಯಾ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಕಂಡು ಬರುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಇಲ್ಲಿ ಕೆಎಲ್ ರಾಹುಲ್ 5ನೇ ಕ್ರಮಾಂಕದಲ್ಲಿ ಆಡಿದರೆ, ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ಕ್ರಮವಾಗಿ 6ನೇ ಮತ್ತು 7ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
ಅಯ್ಯರ್ ಬೆಸ್ಟ್ 👍
ಶ್ರೇಯಸ್ ಅಯ್ಯರ್ 4ನೇ ಕ್ರಮಾಂಕಕ್ಕೆ ಸೂಕ್ತ ಬ್ಯಾಟರ್. ಏಕೆಂದರೆ ಈ ಕ್ರಮಾಂಕದಲ್ಲಿ ಇದುವರೆಗೆ 20 ಏಕದಿನ ಇನಿಂಗ್ಸ್ ಆಡಿರುವ ಅಯ್ಯರ್ ಕಲೆಹಾಕಿರುವುದು ಬರೋಬ್ಬರಿ 805 ರನ್ಗಳು. ಈ ವೇಳೆ 2 ಶತಕ ಹಾಗೂ 5 ಅರ್ಧಶತಕಗಳನ್ನು ಕೂಡ ಬಾರಿಸಿದ್ದಾರೆ.
ಅಂದರೆ ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ 47.35 ಸರಾಸರಿಯಲ್ಲಿ ರನ್ ಪೇರಿಸಿದ್ದಾರೆ. ಹೀಗಾಗಿಯೇ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿಯ ಬಳಿಕ ಶ್ರೇಯಸ್ ಅಯ್ಯರ್ ಕಣಕ್ಕಿಳಿಯುವುದು ಖಚಿತ ಎಂದೇ ಹೇಳಬಹುದು.
ಇದನ್ನೂ ಓದಿ: Asia Cup 2023 Schedule: ಏಷ್ಯಾಕಪ್ ವೇಳಾಪಟ್ಟಿ ಪ್ರಕಟ
ಏಷ್ಯಾಕಪ್ಗೆ ಟೀಮ್ ಇಂಡಿಯಾ ಹೀಗಿದೆ🏆
- ರೋಹಿತ್ ಶರ್ಮಾ (ನಾಯಕ)
- ಶುಭ್ಮನ್ ಗಿಲ್
- ವಿರಾಟ್ ಕೊಹ್ಲಿ
- ಶ್ರೇಯಸ್ ಅಯ್ಯರ್
- ಕೆಎಲ್ ರಾಹುಲ್ (ವಿಕೆಟ್ ಕೀಪರ್)
- ತಿಲಕ್ ವರ್ಮಾ
- ಇಶಾನ್ ಕಿಶನ್ (ವಿಕೆಟ್ ಕೀಪರ್)
- ಸೂರ್ಯಕುಮಾರ್ ಯಾದವ್
- ಹಾರ್ದಿಕ್ ಪಾಂಡ್ಯ (ಉಪನಾಯಕ)
- ರವೀಂದ್ರ ಜಡೇಜಾ
- ಅಕ್ಷರ್ ಪಟೇಲ್
- ಶಾರ್ದೂಲ್ ಠಾಕೂರ್
- ಕುಲ್ದೀಪ್ ಯಾದವ್
- ಮೊಹಮ್ಮದ್ ಸಿರಾಜ್
- ಜಸ್ಪ್ರೀತ್ ಬುಮ್ರಾ
- ಮೊಹಮ್ಮದ್ ಶಮಿ
- ಪ್ರಸಿದ್ಧ್ ಕೃಷ್ಣ
- ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).