ಏಷ್ಯಾಕಪ್ ಟೂರ್ನಿ ಮುಕ್ತಾಯ: ಐದೇ ದಿನದಲ್ಲಿ ಭಾರತಕ್ಕೆ ಮತ್ತೊಂದು ಪಂದ್ಯ: ಯಾರ ವಿರುದ್ಧ?

|

Updated on: Sep 18, 2023 | 8:13 AM

All you to know about IND vs AUS ODI series: ಭಾರತ ತಂಡ ಸೆಪ್ಟೆಂಬರ್ 22 ರಿಂದ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಐಸಿಸಿ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಂದು ಪ್ರಾರಂಭವಾಗುವ ಮೊದಲು ಎರಡೂ ತಂಡಗಳಿಗೆ ಈ ಸರಣಿಯು ಅಂತಿಮ ತಯಾರಿಯಾಗಿದೆ. ಈಗಾಗಲೇ ಈ ಸರಣಿ ಆಸೀಸ್ ತಂಡ ಪ್ರಕಟವಾಗಿದೆ. ಭಾರತ ತಂಡವನ್ನು ಇಂದು ಹೆಸರಿಸುವ ಸಾಧ್ಯತೆ ಇದೆ.

ಏಷ್ಯಾಕಪ್ ಟೂರ್ನಿ ಮುಕ್ತಾಯ: ಐದೇ ದಿನದಲ್ಲಿ ಭಾರತಕ್ಕೆ ಮತ್ತೊಂದು ಪಂದ್ಯ: ಯಾರ ವಿರುದ್ಧ?
Team India Scheduled
Follow us on

ಏಷ್ಯಾಕಪ್ 2023 ಟೂರ್ನಿಗೆ (Asia Cup 2023) ತೆರೆಬಿದ್ದಿದೆ. ಭಾನುವಾರ ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಬೌಲಿಂಗ್​ನಲ್ಲಿ ಮಿಂಚಿದ ರೋಹಿತ್ ಹುಡುಗರು ವಿಶ್ವಕಪ್​ಗು ಮುನ್ನ ಆತ್ಮವಿಶ್ವಾಸ ತುಂದುಕೊಂಡಿದ್ದಾರೆ. ಈ ಗೆಲುವಿನ ಮೂಲಕ ಎಂಟನೇ ಬಾರಿಗೆ ಏಷ್ಯಾಕಪ್ ಪ್ರಶಸ್ತಿ ಗೆದ್ದ ಸಾಧನೆ ಮಾಡಿದೆ. ಇದೀಗ ಮುಂದಿನ ಐದು ದಿನಗಳಲ್ಲಿ ಟೀಮ್ ಇಂಡಿಯಾ ಮತ್ತೊಂದು ಪಂದ್ಯಕ್ಕೆ ಸಜ್ಜಾಗಬೇಕಿದೆ.

ಭಾರತ-ಆಸ್ಟ್ರೇಲಿಯಾ:

ಭಾರತ ಕ್ರಿಕೆಟ್ ತಂಡ ಸೆಪ್ಟೆಂಬರ್ 22 ರಿಂದ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಐಸಿಸಿ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಂದು ಪ್ರಾರಂಭವಾಗುವ ಮೊದಲು ಎರಡೂ ತಂಡಗಳಿಗೆ ಈ ಸರಣಿಯು ಅಂತಿಮ ತಯಾರಿಯಾಗಿದೆ. ಆಸ್ಟ್ರೇಲಿಯಾ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ಮುಕ್ತಾಯಗೊಂಡಿದ್ದು, ಸದ್ಯದಲ್ಲೇ ಭಾರತಕ್ಕೆ ಹೊರಡಲಿದೆ. ಇತ್ತ ಟೀಮ್ ಇಂಡಿಯಾ ಇಂದು ತವರಿಗೆ ಮರಳುವ ಸಾಧ್ಯತೆ ಇದೆ.

ಯಾರಿಗೆ ಯಾವ ಪ್ರಶಸ್ತಿ? ಭಾರತ ತಂಡಕ್ಕೆ ಸಿಕ್ಕ ಪ್ರಶಸ್ತಿ ಮೊತ್ತ ಎಷ್ಟು? ಇಲ್ಲಿದೆ ಮಾಹಿತಿ

ಇದನ್ನೂ ಓದಿ
ಏಷ್ಯಾಕಪ್ ಗೆದ್ದ ಭಾರತ; ಅಗ್ರಸ್ಥಾನಕ್ಕೇರಿದ ಪಾಕಿಸ್ತಾನ..!
ಟ್ರೋಫಿ ಎತ್ತಿ ಹಿಡಿಯುವ ಮುನ್ನ ಪೋಸ್ಟ್ ಮ್ಯಾಚ್​ನಲ್ಲಿ ರೋಹಿತ್ ಹೇಳಿದ್ದೇನು?
ಅಕ್ಷರ್- ಅಯ್ಯರ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್
Mohammed Siraj: 6 ವಿಕೆಟ್ 10 ದಾಖಲೆಗಳು: ಇದು ಮಿಯಾನ್ ಮ್ಯಾಜಿಕ್

ಆಸ್ಟ್ರೇಲಿಯಾದ ಪರವಾಗಿ, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಸ್ಟೀವ್ ಸ್ಮಿತ್ ಗಾಯಗೊಂಡು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ತಪ್ಪಿಸಿಕೊಂಡಿದ್ದರು. ಇವರು ಭಾರತ ಸರಣಿಗೆ ಮರಳುತ್ತಾರೆ. ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ತಂಡ ಸೇರಿಕೊಳ್ಳಲಿದ್ದಾರೆ. ಈ ಸರಣಿಗೆ ಭಾರತ ತಂಡ ಇನ್ನೂ ಪ್ರಕಟವಾಗಿಲ್ಲ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇಂದು ತಂಡವನ್ನು ಹೆಸರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂಡೋ-ಆಸೀಸ್ ಏಕದಿನ ಸರಣಿ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ಯಾವಾಗ ನಡೆಯಲಿದೆ?

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿಯು ಸೆಪ್ಟೆಂಬರ್ 22 ರಿಂದ ನಡೆಯಲಿದೆ.

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ಎಲ್ಲಿ ನಡೆಯಲಿದೆ?

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿಯು ಭಾರತದಲ್ಲಿ ನಡೆಯಲಿದೆ.

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿಯ ಸ್ಥಳಗಳು ಯಾವುವು?

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿಯು ಮೊಹಾಲಿ, ಇಂದೋರ್ ಮತ್ತು ರಾಜ್‌ಕೋಟ್‌ನಲ್ಲಿ ಆಯೋಜಿಸಲಾಗಿದೆ.

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿಯನ್ನು ಲೈವ್ ಸ್ಟ್ರೀಮಿಂಗ್ ವೀಕ್ಷಿಸುವುದು ಹೇಗೆ?

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿಯನ್ನು ಸ್ಪೋರ್ಟ್ಸ್ 18 ಇಂಗ್ಲಿಷ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಜೊತೆಗೆ ಪಂದ್ಯವನ್ನು JioCinema ದಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಆಷ್ಟನ್ ಅಗರ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಗ್ಲೆನ್ ಮ್ಯಾಕ್ಸ್‌ವೆಲ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೋನಿಸ್, ಮಿಚ್ ಮಾರ್ಷ್, ಸೀನ್ ಅಬಾಟ್, ಕ್ಯಾಮರೂನ್ ಗ್ರೀನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ