Asia Cup 2023: ಬಹುನಿರೀಕ್ಷಿತ ಏಷ್ಯಾಕಪ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಆಗಸ್ಟ್ 30 ರಿಂದ ಶುರುವಾಗಲಿರುವ ಏಷ್ಯನ್ ತಂಡಗಳ ಕ್ರಿಕೆಟ್ ಕದನದಲ್ಲಿ ಒಟ್ಟು 6 ಟೀಮ್ಗಳು ಕಣಕ್ಕಿಳಿಯಲಿವೆ. ಈ ಆರು ತಂಡಗಳಲ್ಲಿ ಈಗಾಗಲೇ ಮೂರು ಟೀಮ್ಗಳ ಘೋಷಣೆಯಾಗಿದೆ. ಇನ್ನುಳಿದ ಮೂರು ತಂಡಗಳನ್ನು ಈ ವಾರದೊಳಗೆ ಪ್ರಕಟಿಸಬಹುದು.
ಈ ಬಾರಿಯ ಏಷ್ಯಾಕಪ್ ಪಾಕಿಸ್ತಾನ್ ಹಾಗೂ ಶ್ರೀಲಂಕಾದಲ್ಲಿ ನಡೆಯಲಿದೆ. ಅಂದರೆ 4 ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದರೆ, ಉಳಿದ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸಲಿದೆ.
ಏಷ್ಯಾಕಪ್ 2023 ರ ಆಯೋಜನೆಯ ಹಕ್ಕನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಹೊಂದಿದ್ದು, ಪಾಕ್ನಲ್ಲಿ ಟೂರ್ನಿ ನಡೆದರೆ ಭಾರತ ಭಾಗವಹಿಸುವುದಿಲ್ಲ ಎಂದು ತಿಳಿಸಿತ್ತು. ಹೀಗಾಗಿ ಭಾರತದ ಪಂದ್ಯಗಳನ್ನು ಹಾಗೂ ಫೈನಲ್ ಮ್ಯಾಚ್ಗಳನ್ನು ಶ್ರೀಲಂಕಾದಲ್ಲಿ ಆಯೋಜಿಸಲು ಪಾಕ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ.
ಕಳೆದ ಬಾರಿಯ ಏಷ್ಯಾಕಪ್ ಟಿ20 ಮಾದರಿಯಲ್ಲಿ ನಡೆದಿತ್ತು. ಆದರೆ ಈ ಬಾರಿ ಏಕದಿನ ಸ್ವರೂಪದಲ್ಲಿ ನಡೆಯಲಿದೆ. ಅಂದರೆ ಐಸಿಸಿ ಟೂರ್ನಿಯ ಮುಂಚಿತವಾಗಿ ಏಷ್ಯಾಕಪ್ ಜರುಗಿದರೆ, ಆ ಟೂರ್ನಿಯ ಸ್ವರೂಪದಲ್ಲೇ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತದೆ. ಅದರಂತೆ ಮುಂಬರುವ ಏಕದಿನ ವಿಶ್ವಕಪ್ ಹಿನ್ನಲೆಯಲ್ಲಿ ಈ ಬಾರಿ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದೆ.
ಏಷ್ಯಾಕಪ್ ಆರಂಭಕ್ಕೆ ಕೌಂಟ್ ಡೌನ್ ಶುರುವಾದರೂ ಟೀಮ್ ಇಂಡಿಯಾದ ಅಂತಿಮ ಬಳಗ ಇನ್ನೂ ಕೂಡ ನಿರ್ಧಾರವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಲ ಆಟಗಾರರು ಗಾಯಗೊಂಡಿರುವುದು. ಇಲ್ಲಿ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರ ಫಿಟ್ನೆಸ್ ವರದಿ ಬರಬೇಕಿದ್ದು, ಈ ವರದಿಗಾಗಿ ಆಯ್ಕೆ ಸಮಿತಿ ಕಾಯುತ್ತಿದೆ. ಅದರಂತೆ ಆಗಸ್ಟ್ 20 ರಂದು ಟೀಮ್ ಇಂಡಿಯಾನವನ್ನು ಘೋಷಿಸುವ ಸಾಧ್ಯತೆಯಿದೆ.
ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂಬರುವ ಸರಣಿಗಳ ವೇಳಾಪಟ್ಟಿ ಪ್ರಕಟ
ಪಾಕಿಸ್ತಾನ್ ತಂಡ:ಅಬ್ದುಲ್ಲಾ ಶಫೀಕ್, ಫಖರ್ ಝಮಾನ್, ಇಮಾಮ್ ಉಲ್ ಹಕ್, ಬಾಬರ್ ಆಝಮ್ (ನಾಯಕ), ಸಲ್ಮಾನ್ ಅಲಿ ಅಘಾ, ಇಫ್ತಿಕರ್ ಅಹ್ಮದ್, ತಯ್ಯಬ್ ತಾಹಿರ್, ಸೌದ್ ಶಕೀಲ್, ಮೊಹಮ್ಮದ್ ರಿಝ್ವಾನ್, ಮೊಹಮ್ಮದ್ ಹ್ಯಾರಿಸ್, ಶಾದಾಬ್ ಖಾನ್, ಮೊಹಮ್ಮದ್ ನವಾಝ್, ಉಸಾಮಾ ಮಿರ್, ಫಹೀಮ್ ಅಶ್ರಫ್, ಹ್ಯಾರಿಸ್ ರೌಫ್, ಮೊಹಮ್ಮದ್ ವಾಸಿಂ, ನಸೀಮ್ ಶಾ ಮತ್ತು ಶಾಹೀನ್ ಅಫ್ರಿದಿ.
ಬಾಂಗ್ಲಾದೇಶ್ ತಂಡ:ಶಕೀಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ತಂಝಿದ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದಯ್, ಮುಶ್ಫಿಕರ್ ರಹೀಮ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹ್ಮದ್, ಶೇಖ್ ಮಹಿದಿ, ನಸುಮ್ ಅಹ್ಮದ್, ಶಮೀಮ್ ಹೊಸೈನ್, ಶರೀಫುಲ್ ಇಸ್ಲಾಂ, ಇಬಾದತ್ ಹೊಸೈನ್, ನಯಿಮ್ ಶೇಖ್.
ನೇಪಾಳ ತಂಡ: ರೋಹಿತ್ ಪೌಡೆಲ್ (ನಾಯಕ), ಮಹಮದ್ ಆಸಿಫ್ ಶೇಖ್, ಕುಶಾಲ್ ಭುರ್ಟೆಲ್, ಲಲಿತ್ ರಾಜ್‌ಬಂಶಿ, ಭೀಮ್ ಶಾರ್ಕಿ, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಸಂದೀಪ್ ಲಮಿಚಾನೆ, ಕರಣ್ ಕೆಸಿ, ಗುಲ್ಶನ್ ಕುಮಾರ್ ಝಾ, ಆರಿಫ್ ಶೇಖ್, ಸೋಂಪಾಲ್ ಕಾಮಿ, ಪ್ರತೀಶ್ ಜಿಸಿ, ಕಿಶೋರ್ ಮಹತೋ, ಸಂದೀಪ್ ಜೊರ , ಅರ್ಜುನ್ ಸೌದ್, ಶ್ಯಾಮ್ ಧಾಕಲ್.
ಇನ್ನು ಅಫ್ಘಾನಿಸ್ತಾನ್, ಶ್ರೀಲಂಕಾ ಹಾಗೂ ಭಾರತ ತಂಡವನ್ನು ಘೋಷಿಸಬೇಕಿದೆ.
Published On - 8:13 pm, Thu, 17 August 23