Asia Cup 2023: ಏಷ್ಯಾಕಪ್ ಸೂಪರ್-4 ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
Asia Cup 2023 Super 4 Schedule: ಸೂಪರ್-4 ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮತ್ತೆ ಮುಖಾಮುಖಿಯಾಗಲಿದೆ. ಸೆಪ್ಟೆಂಬರ್ 10 ರಂದು ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ಈ ಪಂದ್ಯ ನಡೆಯಲಿದ್ದು, ಹೈವೋಲ್ಟೇಜ್ ಪೈಪೋಟಿಯನ್ನು ನಿರೀಕ್ಷಿಸಬಹುದು. ಒಂದು ವೇಳೆ ಉಭಯ ತಂಡಗಳು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದರೆ ಫೈನಲ್ನಲ್ಲೂ ಮತ್ತೆ ಮುಖಾಮುಖಿಯಾಗಬಹುದು
ಏಷ್ಯಾಕಪ್ನ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿದೆ. ಈ ಸುತ್ತಿನಲ್ಲಿ ಅತ್ಯಧಿಕ ಪಾಯಿಂಟ್ಸ್ ಕಲೆಹಾಕಿದ ನಾಲ್ಕು ತಂಡಗಳು ಇದೀಗ ಸೂಪರ್-4 ಹಂತಕ್ಕೇರಿದೆ. ಇನ್ನು ನೇಪಾಳ ಹಾಗೂ ಅಫ್ಘಾನಿಸ್ತಾನ್ ತಂಡಗ:ಳು ಟೂರ್ನಿಯಿಂದ ಹೊರಬಿದ್ದಿದೆ. ಸೂಪರ್-4 ಹಂತದಲ್ಲಿ ಭಾರತ, ಪಾಕಿಸ್ತಾನ್, ಬಾಂಗ್ಲಾದೇಶ್ ಹಾಗೂ ಶ್ರೀಲಂಕಾ ತಂಡಗಳು ಸೆಣಸಲಿದೆ. ಈ ಸುತ್ತಿನಲ್ಲಿ ಪ್ರತಿ ತಂಡಗಳು ಮೂರು ಪಂದ್ಯಗಳನ್ನಾಡಲಿದ್ದು, ಹೀಗಾಗಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ಸೆಮಿಫೈನಲ್ ಇಲ್ಲ-ಫೈನಲ್ಗೆ ಎಂಟ್ರಿ:
ಸೂಪರ್-4 ಹಂತದಲ್ಲಿ ಪ್ರತಿ ತಂಡಗಳು ಉಳಿದ ಮೂರು ತಂಡಗಳ ವಿರುದ್ಧ ಒಂದೊಂದು ಪಂದ್ಯವಾಡಲಿದೆ. ಇಲ್ಲೂ ಕೂಡ ಅಂಕ ಪಟ್ಟಿ ಇರಲಿದ್ದು, ಈ ಪಾಯಿಂಟ್ಸ್ ಟೇಬಲ್ನಲ್ಲಿ ಅತ್ಯಧಿಕ ಅಂಕ ಕಲೆಹಾಕುವ ಮೊದಲೆರಡು ತಂಡಗಳು ಫೈನಲ್ಗೆ ಪ್ರವೇಶಿಸಲಿದೆ.
ಅಂದರೆ ಇಲ್ಲಿ ಯಾವುದೇ ಸೆಮಿ ಫೈನಲ್ ಪಂದ್ಯವಿರುವುದಿಲ್ಲ. ಬದಲಾಗಿ ಸೂಪರ್-4 ಹಂತದ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳು ಫೈನಲ್ಗೆ ಅರ್ಹತೆ ಪಡೆಯಲಿದೆ.
ಕೊಲಂಬೊದಲ್ಲಿ ಸೂಪರ್ ಫೈಟ್:
ಸೂಪರ್ ಫೋರ್ ಹಂತದ ಮೊದಲ ಪಂದ್ಯವು ಲಾಹೋರ್ನ ಗಡ್ಡಾಫಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನುಳಿದ ಎಲ್ಲಾ ಪಂದ್ಯಗಳ ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲೇ ಜರುಗಲಿದೆ. ಹಾಗೆಯೇ ಫೈನಲ್ ಪಂದ್ಯಕ್ಕೂ ಶ್ರೀಲಂಕಾ ಆತಿಥ್ಯವಹಿಸಲಿದೆ.
ಭಾರತ-ಪಾಕ್ ಮತ್ತೆ ಮುಖಾಮುಖಿ:
ಸೂಪರ್-4 ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮತ್ತೆ ಮುಖಾಮುಖಿಯಾಗಲಿದೆ. ಸೆಪ್ಟೆಂಬರ್ 10 ರಂದು ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ಈ ಪಂದ್ಯ ನಡೆಯಲಿದ್ದು, ಹೈವೋಲ್ಟೇಜ್ ಪೈಪೋಟಿಯನ್ನು ನಿರೀಕ್ಷಿಸಬಹುದು. ಒಂದು ವೇಳೆ ಉಭಯ ತಂಡಗಳು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದರೆ ಫೈನಲ್ನಲ್ಲೂ ಮತ್ತೆ ಮುಖಾಮುಖಿಯಾಗಬಹುದು. ಆದರೆ ಏಷ್ಯಾಕಪ್ ಇತಿಹಾಸದಲ್ಲಿ ಭಾರತ ಹಾಗೂ ಪಾಕಿಸ್ತಾನ್ ತಂಡಗಳು ಇದುವರೆಗೆ ಫೈನಲ್ನಲ್ಲಿ ಮುಖಾಮುಖಿಯಾಗಿಲ್ಲ ಎಂಬುದು ವಿಶೇಷ. ಹೀಗಾಗಿ ಇದೇ ಮೊದಲ ಬಾರಿಗೆ ಇಂಡೊ-ಪಾಕ್ ನಡುವಣ ಫೈನಲ್ ಫೈಟ್ ಅನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.
ಏಷ್ಯಾಕಪ್ ಸೂಪರ್-4 ಹಂತದ ವೇಳಾಪಟ್ಟಿ ಹೀಗಿದೆ:
- ಸೆಪ್ಟೆಂಬರ್ 6- ಪಾಕಿಸ್ತಾನ್ Vs ಬಾಂಗ್ಲಾದೇಶ್ (ಲಾಹೋರ್)
- ಸೆಪ್ಟೆಂಬರ್ 9- ಶ್ರೀಲಂಕಾ Vs ಬಾಂಗ್ಲಾದೇಶ್ (ಕೊಲಂಬೊ)
- ಸೆಪ್ಟೆಂಬರ್ 10- ಭಾರತ Vs ಪಾಕಿಸ್ತಾನ್ (ಕೊಲಂಬೊ)
- ಸೆಪ್ಟೆಂಬರ್ 12- ಭಾರತ Vs ಶ್ರೀಲಂಕಾ (ಕೊಲಂಬೊ)
- ಸೆಪ್ಟೆಂಬರ್ 14- ಪಾಕಿಸ್ತಾನ್ Vs ಶ್ರೀಲಂಕಾ (ಕೊಲಂಬೊ)
- ಸೆಪ್ಟೆಂಬರ್ 15- ಭಾರತ Vs ಬಾಂಗ್ಲಾದೇಶ್ (ಕೊಲಂಬೊ)
- ಸೆಪ್ಟೆಂಬರ್ 17- ಫೈನಲ್ ಪಂದ್ಯ (ಕೊಲಂಬೊ)