ಕ್ರಿಕೆಟ್ ಲೋಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಟೀಂ ಇಂಡಿಯಾ (Team India), ಆಗಸ್ಟ್ 30 ರಿಂದ ಆರಂಭವಾಗಲಿರುವ ಏಷ್ಯಾಕಪ್ನಲ್ಲಿ (Asia Cup 2023) ಪಾಕಿಸ್ತಾನದ (Pakistan) ಹೆಸರಿರುವ ಜೆರ್ಸಿಯನ್ನು ತೊಟ್ಟು ಕಣಕ್ಕಿಳಿಯಲಿದೆ. ಇದೀಗ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ, ಪಾಕಿಸ್ತಾನದ ಹೆಸರಿರುವ ಜೆರ್ಸಿ ತೊಟ್ಟಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿವೆ. ವಾಸ್ತವವಾಗಿ ಈ ಬಾರಿಯ ಏಷ್ಯಾಕಪ್ಗೆ ಪಾಕಿಸ್ತಾನ ಆತಿಥ್ಯವಹಿಸುತ್ತಿದೆ. ಹಾಗಾಗಿ ಏಷ್ಯಾಕಪ್ನಲ್ಲಿ ಭಾಗವಹಿಸುವ ಎಲ್ಲ ತಂಡಗಳ ಜೆರ್ಸಿ ಮೇಲೆ ಪಾಕಿಸ್ತಾನದ ಹೆಸರನ್ನು ಮುದ್ರಿಸಲಾಗಿರುತ್ತದೆ. ಹೀಗಾಗಿ ವಿರಾಟ್ ಕೊಹ್ಲಿ (Virat Kohli), ರೋಹಿತ್ ಶರ್ಮಾ (Rohit Sharma) ಸೇರಿದಂತೆ ಟೀಂ ಇಂಡಿಯಾದ ಎಲ್ಲ ಆಟಗಾರರು ಕೂಡ ಪಾಕಿಸ್ತಾನದ ಹೆಸರಿರುವ ಜೆರ್ಸಿ ಧರಿಸಿ ಮೈದಾನಕ್ಕಿಳಿಯಲಿದ್ದಾರೆ.
ಆಗಸ್ಟ್ 30 ರಿಂದ ಆರಂಭವಾಗಲಿರುವ ಏಷ್ಯಾಕಪ್ನ ಮೊದಲ ಪಂದ್ಯದಲ್ಲಿ ಜಂಟಿ ಆತಿಥೇಯ ಪಾಕಿಸ್ತಾನ ತಂಡ ನೇಪಾಳ ತಂಡವನ್ನು ಎದುರಿಸಲಿದೆ. ವಾಸ್ತವವಾಗಿ ಈ ಬಾರಿಯ ಏಷ್ಯಾಕಪ್ ಆಯೋಜನೆಯ ಹಕ್ಕನ್ನು ಪಾಕಿಸ್ತಾನ ಪಡೆದುಕೊಂಡಿತ್ತು. ಆದರೆ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಹದಗೆಟ್ಟಿರುವುದರಿಂದಾಗಿ, ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐ ಹಿಂದೇಟು ಹಾಕಿತು. ಹೀಗಾಗಿ ಈ ಬಾರಿಯ ವಿಶ್ವಕಪ್ಗೆ ಶ್ರೀಲಂಕಾ ಹಾಗೂ ಪಾಕಿಸ್ತಾನ ಜಂಟಿ ಆತಿಥ್ಯ ನೀಡುತ್ತಿವೆ.
27 ಎಸೆತಗಳಲ್ಲಿ 60 ರನ್! ಏಷ್ಯಾಕಪ್ ತಂಡದಲ್ಲಿರುವ ಪಾಕ್ ಬೌಲರ್ಗೆ ಬೆವರಿಳಿಸಿದ ಕ್ಲಾಸೆನ್
ಆದಾಗ್ಯೂ, ಪಾಕಿಸ್ತಾನವು ಪ್ರಾಥಮಿಕ ಆತಿಥೇಯವಾಗಿರುವುದರಿಂದ ಎಲ್ಲಾ ತಂಡಗಳ ಜರ್ಸಿಯ ಮೇಲೆ ಆತಿಥ್ಯವಹಿಸುತ್ತಿರುವ ದೇಶದ ಹೆಸರನ್ನು ಮುದ್ರಿಸಲಾಗಿದೆ. ಇನ್ನು ಭಾರತ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಸೆಪ್ಟೆಂಬರ್ 2 ರಂದು ಆಡಲಿದೆ. ಕ್ಯಾಂಡಿಯಲ್ಲಿ ಈ ಪಂದ್ಯ ನಡೆಯಲಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ಕ್ರೀಡಾಂಗಣ ಹೌಸ್ಫುಲ್ ಆಗುವ ನಿರೀಕ್ಷೆ ಇದೆ. ಈ ಪಂದ್ಯಾವಳಿಯಲ್ಲಿ ಉಭಯ ತಂಡಗಳು ಮೂರು ಬಾರಿ ಮುಖಾಮುಖಿಯಾಗುವ ಸಾಧ್ಯತೆ ಇದೆ.
ಲೀಗ್ ಹಂತದಲ್ಲಿ ಒಂದು ಪಂದ್ಯವನ್ನಾಡುವ ಉಭಯ ತಂಡಗಳು, ಆ ಬಳಿಕ ಸೂಪರ್ 4 ಹಂತದಲ್ಲೂ ಮುಖಾಮುಖಿಯಾಗುವ ಸಾಧ್ಯತೆ ಇದೆ. ಆ ಬಳಿಕ ಎರಡೂ ತಂಡಗಳು ಫೈನಲ್ ಪ್ರವೇಶಿದರೆ, ಅಲ್ಲಿ ಮೂರನೇ ಬಾರಿಗೆ ಈ ತಂಡಗಳ ನಡುವೆ ಕ್ರಿಕೆಟ್ ಕಾಳಗ ನಡೆಯಲ್ಲಿದೆ.ಕಳೆದ ಏಷ್ಯಾಕಪ್ನಲ್ಲಿ ಅಂದರೆ 2022ರ ಏಷ್ಯಾಕಪ್ನಲ್ಲಿ ಫೈನಲ್ ಪ್ರವೇಶಿಸುವ ಅವಕಾಶವನ್ನು ಭಾರತ ಕಳೆದುಕೊಂಡಿತು. ಆದರೆ ಈ ಬಾರಿ ರೋಹಿತ್ ಶರ್ಮಾ ಬಳಗ ಏಳನೇ ಬಾರಿಗೆ ಏಷ್ಯಾಕಪ್ ಗೆಲ್ಲುವ ತವಕದಲ್ಲಿದೆ.
ಏಷ್ಯಾಕಪ್ಗೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:09 am, Fri, 11 August 23