AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಭಾರತ- ಪಾಕ್ ಪಂದ್ಯ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಪೂರ್ಣ ವಿವರ

IND vs PAK: ವೇಳಾಪಟ್ಟಿಯ ಪ್ರಕಾರ ಭಾರತದ ಎಲ್ಲಾ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯುತ್ತವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಮೂರು ಬಾರಿ ಮುಖಾಮುಖಿಯಾಗಲಿವೆ.

Asia Cup 2023: ಭಾರತ- ಪಾಕ್ ಪಂದ್ಯ ಯಾವ ಚಾನೆಲ್​ನಲ್ಲಿ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಪೂರ್ಣ ವಿವರ
ಭಾರತ- ಪಾಕ್ ಪಂದ್ಯ
ಪೃಥ್ವಿಶಂಕರ
|

Updated on:Jul 20, 2023 | 8:19 AM

Share

2023 ರ ಏಷ್ಯಾಕಪ್ (Asia Cup 2023) ಟೂರ್ನಿಯ ವೇಳಾಪಟ್ಟಿಯನ್ನು ಕೊನೆಗೂ ಪ್ರಕಟಿಸಲಾಗಿದೆ. ಈ ಬಾರಿಯ ಏಷ್ಯಾಕಪ್ ಆಗಸ್ಟ್ 30 ರಿಂದ ಆರಂಭವಾಗಲಿದ್ದು, ಫೈನಲ್ ಪಂದ್ಯ ಸೆಪ್ಟೆಂಬರ್ 17 ರಂದು ನಡೆಯಲಿದೆ. ಈ ಬಾರಿಯ ಏಷ್ಯಾಕಪ್ ಟೂರ್ನಿ ಹೈಬ್ರಿಡ್ ಮಾದರಿಯಲ್ಲಿ (Hybrid Model) ನಡೆಯುತ್ತಿದೆ. ಅಂದರೆ, ಲೀಗ್​ನ ನಾಲ್ಕು ಪಂದ್ಯಗಳು ಪಾಕಿಸ್ತಾನದಲ್ಲಿ ಮತ್ತು ಒಂಬತ್ತು ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ. ವೇಳಾಪಟ್ಟಿಯ ಪ್ರಕಾರ ಭಾರತದ ಎಲ್ಲಾ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯುತ್ತವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ (India vs Pakistan) ಮೂರು ಬಾರಿ ಮುಖಾಮುಖಿಯಾಗಲಿವೆ.

ಸೆಪ್ಟೆಂಬರ್ 2 ರಂದು ಭಾರತ- ಪಾಕ್ ಫೈಟ್

ಪ್ರತಿ ಬಾರಿಯಂತೆ ಈ ಬಾರಿಯೂ ಭಾರತ ಮತ್ತು ಪಾಕಿಸ್ತಾನವನ್ನು ಒಂದೇ ಗುಂಪಿನಲ್ಲಿ ಇರಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ಹೊರತುಪಡಿಸಿ ನೇಪಾಳ ಎ ಗುಂಪಿನಲ್ಲಿ ಮೂರನೇ ತಂಡವಾಗಿದೆ. ಶ್ರೀಲಂಕಾದ ಕ್ಯಾಂಡಿಯಲ್ಲಿ ಸೆಪ್ಟೆಂಬರ್ 2 ರಂದು ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಆಡಲಿದೆ. ನಂತರ ಇದೇ ನಗರದಲ್ಲಿ ಸೆಪ್ಟೆಂಬರ್ 4 ರಂದು ಭಾರತ ತಂಡ ನೇಪಾಳವನ್ನು ಎದುರಿಸಲಿದೆ.

ಏಷ್ಯಾಕಪ್‌ನಲ್ಲಿ ಮೂರು ಬಾರಿ ಮುಖಾಮುಖಿ?

ಭಾರತ ಮತ್ತು ಪಾಕಿಸ್ತಾನ ಮುಂದಿನ ಸುತ್ತು ಅಂದರೆ ಸೂಪರ್-4ರ ಘಟ್ಟವನ್ನು ತಲುಪುವುದು ಖಚಿತ. ಈಗ ಎಲ್ಲವೂ ಅಂದುಕೊಂಡಂತೆ ನಡೆದರೆ ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಕನಿಷ್ಠ ಎರಡು ಪಂದ್ಯಗಳು ನಡೆಯುವುದನ್ನು ನಾವು ಕಾಣಬಹುದಾಗಿದೆ. ಅಲ್ಲದೆ ಎರಡೂ ತಂಡಗಳು ಫೈನಲ್ ಪ್ರವೇಶಿಸಿದರೆ, ಅಭಿಮಾನಿಗಳು ಕೇವಲ 16 ದಿನಗಳಲ್ಲಿ ಮೂರನೇ ಬಾರಿಗೆ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

Asia Cup 2023 Schedule: ಏಷ್ಯಾಕಪ್​ನಲ್ಲಿ ಭಾರತ ಯಾವ ದಿನದಂದು ಯಾರನ್ನು ಎದುರಿಸಲಿದೆ? ಇಲ್ಲಿದೆ ವಿವರ

ಭಾರತ- ಪಾಕ್ ಪಂದ್ಯದ ಪೂರ್ಣ ವಿವರ ಇಲ್ಲಿದೆ

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಯಾವಾಗ ನಡೆಯಲ್ಲಿದೆ?

ಸೆಪ್ಟೆಂಬರ್ 2 ರ ಶನಿವಾರದಂದು ಭಾರತ ಮತ್ತು ಪಾಕಿಸ್ತಾನದ ನಡುವೆ ಪಂದ್ಯ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಸ್ಥಳೀಯ ಕಾಲಮಾನ ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗುತ್ತದೆ

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಎಲ್ಲಿ ಆಡಲಾಗುತ್ತದೆ?

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಕ್ಯಾಂಡಿಯ ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಭಾರತದಲ್ಲಿ ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು?

ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಭಾರತದಲ್ಲಿ ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು?

ಡಿಸ್ನಿ+ ಹಾಟ್‌ಸ್ಟಾರ್ ವೆಬ್‌ಸೈಟ್ ಮತ್ತು ಅಪ್ಲಿಕೇಶನ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಆನ್‌ಲೈನ್‌ನಲ್ಲಿ ವೀಕ್ಷಿಸಬಹುದಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:17 am, Thu, 20 July 23