ಕೆಎಲ್ ರಾಹುಲ್ ಅಥವಾ ಇಶಾನ್ ಕಿಶನ್; ಪಾಕ್ ವಿರುದ್ಧ ಯಾರಿಗೆ ಸಿಗಲಿದೆ ತಂಡದಲ್ಲಿ ಆಡುವ ಅವಕಾಶ?
Asia Cup 2023: ಇಂಜುರಿಯಿಂದ ಗುಣಮುಖರಾಗಿರುವ ರಾಹುಲ್ ಏಷ್ಯಾಕಪ್‌ನ ಆರಂಭಿಕ ಎರಡು ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಅವರು ಪಾಕ್ ವಿರುದ್ಧದ ಸೂಪರ್ 4 ಹಂತದಿಂದ ಪಂದ್ಯದೊಂದಿಗೆ ತಂಡಕ್ಕೆ ಎಂಟ್ರಿಕೊಡಲು ಸಜ್ಜಾಗಿದ್ದಾರೆ. ಆದರೆ ಇದು ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ತಲೆನೋವನ್ನು ಹೆಚ್ಚಿಸಿದೆ.
ಟೀಂ ಇಂಡಿಯಾ ಸದ್ಯ ಏಷ್ಯಾಕಪ್‌ನಲ್ಲಿ (Asia Cup 2023) ಬ್ಯುಸಿಯಾಗಿದೆ. ಈ ಪಂದ್ಯಾವಳಿ ಮುಗಿದ ಬಳಿಕ ಅಂದರೆ ಮುಂದಿನ ತಿಂಗಳು ಭಾರತದಲ್ಲಿ ಏಕದಿನ ವಿಶ್ವಕಪ್ (ODI World Cup 2023) ಟೂರ್ನಿ ಆರಂಭವಾಗಲಿದೆ. ಅದಕ್ಕಾಗಿ ಎರಡು ದಿನಗಳ ಹಿಂದೆ ಟೀಂ ಇಂಡಿಯಾ (Team India) ಕೂಡ ಪ್ರಕಟವಾಗಿದೆ. ಈ ತಂಡದಲ್ಲಿ ಬಹಳ ದಿನಗಳಿಂದ ತಂಡದಿಂದ ಹೊರಗುಳಿದಿದ್ದ ಕನ್ನಡಿಗ ಕೆಎಲ್ ರಾಹುಲ್ (KL Rahul) ಕೂಡ ಸ್ಥಾನ ಪಡೆದಿದ್ದಾರೆ. ಆದರೆ ಪ್ರಸ್ತುತ ಇಂಜುರಿಯಿಂದ ಗುಣಮುಖರಾಗಿರುವ ರಾಹುಲ್ ಏಷ್ಯಾಕಪ್‌ನ ಆರಂಭಿಕ ಎರಡು ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಅವರು ಪಾಕ್ ವಿರುದ್ಧದ ಸೂಪರ್ 4 ಹಂತದಿಂದ ಪಂದ್ಯದೊಂದಿಗೆ ತಂಡಕ್ಕೆ ಎಂಟ್ರಿಕೊಡಲು ಸಜ್ಜಾಗಿದ್ದಾರೆ. ಆದರೆ ಇದು ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ತಲೆನೋವನ್ನು ಹೆಚ್ಚಿಸಿದೆ.
ಹನ್ನೊಂದರ ಬಳಗದಲ್ಲಿ ಯಾರಿಗೆ ಅವಕಾಶ?
ವಾಸ್ತವವಾಗಿ ಪಾಕಿಸ್ತಾನ ವಿರುದ್ಧದ ಮೊದಲ ಏಷ್ಯಾಕಪ್ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಆದರೆ ಈ ಪಂದ್ಯದಲ್ಲಿ ವಿಕೆಟ್‌ಕೀಪರ್ ಇಶಾನ್ ಕಿಶನ್ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದು ಅಮೋಘ ಆಟ ಪ್ರದರ್ಶಿಸಿದ್ದರು. ಹೀಗಾಗಿ ಏಷ್ಯಾಕಪ್‌ನ ಉಳಿದ ಪಂದ್ಯಗಳಿಗೆ ಹಾಗೂ ವಿಶ್ವಕಪ್ಗೆ ಇಶಾನ್ ಕಿಶನ್ರನ್ನೇ ತಂಡದ ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಡಿಸಬೇಕು ಎಂದು ಒಂದು ವರ್ಗ ಹೇಳುತ್ತಿದೆ. ಇತ್ತ ಇಂಜುರಿಯಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿರುವ ಅನುಭವಿ ಕೆಎಲ್ ರಾಹುಲ್ಗೆ ತಂಡದಲ್ಲಿ ಅವಕಾಶ ನೀಡಬೇಕು ಎಂದು ಇನ್ನೊಂದು ವರ್ಗ ಹೇಳುತ್ತಿದೆ. ಹೀಗಾಗಿ ಮುಂಬರುವ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಆಡುವ ಹನ್ನೊಂದರ ಬಳಗದಲ್ಲಿ ಯಾರಿಗೆ ಅವಕಾಶ ನೀಡಬೇಕು ಎಂಬುದು ತಂಡದ ನಿರ್ವಹಣೆಯ ಮುಂದಿರುವ ಪ್ರಮುಖ ಪ್ರಶ್ನೆಯಾಗಿದೆ.
ಸಿಂಹಳೀಯರ ನಾಡಲ್ಲಿ ಟೀಮ್ ಇಂಡಿಯಾ ಸೇರಿದ ಕೆಎಲ್ ರಾಹುಲ್: ಮೊದಲ ದಿನವೇ ಜಿಮ್ಗೆ ಎಂಟ್ರಿ
ಸೆಪ್ಟೆಂಬರ್ 10 ರಂದು ಟೀಂ ಇಂಡಿಯಾ ಮತ್ತು ಪಾಕಿಸ್ತಾನ ಸೂಪರ್ 4 ಪಂದ್ಯವನ್ನು ಆಡಲಿವೆ. ಈ ಮೊದಲು ಪಾಕಿಸ್ತಾನದ ವಿರುದ್ಧದ ಪ್ರಬಲ ಪ್ರದರ್ಶನ ನೀಡಿರುವ ಇಶಾನ್ ಕಿಶನ್ ಅವರನ್ನು ತಂಡದ ಪ್ರಮುಖ ಸದಸ್ಯರನ್ನಾಗಿ ಮಾಡಿದೆ. ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಆರಂಭಿಕ ಪಂದ್ಯದಲ್ಲಿ 25ರ ಹರೆಯದ ಇಶಾನ್ 81 ಎಸೆತಗಳಲ್ಲಿ 82 ರನ್ ಬಾರಿಸಿದ್ದರು. 66ರನ್ಗಳಿಗೆ 4 ವಿಕೆಟ್ ಕಳೆದುಕೊಂಡು ತಂಡ ಸಂಕಷ್ಟಕ್ಕೆ ಸಿಲುಕಿದ್ದಾಗ ಜವಬ್ದಾರಿಯುತ ಬ್ಯಾಟಿಂಗ್ ಮಾಡಿದ ಇಶಾನ್, ಉಪನಾಯಕ ಹಾರ್ದಿಕ್ ಜೊತೆ ಶತಕದ ಜೊತಯಾಟ ನಡೆಸಿ ತಂಡವನ್ನು ಸೋಲಿನ ದವಡೆಯಿಂದ ಪಾರು ಮಾಡಿದ್ದರು.
ಏಕದಿನ ಮಾದರಿಯಲ್ಲಿ ಕಳೆದ 4 ಪಂದ್ಯಗಳಲ್ಲಿ 4 ಅರ್ಧಶತಕಗಳನ್ನು ಸಿಡಿಸಿರುವ ಕಿಶನ್ಗೆ ತಂಡದಲ್ಲಿ ಅವಕಾಶ ನೀಡಬೇಕೆಂಬ ಕೂಗು ಹೆಚ್ಚಾಗಿದೆ. ಅಲ್ಲದೆ ಸುದೀರ್ಘ ಗ್ಯಾಪ್ ಬಳಿಕ ಕೆಎಲ್ ರಾಹುಲ್ ಟೀಂ ಇಂಡಿಯಾದಲ್ಲಿ ಪುನರಾಗಮನ ಮಾಡಲಿದ್ದಾರೆ. ಹೀಗಾಗಿ ತಂಡದ ಮ್ಯಾನೇಜ್ಮೆಂಟ್ ಇಶಾನ್ ಕಿಶನ್ಗೆ ವಿಕೆಟ್ ಕೀಪಿಂಗ್ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ಶ್ರೇಯಸ್ ಅಯ್ಯರ್ ಕೂಡ ಸುದೀರ್ಘ ಗ್ಯಾಪ್ ನಂತರ ಟೀಂ ಇಂಡಿಯಾಗೆ ಮರಳಲಿದ್ದಾರೆ. ಆದರೆ ಪಾಕ್ ವಿರುದ್ಧದ ಪಂದ್ಯದಲ್ಲಿ ಅಯ್ಯರ್ ಗಮನಾರ್ಹ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಅಯ್ಯರ್ ಬದಲಿಗೆ ರಾಹುಲ್ಗೆ ಅವಕಾಶ ನೀಡಬೇಕೆಂಬ ಮಾತು ಕೂಡ ಕೇಳಿಬರುತ್ತಿದೆ.
ಸುನಿಲ್ ಗವಾಸ್ಕರ್ ಅಭಿಪ್ರಾಯವೇನು?
ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ನಡುವಿನ ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಾರಿಗೆ ಸ್ಥಾನ ನೀಡಬೇಕು ಎಂಬ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇಂಡಿಯಾ ಟುಡೆಯಲ್ಲಿ ಮಾತನಾಡಿದ ಗವಾಸ್ಕರ್ ಅವರು ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಟೀಂ ಇಂಡಿಯಾ ಆಯ್ಕೆ ಮಾಡಬೇಕಾಗುತ್ತದೆ. “ರಾಹುಲ್ ಮತ್ತು ಶ್ರೇಯಸ್ ಏಷ್ಯಾಕಪ್‌ನ ಸೂಪರ್ 4 ನಲ್ಲಿ ಆಡುವ XI ನಲ್ಲಿ ಸ್ಥಾನಕ್ಕಾಗಿ ಪೈಪೋಟಿಯಲ್ಲಿದ್ದಾರೆ. ಇಶಾನ್ ಪಾಕಿಸ್ತಾನದ ವಿರುದ್ಧ ಅಮೋಘ ಆಟ ಪ್ರದರ್ಶಿಸಿದ್ದಾರೆ. ಒಂದು ವೇಳೆ ರಾಹುಲ್ ಮತ್ತು ಇಶಾನ್ ಅವರನ್ನು ಪ್ಲೇಯಿಂಗ್ ಇಲೆವೆನ್‌ಗೆ ಸೇರಿಸಿದರೆ, ಇಶಾನ್‌ಗೆ ವಿಕೆಟ್‌ಕೀಪಿಂಗ್ ಜವಾಬ್ದಾರಿಯನ್ನು ನೀಡಬೇಕು. ಏಕೆಂದರೆ ರಾಹುಲ್ ಗಾಯದಿಂದ ಈಗ ತಾನೇ ತಂಡಕ್ಕೆ ಮರಳುತ್ತಿದ್ದಾರೆ. ಹೀಗಾಗಿ ಅವರಿಗೆ ವಿಕೆಟ್ ಕೀಪಿಂಗ್ ಮಾಡಲು ಕೊಂಚ ತೊಂದರೆಯಾಗಬಹುದು ಎಂದಿದ್ದಾರೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ