AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಹ್ಯಾಟ್ರಿಕ್ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸುತ್ತಾ ಟೀಂ ಇಂಡಿಯಾ?

India vs Pakistan Asia Cup 2025 Final: 2025 ರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿವೆ. ಈ ಐತಿಹಾಸಿಕ ಪಂದ್ಯದಲ್ಲಿ ಗೆದ್ದರೆ, ಭಾರತ ತಂಡವು ದಾಖಲೆಯ 9ನೇ ಏಷ್ಯಾಕಪ್ ಪ್ರಶಸ್ತಿಯನ್ನು ಗೆಲ್ಲುವುದಲ್ಲದೆ, ಒಂದೇ ಟೂರ್ನಿಯಲ್ಲಿ ಒಂದೇ ಎದುರಾಳಿಯನ್ನು ಮೂರು ಬಾರಿ ಸೋಲಿಸಿದ ಮೊದಲ ತಂಡ ಎಂಬ ಅನನ್ಯ ವಿಶ್ವ ದಾಖಲೆಯನ್ನು ನಿರ್ಮಿಸಲಿದೆ. ಈ ಫೈನಲ್ ಭಾರತಕ್ಕೆ ಹ್ಯಾಟ್ರಿಕ್ ಗೆಲುವಿನ ಅವಕಾಶವಾಗಿದೆ.

Asia Cup 2025: ಹ್ಯಾಟ್ರಿಕ್ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸುತ್ತಾ ಟೀಂ ಇಂಡಿಯಾ?
Ind Vs Pak
ಪೃಥ್ವಿಶಂಕರ
|

Updated on: Sep 27, 2025 | 10:47 PM

Share

2025 ರ ಏಷ್ಯಾಕಪ್‌ನ (Asia Cup 2025) ಫೈನಲ್ ಪಂದ್ಯವು ನಾಳೆ ಅಂದರೆ ಸೆಪ್ಟೆಂಬರ್ 28 ರಂದು ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ನಡೆಯಲಿದೆ. ಏಷ್ಯಾಕಪ್ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಭಾರತ ತಂಡವು ಗುಂಪು ಹಂತದಲ್ಲಿ, ನಂತರ ಸೂಪರ್ 4 ಸುತ್ತಿನಲ್ಲಿ ಪಾಕಿಸ್ತಾನವನ್ನು ಸೋಲಿಸಿತು. ಇದೀಗ ಫೈನಲ್​ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗಲು ಸಜ್ಜಾಗಿವೆ. ಈ ಪಂದ್ಯದಲ್ಲೂ ಟೀಂ ಇಂಡಿಯಾ ಗೆಲುವು ಸಾಧಿಸಿದರೆ, ದಾಖಲೆಯ 9ನೇ ಬಾರಿಗೆ ಏಷ್ಯಾಕಪ್‌ ಟ್ರೋಫಿಯನ್ನು ಎತ್ತಿಹಿಡಿಯುವುದಲ್ಲದೆ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೆ ಯಾವುದೇ ತಂಡ ಮಾಡಿರದ ದಾಖಲೆಯನ್ನು ನಿರ್ಮಿಸಲಿದೆ.

ಹ್ಯಾಟ್ರಿಕ್ ಗೆಲುವು ಸಿಗುತ್ತದೆಯೇ?

ಈ ಫೈನಲ್ ಭಾರತ ತಂಡಕ್ಕೆ ವಿಶೇಷವಾಗಿರುತ್ತದೆ. ಏಕೆಂದರೆ ಸೂರ್ಯಕುಮಾರ್ ಪಡೆಗೆ ಇತಿಹಾಸ ನಿರ್ಮಿಸುವ ಅವಕಾಶವಿದೆ. ಈ ಫೈನಲ್‌ನಲ್ಲಿ ಟೀಂ ಇಂಡಿಯಾ ಗೆದ್ದರೆ, ಒಂದೇ ಟೂರ್ನಮೆಂಟ್‌ನಲ್ಲಿ ತಂಡವೊಂದು ಮೂರು ಬಾರಿ ಒಂದೇ ಎದುರಾಳಿಯನ್ನು ಸೋಲಿಸಿದ ಮೊದಲ ತಂಡ ಎಂಬ ದಾಖಲೆ ಬರೆಯಲಿದೆ. ಐದು ಅಥವಾ ಹೆಚ್ಚಿನ ತಂಡಗಳು ಪಾಲ್ಗೊಳ್ಳುವ ಟೂರ್ನಿಗಳಲ್ಲಿ, ಎರಡು ತಂಡಗಳು ಪರಸ್ಪರ ಮೂರು ಬಾರಿ ಮುಖಾಮುಖಿಯಾದ ಎರಡು ನಿದರ್ಶನಗಳು ಮಾತ್ರ ಇವೆ.

ಮೊದಲನೆಯದಾಗಿ, 1983 ರ ವಿಶ್ವಕಪ್‌ನಲ್ಲಿ, ಭಾರತ ಮತ್ತು ವೆಸ್ಟ್ ಇಂಡೀಸ್ ಮೂರು ಬಾರಿ ಮುಖಾಮುಖಿಯಾಗಿದ್ದವು. ಆ ವೇಳೆ ಭಾರತ ಎರಡು ಪಂದ್ಯಗಳನ್ನು ಗೆದ್ದಿದ್ದರೆ, ವೆಸ್ಟ್ ಇಂಡೀಸ್ ಒಂದು ಪಂದ್ಯವನ್ನು ಗೆದ್ದುಕೊಂಡಿತ್ತು. ನಂತರ, 2004 ರ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಶ್ರೀಲಂಕಾ ಮೂರು ಬಾರಿ ಮುಖಾಮುಖಿಯಾಗಿದ್ದವು. ಇದರಲ್ಲಿ ಶ್ರೀಲಂಕಾ ಎರಡು ಪಂದ್ಯಗಳನ್ನು ಗೆದ್ದುಕೊಂಡರೆ, ಭಾರತ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿತ್ತು. ಇದೀಗ ಈ ಫೈನಲ್‌ನಲ್ಲಿ ಟೀಮ್ ಇಂಡಿಯಾ ಗೆದ್ದರೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಹ್ಯಾಟ್ರಿಕ್ ಗೆಲುವು ಸಾಧಿಸಿದಂತ್ತಾಗುತ್ತದೆ.

Asia Cup 2025: ‘ಇಂತಾ ತಂಡವನ್ನು ಎಲ್ಲಿಯೂ ನೋಡಿಲ್ಲ’; ಟೀಂ ಇಂಡಿಯಾ ಬಗ್ಗೆ ನಾಲಿಗೆ ಹರಿಬಿಟ್ಟ ಪಾಕ್ ನಾಯಕ

ಟೀಂ ಇಂಡಿಯಾಗೆ ಸುಲಭ ಗೆಲುವು

ಈ ಏಷ್ಯಾಕಪ್ ಬಗ್ಗೆ ಹೇಳುವುದಾದರೆ, ಭಾರತ ಮತ್ತು ಪಾಕಿಸ್ತಾನ ಗುಂಪು ಹಂತದಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಕೇವಲ 127 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಭಾರತ ಕೇವಲ 16 ಓವರ್‌ಗಳಲ್ಲಿ 7 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ನಂತರ ಸೂಪರ್ ಫೋರ್‌ನಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಿದ್ದವು. ಅಲ್ಲಿಯೂ ಕೂಡ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 171 ರನ್‌ ಕಲೆಹಾಕಿತು. ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 19 ಓವರ್‌ಗಳಲ್ಲಿ 6 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ