AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಭಾರತ- ಪಾಕ್ ಕ್ರಿಕೆಟ್ ಕದನ; ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?

India vs Pakistan Asia Cup 2025: 2025ರ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ನಿರೀಕ್ಷಿತ ಪಂದ್ಯದ ಸಂಪೂರ್ಣ ವಿವರಗಳನ್ನು ಈ ಲೇಖನ ಒಳಗೊಂಡಿದೆ. ಸೆಪ್ಟೆಂಬರ್ 14ರಂದು ದುಬೈನಲ್ಲಿ ನಡೆಯುವ ಈ ಪಂದ್ಯದ ಸಮಯ, ಪ್ರಸಾರ ಮಾಹಿತಿ ಮತ್ತು ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11ರ ಬಗ್ಗೆ ಮಾಹಿತಿ ಇಲ್ಲಿದೆ.

Asia Cup 2025: ಭಾರತ- ಪಾಕ್ ಕ್ರಿಕೆಟ್ ಕದನ; ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭ?
Ind Vs Pak
ಪೃಥ್ವಿಶಂಕರ
|

Updated on: Sep 13, 2025 | 10:58 PM

Share

2025 ರ ಏಷ್ಯಾಕಪ್‌ನ (Asia Cup 2025) ತನ್ನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ, ಪಾಕಿಸ್ತಾನವನ್ನು (India vs Pakistan) ಎದುರಿಸಲಿದೆ. ಗ್ರೂಪ್ ಎ ನಲ್ಲಿರುವ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿದೆ. ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಿತು. ಆ ಪಂದ್ಯವನ್ನು 9 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಇತ್ತ ಒಮಾನ್ ವಿರುದ್ಧ ಮೊದಲ ಪಂದ್ಯವನ್ನಾಡಿದ್ದ ಪಾಕಿಸ್ತಾನ ಭಾರಿ ಅಂತರದ ಗೆಲುವು ಸಾಧಿಸಿತ್ತು. ಈಗ ಈ ಗುಂಪಿನ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಿವೆ.

ಒಂದು ವರ್ಷಕ್ಕೂ ಹೆಚ್ಚು ಸಮಯದ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಟಿ20 ಪಂದ್ಯ ನಡೆಯುತ್ತಿದೆ. ಇದಕ್ಕೂ ಮೊದಲು, 2024 ರ ಟಿ20 ವಿಶ್ವಕಪ್‌ನಲ್ಲಿ ಉಭಯ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಆ ಪಂದ್ಯವನ್ನು ಭಾರತ ಗೆದ್ದುಕೊಂಡಿತ್ತು. ಇದಾದ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ನಡೆದಿದ್ದ ಪಂದ್ಯದಲ್ಲಿಯೂ ಭಾರತ ಗೆಲುವು ಸಾಧಿಸಿತ್ತು. ಈಗ ಮತ್ತೊಮ್ಮೆ ಈ ಎರಡೂ ತಂಡಗಳು ಮುಖಾಮುಖಿಯಾಗಿದ್ದು, ಅಭಿಮಾನಿಗಳು ಈ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ಹೀಗಾಗಿ ಈ ಪಂದ್ಯದ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ನೀಡಲಿದ್ದೇವೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ ಪಂದ್ಯ ಯಾವ ದಿನ ನಡೆಯಲಿದೆ?

2025 ರ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಸೆಪ್ಟೆಂಬರ್ 14 ರ ಭಾನುವಾರದಂದು ನಡೆಯಲಿದೆ.

ಏಷ್ಯಾಕಪ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯದ ಟಾಸ್ ಅರ್ಧ ಗಂಟೆ ಮೊದಲು ಅಂದರೆ ಸಂಜೆ 7:30 ಕ್ಕೆ ನಡೆಯಲಿದೆ.

ಭಾರತ-ಪಾಕಿಸ್ತಾನ ಪಂದ್ಯ ಯುಎಇಯ ಯಾವ ಮೈದಾನದಲ್ಲಿ ನಡೆಯಲಿದೆ?

2025 ರ ಚಾಂಪಿಯನ್ಸ್ ಟ್ರೋಫಿಯಂತೆ, ಭಾರತ-ಪಾಕಿಸ್ತಾನ ಪಂದ್ಯವೂ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ-ಪಾಕಿಸ್ತಾನ ಪಂದ್ಯವನ್ನು ಯಾವ ಟಿವಿ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ?

ನೀವು ಈ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸಲು ಬಯಸಿದರೆ, ನೀವು ಪಂದ್ಯಾವಳಿಯ ಅಧಿಕೃತ ಪ್ರಸಾರಕರಾದ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್ 1, 2, 3 ಮತ್ತು 5 ರಲ್ಲಿ ವೀಕ್ಷಿಸಬಹುದು.

ಭಾರತ ಮತ್ತು ಪಾಕಿಸ್ತಾನ ಪಂದ್ಯವನ್ನು ಯಾವ ವೇದಿಕೆಯಲ್ಲಿ ಆನ್‌ಲೈನ್‌ನಲ್ಲಿ ಸ್ಟ್ರೀಮ್ ಮಾಡಲಾಗುತ್ತದೆ?

ಭಾನುವಾರ ನಡೆಯಲಿರುವ ಈ ಪಂದ್ಯದ ಆನ್‌ಲೈನ್ ಸ್ಟ್ರೀಮಿಂಗ್ ಅನ್ನು ನೀವು ಸೋನಿ ಲಿವ್ ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

ಉಭಯ ತಂಡಗಳು

ಭಾರತದ ಸಂಭಾವ್ಯ ಪ್ಲೇಯಿಂಗ್ 11: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

ಪಾಕಿಸ್ತಾನ ಸಂಭಾವ್ಯ ಪ್ಲೇಯಿಂಗ್ 11: ಸೈಮ್ ಅಯೂಬ್, ಸಾಹಿಬ್‌ಜಾದಾ ಫರ್ಹಾನ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಫಖರ್ ಜಮಾನ್, ಸಲ್ಮಾನ್ ಆಘಾ (ನಾಯಕ), ಹಸನ್ ನವಾಜ್, ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಸುಫಿಯಾನ್ ಮುಕೀಮ್, ಅಬ್ರಾರ್ ಅಹ್ಮದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ