Asia Cup 2023 Points Table: ಅಗ್ರಸ್ಥಾನದಲ್ಲಿ ಪಾಕ್, ಲೀಗ್​ನಿಂದ ಬಾಂಗ್ಲಾ ಬಹುತೇಕ ಔಟ್! ಭಾರತಕ್ಕೆ ಯಾವ ಸ್ಥಾನ?

Asia Cup 2023 Points Table: ಶ್ರೀಲಂಕಾ ವಿರುದ್ಧ ಸೋಲನುಭವಿಸುವ ಮೂಲಕ ಸೂಪರ್ 4 ಹಂತದಲ್ಲಿ ಆಡಿದ ಎರಡು ಪಂದ್ಯಗಳಲ್ಲಿ ಬಾಂಗ್ಲಾದೇಶ ಸೋತಿದೆ. ಇದಕ್ಕೂ ಮುನ್ನ ಬುಧವಾರ (ಸೆಪ್ಟೆಂಬರ್ 6) ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಶ್ರೀಲಂಕಾ ಏಳು ವಿಕೆಟ್‌ಗಳಿಂದ ಸೋತಿತ್ತು. ಇದೀಗ ಶ್ರೀಲಂಕಾ ವಿರುದ್ಧ ಸೋತ ನಂತರ, ಏಷ್ಯಾಕಪ್ 2023 ರ ಫೈನಲ್ ತಲುಪುವ ಬಾಂಗ್ಲಾದೇಶದ ಭರವಸೆ ಬಹುತೇಕ ಅಂತ್ಯಗೊಂಡಿದೆ.

Asia Cup 2023 Points Table: ಅಗ್ರಸ್ಥಾನದಲ್ಲಿ ಪಾಕ್, ಲೀಗ್​ನಿಂದ ಬಾಂಗ್ಲಾ ಬಹುತೇಕ ಔಟ್! ಭಾರತಕ್ಕೆ ಯಾವ ಸ್ಥಾನ?
ಏಷ್ಯಾಕಪ್ ಪಾಯಿಂಟ್ ಪಟ್ಟಿ
Follow us
|

Updated on:Sep 10, 2023 | 10:26 AM

ಏಷ್ಯಾಕಪ್ 2023 ರ (Asia Cup 2023) ಸೂಪರ್-4 ಸುತ್ತಿನಲ್ಲಿ ಹಾಲಿ ಚಾಂಪಿಯನ್ ಶ್ರೀಲಂಕಾ ತನ್ನ ಮೊದಲ ಪಂದ್ಯವನ್ನು ಗೆದ್ದುಕೊಂಡಿದೆ. ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ತಂಡ ಬಾಂಗ್ಲಾದೇಶವನ್ನು (Sri Lanka beat Bangladesh) 30 ರನ್‌ಗಳಿಂದ ಸೋಲಿಸಿ ತನ್ನ ಗೆಲುವಿನ ನಾಗಲೋಟವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ, ಸದೀರ ಸಮರವಿಕ್ರಮ (Sadeera Samarawickrama) ಅವರ ಅಮೋಘ ಇನ್ನಿಂಗ್ಸ್‌ನ ಆಧಾರದ ಮೇಲೆ 9 ವಿಕೆಟ್‌ಗಳನ್ನು ಕಳೆದುಕೊಂಡು 257 ರನ್ ಕಲೆಹಾಕಿತು. ಇದಕ್ಕೆ ಉತ್ತರವಾಗಿ ಬಾಂಗ್ಲಾದೇಶ ತಂಡ 50 ಓವರ್‌ಗಳಲ್ಲಿ 227 ರನ್‌ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನ ಮೂಲಕ ಶ್ರೀಲಂಕಾ ಸೂಪರ್ ಸುತ್ತಿನಲ್ಲಿ 2 ಅಂಕ ಪಡದರೆ, ಇತ್ತ ಬಾಂಗ್ಲಾದೇಶ ತನ್ನ ಸತತ ಎರಡನೇ ಸೋಲಿನೊಂದಿಗೆ ಫೈನಲ್‌ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ.

ಶ್ರೀಲಂಕಾ ವಿರುದ್ಧ ಸೋಲನುಭವಿಸುವ ಮೂಲಕ ಸೂಪರ್ 4 ಹಂತದಲ್ಲಿ ಆಡಿದ ಎರಡು ಪಂದ್ಯಗಳಲ್ಲಿ ಬಾಂಗ್ಲಾದೇಶ ಸೋತಿದೆ. ಇದಕ್ಕೂ ಮುನ್ನ ಬುಧವಾರ (ಸೆಪ್ಟೆಂಬರ್ 6) ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಶ್ರೀಲಂಕಾ ಏಳು ವಿಕೆಟ್‌ಗಳಿಂದ ಸೋತಿತ್ತು. ಇದೀಗ ಶ್ರೀಲಂಕಾ ವಿರುದ್ಧ ಸೋತ ನಂತರ, ಏಷ್ಯಾಕಪ್ 2023 ರ ಫೈನಲ್ ತಲುಪುವ ಬಾಂಗ್ಲಾದೇಶದ ಭರವಸೆ ಬಹುತೇಕ ಅಂತ್ಯಗೊಂಡಿದೆ.

IND vs PAK: ಪಾಕ್ ತಂಡ ಮಾಡಿಕೊಂಡಿರುವ ಎಡವಟ್ಟಿನ ಲಾಭ ಪಡೆಯುತ್ತಾ ಟೀಂ ಇಂಡಿಯಾ?

ಅಗ್ರಸ್ಥಾನದಲ್ಲಿ ಪಾಕಿಸ್ತಾನ

ಮತ್ತೊಂದೆಡೆ, ಶ್ರೀಲಂಕಾ 2 ಅಂಕ ಕಲೆಹಾಕುವುದರೊಂದಿಗೆ ಅಂಕಪಟ್ಟಿಯಲ್ಲಿ ನಂ. 2 ಸ್ಥಾನಕ್ಕೆ ಏರಿದೆ. ಲಂಕಾದ ನೆಟ್ ರನ್​ರೇಟ್ +0.420 ಆಗಿದೆ. ಇತ್ ಕೊಲಂಬೊದಲ್ಲಿ ಭಾನುವಾರ (ಸೆಪ್ಟೆಂಬರ್ 10) ಭಾರತವನ್ನು ಎದುರಿಸಲಿರುವ ಬಾಬರ್ ಪಡೆ ಸೂಪರ್ 4 ಪಾಯಿಂಟ್‌ ಪಟ್ಟಿಯಲ್ಲಿ ಒಟ್ಟು ಎರಡು ಅಂಕ ಮತ್ತು +1.051 ರ ನಿವ್ವಳ ರನ್ ರೇಟ್‌ನೊಂದಿಗೆ ಅಗ್ರಸ್ಥಾನದಲ್ಲಿದೆ. ಇನ್ನು ಭಾನುವಾರ ನಡೆಯಲ್ಲಿರುವ ಪಂದ್ಯದಲ್ಲಿ ಪಾಕಿಸ್ತಾನ, ಭಾರತವನ್ನು ಸೋಲಿಸಿದರೆ ನೇರವಾಗಿ ಫೈನಲ್‌ಗೆ ಪ್ರವೇಶಿಸಲಿದೆ. ಹಾಗೆಯೇ ಪ್ರಸ್ತುತ ಮೂರನೇ ಸ್ಥಾನದಲ್ಲಿರುವ ಭಾರತ ಸೂಪರ್ 4 ಸುತ್ತಿನಲ್ಲಿ ಯಾವುದೇ ಪಂದ್ಯವನ್ನಾಡಿಲ್ಲ. ಹೀಗಾಗಿ ಪಾಕ್ ವಿರುದ್ಧ ಭಾರತ ವೃಹತ್ ಗೆಲುವು ದಾಖಲಿಸಿದರೆ, 2ನೇ ಸ್ಥಾನಕ್ಕೇರಲಿದೆ. ಉಳಿದಂತೆ ಬಾಂಗ್ಲಾದೇಶ ನಾಲ್ಕನೇ ಸ್ಥಾನದಲ್ಲಿದೆ.

ಅತ್ಯಧಿಕ ರನ್‌

ಇದೀಗ ಪಂದ್ಯಾವಳಿಯಿಂದ ಹೊರಗುಳಿದಿರುವ ಬಾಂಗ್ಲಾದೇಶದ ಸ್ಟಾರ್ ಬ್ಯಾಟರ್ ನಜ್ಮುಲ್ ಹೊಸೈನ್ ಶಾಂಟೊ ಪ್ರಸ್ತುತ ಅಗ್ರ ರನ್ ಗಳಿಸಿದವರ ಪಟ್ಟಿಯಲ್ಲಿ ನಂ. 1 ಸ್ಥಾನದಲ್ಲಿದ್ದಾರೆ. ಎರಡು ಪಂದ್ಯಗಳಲ್ಲಿ, ಒಂದು ಶತಕ ಮತ್ತು ಒಂದು ಅರ್ಧಶತಕದ ಸಹಾಯದಿಂದ, ಅವರು ಒಟ್ಟು 193 ರನ್ ಕಲೆಹಾಕಿದ್ದಾರೆ. ಪಾಕಿಸ್ತಾನದ ನಾಯಕ ಬಾಬರ್ 168 ರನ್​ಗಳೊಂದಿಗೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಶ್ರೀಲಂಕಾದ ಸಮರವಿಕ್ರಮ ಮತ್ತು ಮೆಂಡಿಸ್ ಕ್ರಮವಾಗಿ 150 ಮತ್ತು 147 ರನ್ ಕಲೆ ಹಾಕಿ 3 ಮತ್ತು 4ನೇ ಸ್ಥಾನದಲ್ಲಿದ್ದಾರೆ.

ಅತ್ಯಧಿಕ ವಿಕೆಟ್‌

ಪಾಕಿಸ್ತಾನದ ಸ್ಟಾರ್ ವೇಗಿ ಹ್ಯಾರಿಸ್ ರೌಫ್ ಏಷ್ಯಾಕಪ್ 2023 ರಲ್ಲಿ ಜಂಟಿ ಪ್ರಮುಖ ವಿಕೆಟ್-ಟೇಕರ್ ಎನಿಸಕೊಂಡಿದ್ದಾರೆ. ಆಡಿರುವ ಮೂರು ಪಂದ್ಯಗಳಲ್ಲಿ ಅವರು ಒಂಬತ್ತು ವಿಕೆಟ್ ಪಡೆದಿದ್ದು, ಬಾಂಗ್ಲಾದೇಶದ ವೇಗದ ಬೌಲರ್ ತಸ್ಕಿನ್ ಅಹ್ಮದ್ ಅವರೊಂದಿಗೆ ಜಂಟಿ ಮೊದಲ ಸ್ಥಾನದಲ್ಲಿದ್ದಾರೆ. ತಸ್ಕಿನ್ ಕೂಡ ಒಂಬತ್ತು ವಿಕೆಟ್ ಉರುಳಿಸಿದ್ದಾರೆ. ಇನ್ನು ಶ್ರೀಲಂಕಾದ ಪತಿರಾನಾ ಮೂರು ಪಂದ್ಯಗಳಿಂದ ಎಂಟು ವಿಕೆಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಮೂವರು ವೇಗಿಗಳಾದ ನಸೀಮ್ ಶಾ, ಶಾಹೀನ್ ಶಾ ಆಫ್ರಿದಿ ಮತ್ತು ಶೋರಿಫುಲ್ ಇಸ್ಲಾಂ ಇಲ್ಲಿಯವರೆಗೆ ತಲಾ ಏಳು ವಿಕೆಟ್ ಪಡೆದಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:26 am, Sun, 10 September 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ