ಎರಡು ದಿನಗಳ ವಿರಾಮದ ಬಳಿಕ ಏಷ್ಯಾಕಪ್ 2023 ರ (Asia Cup 2023) ಸೂಪರ್-4 ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಸೂಪರ್-4 ಹಂತದ ದ್ವಿತೀಯ ಪಂದ್ಯದಲ್ಲಿ ಇಂದು ದಸುನ್ ಶನಕ ನಾಯಕತ್ವದ ಶ್ರೀಲಂಕಾ ಮತ್ತು ಶಕೀಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡ ಮುಖಾಮುಖಿ ಆಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ. ಬಾಂಗ್ಲಾಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ ಆಗಿರುವುದರಿಂದ ಹೈವೋಲ್ಟೇಜ್ ಮ್ಯಾಚ್ ನಿರೀಕ್ಷಿಸಲಾಗಿದೆ.
ಲಾಹೋರ್‌ನಲ್ಲಿ ನಡೆದ ಸೂಪರ್ 4 ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಏಳು ವಿಕೆಟ್‌ಗಳ ಸೋಲನ್ನು ಅನುಭವಿಸಿದ ನಂತರ, ಬಾಂಗ್ಲಾದೇಶವು ಶ್ರೀಲಂಕಾ ವಿರುದ್ಧ ಗೆಲ್ಲಲೇಬೇಕಾದ ಪರಿಸ್ಥಿತಿಯಲ್ಲಿದೆ. ಇಂದಿನ ಪಂದ್ಯದಲ್ಲಿ ಬಾಂಗ್ಲಾ ಸೋಲುಂಡರೆ ಏಷ್ಯಾಕಪ್ ಅಭಿಯಾನವನ್ನು ಅಂತ್ಯಗೊಳಿಸಲಿದೆ. ಬಾಂಗ್ಲಾ ತಂಡ ಎಡವುತ್ತಿರುವುದು ಬ್ಯಾಟಿಂಗ್ ವಿಭಾಗದಲ್ಲಿ ಇದನ್ನು ಸರಿಪಡಿಸಿಕೊಳ್ಳಬೇಕಿದೆ.
ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ಗಾಲ್ಫ್ ಆಡಿದ ಎಂಎಸ್ ಧೋನಿ
ಗುಂಪು ಹಂತದಲ್ಲಿ, ನಜ್ಮಲ್ ಶಾಂಟೊ ಮತ್ತು ಮೆಹಿದಿ ಹಸನ್ ಮಿರಾಜ್ ಅವರ ಶತಕಗಳ ನೆರವಿನಿಂದ ಬಾಂಗ್ಲಾದೇಶವು ಅಫ್ಘಾನಿಸ್ತಾನದ ವಿರುದ್ಧ 5 ವಿಕೆಟ್ ನಷ್ಟಕ್ಕೆ 334 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಆದಾಗ್ಯೂ, ಶ್ರೀಲಂಕಾ ಮತ್ತು ಪಾಕಿಸ್ತಾನದ ಬೌಲಿಂಗ್ ದಾಳಿಗೆ ನಲುಗಿ ಕ್ರಮವಾಗಿ 164 ಮತ್ತು 193 ರ ಸಾಧಾರಣ ಮೊತ್ತವನ್ನು ಕಲೆಹಾಕಿತಷ್ಟೆ. ಬಾಂಗ್ಲಾ ನಾಯಕ ಶಕೀಬ್ ಅಲ್ ಹಸನ್ ಬ್ಯಾಟ್‌ನಿಂದ ಹೇಳಿಕೊಳ್ಳುವಂತಹ ರನ್ ಬರುತ್ತಿಲ್ಲ.
ಇತ್ತ ಶ್ರೀಲಂಕಾವು ಮಹೇಶ್ ತೀಕ್ಷಣ ಮತ್ತು ಮಥೀಶ ಪತಿರಣರಂತಹ ಬೌಲರ್‌ಗಳೊಂದಿಗೆ ಬೌಲಿಂಗ್ ಬೌಲಿಂಗ್ ವಿಭಾಗದಲ್ಲಿ ಮಾರಕವಾಗಿದೆ. ಆಗಸ್ಟ್ 31 ರಂದು ನಡೆದ ಬಿ ಗುಂಪಿನ ಲೀಗ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 200 ರನ್ಗಳ ಒಳಗೆ ನಿರ್ಬಂಧಿಸುವ ಮೂಲಕ ಪತಿರಾನ ಮತ್ತು ತೀಕ್ಷಣ ಆರು ವಿಕೆಟ್‌ಗಳನ್ನು ಕಬಳಿಸಿದ್ದರು. ನಾಯಕ ದಸುನ್ ಶನಕ ಅವರಿಂದ ದೊಡ್ಡ ಇನ್ನಿಂಗ್ಸ್ ನಿರೀಕ್ಷಿಸಲಾಗಿದೆ.
ಶ್ರೀಲಂಕಾ-ಬಾಂಗ್ಲಾದೇಶ ನಡುವಿನ ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಪಂದ್ಯಕ್ಕೆ ಅರ್ಧಗಂಟೆ ಮೊದಲು ಟಾಸ್ ನಡೆಯಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೋಡಬಹುದು (ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 3 ಮತ್ತು ಸ್ಟಾರ್ ಸ್ಪೋರ್ಟ್ಸ್ ಸೆಲೆಕ್ಟ್ ಎಚ್‌ಡಿ). ಇದಲ್ಲದೆ, ಇದನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನ ಮೊಬೈಲ್‌ನಲ್ಲಿಯೂ ಉಚಿತವಾಗಿ ವೀಕ್ಷಿಸಬಹುದು.
ಬಾಂಗ್ಲಾದೇಶ: ಶಕೀಬ್ ಅಲ್ ಹಸನ್ (ನಾಯಕ), ಅನಾಮುಲ್ ಹಕ್ ಬಿಜೋಯ್, ಲಿಟ್ಟನ್ ದಾಸ್, ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್ ಧ್ರುಬೋ, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಮುಸ್ತಾಫಿಜುರ್ ರಹಮಾನ್, ಶಕ್ ಮಹ್ಮದ್ ಇಸ್ಲಾಂ, ಶಾಕ್ ಮಹ್ಮದ್ ಇಸ್ಲಾಂ, ನಾಸ್ , ನಯಿಮ್ ಶೇಖ್, ಶಮೀಮ್ ಹೊಸೈನ್, ತಂಝೀದ್ ಹಸನ್ ತಮೀಮ್, ತಂಝಿಮ್ ಹಸನ್ ಸಾಕಿಬ್.
ಶ್ರೀಲಂಕಾ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾನಕ, ದಿಮುತ್ ಕರುಣಾರತ್ನ, ಕುಸಲ್ ಜನಿತ್ ಪೆರೇರಾ, ಕುಸಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಮತೀಶ ಪತಿರಣ, ಬಿ ಕಸುನ್ ರಜಿತ, ಬಿ. ಫೆರ್ನಾಂಡೋ, ಪ್ರಮೋದ್ ಮದುಶನ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ