Asia Cup 2023: ಬಿಸಿಸಿಐಗೆ ಹಿನ್ನಡೆ; ಪಾಕಿಸ್ತಾನದ ಪರ ನಿಂತ ಶ್ರೀಲಂಕಾ- ಬಾಂಗ್ಲಾದೇಶ..!

Asia Cup 2023: ಇದೀಗ ಜಿಯೋಟಿವಿ ಪ್ರಕಾರ, ಪಾಕಿಸ್ತಾನದ ಹೈಬ್ರಿಡ್ ಮಾದರಿಯನ್ನು ಎಸ್‌ಎಲ್‌ಸಿ ಮತ್ತು ಬಿಸಿಬಿ ಒಪ್ಪಿಕೊಂಡಿದ್ದು, ಅಫ್ಘಾನಿಸ್ತಾನ ಮಾತ್ರ ತಟಸ್ಥವಾಗಿ ಉಳಿದಿದೆ.

Asia Cup 2023: ಬಿಸಿಸಿಐಗೆ ಹಿನ್ನಡೆ; ಪಾಕಿಸ್ತಾನದ ಪರ ನಿಂತ ಶ್ರೀಲಂಕಾ- ಬಾಂಗ್ಲಾದೇಶ..!
ಏಷ್ಯಾಕಪ್ 2023
Follow us
|

Updated on:May 17, 2023 | 3:51 PM

ಏಷ್ಯಾಕಪ್ (Asia Cup 2023) ಆತಿಥ್ಯಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಪಾಕಿಸ್ತಾನದ (India vs Pakistan) ನಡುವಿನ ಉದ್ವಿಗ್ನತೆ ಮುಂದುವರೆದಿದೆ. ಇತ್ತೀಚೆಗೆ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪ್ರಸ್ತಾಪಿಸಿದ ಹೈಬ್ರಿಡ್ ಮಾದರಿಯನ್ನು (hybrid model) ಬಿಸಿಸಿಐ ತಿರಸ್ಕರಿಸಿತ್ತು. ಇದು ಸಾಲದೆಂಬಂತೆ ಭಾರತದ ಈ ನಿಲುವಿಗೆ ನೆರೆಯ ರಾಷ್ಟ್ರಗಳಾದ ಬಾಂಗ್ಲಾದೇಶ ಹಾಗೂ ಶ್ರೀಲಂಕಾ ಬೆಂಬಲ ಸೂಚಿಸಿವೆ ಎಂಬ ಸುದ್ದಿಯೂ ಹರಿದಾಡಿತ್ತು. ಆದರೆ ಈಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಈ ಹಿಂದೆ ಬಿಸಿಸಿಐಗೆ ಬೆಂಬಲ ನೀಡುವುದಾಗಿ ಹೇಳಿಕೊಂಡಿದ್ದ ಬಾಂಗ್ಲಾದೇಶ ಹಾಗೂ ಶ್ರೀಲಂಕಾ ಕ್ರಿಕೆಟ್ ಮಂಡಳಿಗಳು ಇದೀಗ ಪಾಕ್ ಪರ ವಾಲಿವೆ ಎಂಬ ಮಾಹಿತಿ ಹೊರಬಿದ್ದಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪ್ರಸ್ತಾಪಿಸಿದ ಹೈಬ್ರಿಡ್ ಮಾದರಿಯ ಪ್ರಕಾರ, ಪಾಕಿಸ್ತಾನವು ಏಷ್ಯಾಕಪ್ ಆಯೋಜಿಸಲಿದೆ. ಆದರೆ ಟೀಂ ಇಂಡಿಯಾದ ಪಂದ್ಯಗಳು ಮಾತ್ರ ಬೇರೆ ದೇಶದಲ್ಲಿ ನಡೆಯಲ್ಲಿವೆ. ಆದರೆ, ಬಿಸಿಸಿಐ (BCCI) ಮಾತ್ರ ಈ ಹೈಬ್ರಿಡ್ ಮಾದರಿಯ ಬದಲು ಪೂರ್ಣ ಪಂದ್ಯಾವಳಿಯನ್ನೇ ಬೇರೆಡೆಗೆ ಶಿಫ್ಟ್ ಮಾಡಬೇಕು ಎನ್ನುವ ಇರಾದೆ ಹೊಂದಿದೆ.

ಏಷ್ಯಾಕಪ್ 2023 ರ ಹೊಸ ಹೈಬ್ರಿಡ್ ಯೋಜನೆಗೆ ಬಾಂಗ್ಲಾದೇಶ ಮತ್ತು ಶ್ರೀಲಂಕಾ ಬೆಂಬಲ ನೀಡುತ್ತಿದ್ದಂತೆ ಕೊಂಚ ನಿಟ್ಟುಸಿರು ಬಿಟ್ಟಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ನಜಮ್ ಸೇಥಿ ಈ ಪ್ರಸ್ತಾಪವನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್​ಗೆ ಸಲ್ಲಿಸಿದ್ದಾರೆ. ಈಗ, ಬಿಸಿಸಿಐ ಕಾರ್ಯದರ್ಶಿಯಾಗಿರುವ ಎಸಿಸಿ ಅಧ್ಯಕ್ಷ ಜೈ ಶಾ ಅವರು ನಿರ್ಧಾರ ತೆಗೆದುಕೊಳ್ಳುವ ಮೊದಲು ಮುಂದಿನ ಎರಡು ದಿನಗಳಲ್ಲಿ ಈ ಪ್ರಸ್ತಾಪವನ್ನು ನಿರ್ಣಯಿಸಲಿದ್ದಾರೆ. ಆದಾಗ್ಯೂ, ಇಡೀ ಪಂದ್ಯಾವಳಿಯನ್ನು ಸ್ಥಳಾಂತರಿಸುವಲ್ಲಿ ಬಿಸಿಸಿಐ ಅಚಲವಾಗಿರುವುದರಿಂದ ಭಾರತ ಈ ಎಷ್ಯಾಕಪ್ ಟೂರ್ನಿಯನ್ನು ಬಹಿಷ್ಕರಿಸುವುದನ್ನು ಸಹ ಅಲ್ಲಗಳೆಯುವಂತಿಲ್ಲ.

ODI rankings: ಐಪಿಎಲ್ ನಡುವೆ ಟೀಂ ಇಂಡಿಯಾಗೆ ಬಿಗ್ ಶಾಕ್ ನೀಡಿದ ಪಾಕಿಸ್ತಾನ..!

ಪಿಸಿಬಿಯ ಪ್ರಸ್ತಾಪಗಳು ಯಾವುವು?

ಪ್ರಸ್ತಾಪ 1: ಇಡೀ ಟೂರ್ನಿಯನ್ನು ಪಾಕಿಸ್ತಾನ ಆಯೋಜಿಸಲಿದೆ. ಆದರೆ ಭಾರತ ತನ್ನ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಲಿದೆ.

ಪ್ರಸ್ತಾವನೆ 2: ಏಷ್ಯಾ ಕಪ್ ಟೂರ್ನಿಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗುವುದು. ಮೊದಲ ಸುತ್ತಿನ ಪಂದ್ಯಗಳಿಗೆ ಪಾಕಿಸ್ತಾನ ಆತಿಥ್ಯ ವಹಿಸಲಿದ್ದು, ಈ ಸುತ್ತಿನಲ್ಲಿ ಭಾರತದ ವಿರುದ್ಧ ಯಾವುದೇ ಪಂದ್ಯಗಳು ನಡೆಯುವುದಿಲ್ಲ. ಭಾರತ ತಂಡ ಎರಡನೇ ಸುತ್ತಿನಲ್ಲಿ ಆಡಲಿದೆ. ಅಲ್ಲದೆ ಟೂರ್ನಿಯ ಫೈನಲ್ ಪಂದ್ಯ ತಟಸ್ಥ ಸ್ಥಳದಲ್ಲಿ ನಡೆಯಲಿದೆ.

ಪಂದ್ಯಾವಳಿಗೆ ಶ್ರೀಲಂಕಾ ಹೆಚ್ಚು ಸೂಕ್ತವಾಗಿದೆ

“ನಾನು ಪ್ರಸ್ತಾಪವನ್ನು ನೋಡಿಲ್ಲ. ಆದರೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಂದ್ಯಾವಳಿಯನ್ನು ತಟಸ್ಥ ಸ್ಥಳದಲ್ಲಿ ಆಡಬೇಕೆಂದು ನಾವು ಬಯಸುತ್ತೇವೆ. ತಟಸ್ಥ ಸ್ಥಳವೆಂದರೆ ನಮ್ಮ ಆಯ್ಕೆ ಯುಎಇ ಅಲ್ಲ. ಹೆಚ್ಚು ಬಿಸಿಲಿರುವ ಯುಎಇಯಲ್ಲಿ ನಮ್ಮ ತಂಡವನ್ನು ಕಣಕ್ಕಿಳಿಸಿ ತಂಡವನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ. ಹೀಗಾಗಿ ಪಂದ್ಯಾವಳಿಗೆ ಶ್ರೀಲಂಕಾ ಹೆಚ್ಚು ಸೂಕ್ತವಾಗಿದೆ. ಸದ್ಯಕ್ಕೆ ನಾವು ಪಂದ್ಯಾವಳಿಯನ್ನು ಬಹಿಷ್ಕರಿಸುವ ಬಗ್ಗೆ ಏನನ್ನೂ ಚರ್ಚಿಸಿಲ್ಲ. ಮೊದಲು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳೋಣ. ನಂತರ ನಾವು ಒಂದು ನಿರ್ಧಾರಕ್ಕೆ ಬರುತ್ತೇವೆ ”ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಇನ್ಸೈಡ್ಸ್ಪೋರ್ಟ್ಗೆ ತಿಳಿಸಿದ್ದಾರೆ.

ವಾಸ್ತವವಾಗಿ ಹೇಳಬೇಕೆಂದರೆ, ಪಿಸಿಬಿ ಪ್ರಸ್ತಾಪಿಸಿರುವ “ಹೈಬ್ರಿಡ್” ಮಾದರಿಯನ್ನು ಬಿಸಿಸಿಐ ತಿರಸ್ಕರಿಸಿದೆ. ಬದಲಾಗಿ, ಬಿಸಿಸಿಐ ಇಡೀ ಟೂರ್ನಿಯನ್ನು ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸಲು ಕೇಳಿಕೊಂಡಿದೆ. ಬಿಸಿಸಿಐನ ಈ ನಿರ್ಧಾರವನ್ನು ಶ್ರೀಲಂಕಾ ಕ್ರಿಕೆಟ್ ಬೆಂಬಲಿಸಿದ್ದರೆ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮಾತ್ರ ಪಿಸಿಬಿ ನಿರ್ಧಾರವನ್ನು ಬೆಂಬಲಿಸಿತ್ತು. ಇತ್ತ ಲಂಕಾ ಮಂಡಳಿ ಬಿಸಿಸಿಐಗೆ ಬೆಂಬಲ ನೀಡಿದರೆ, ಉಭಯ ದೇಶಗಳ ನಡುವಣ ಟೆಸ್ಟ್ ಸರಣಿಯನ್ನು ರದ್ದುಗೊಳಿಸುವುದಾಗಿ ಪಾಕಿಸ್ತಾನ, ಶ್ರೀಲಂಕಾ ಮಂಡಳಿಗೆ ಬೆದರಿಕೆ ಹಾಕಿದೆ.

ಇದೀಗ ಜಿಯೋಟಿವಿ ಪ್ರಕಾರ, ಪಾಕಿಸ್ತಾನದ ಹೈಬ್ರಿಡ್ ಮಾದರಿಯನ್ನು ಎಸ್‌ಎಲ್‌ಸಿ ಮತ್ತು ಬಿಸಿಬಿ ಒಪ್ಪಿಕೊಂಡಿದ್ದು, ಅಫ್ಘಾನಿಸ್ತಾನ ಮಾತ್ರ ತಟಸ್ಥವಾಗಿ ಉಳಿದಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:48 pm, Wed, 17 May 23

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ