AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಭಾರತ-ಪಾಕ್ ಪಂದ್ಯದ ಮೇಲೆ ಶತಕೋಟಿ ಡಾಲರ್ ಬೆಟ್ಟಿಂಗ್! ಪಾಕ್ ಆಟಗಾರರಿಗೆ ಹಣದ ಆಮಿಷ

India vs Pakistan Asia Cup 2025 Match: 2025ರ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಬಗ್ಗೆ ತೀವ್ರ ವಿವಾದಗಳು ಉಂಟಾಗಿವೆ. ಈ ನಡುವೆ ಆಮ್ ಆದ್ಮಿ ಪಕ್ಷದ ನಾಯಕ ಸೌರಭ್ ಭಾರದ್ವಾಜ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಶತಕೋಟಿ ಡಾಲರ್‌ಗಳ ಬೆಟ್ಟಿಂಗ್ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಪಂದ್ಯವನ್ನು ರದ್ದುಗೊಳಿಸುವಂತೆ ಹಲವು ರಾಜಕೀಯ ಪಕ್ಷಗಳು ಮತ್ತು ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ.

Asia Cup 2025: ಭಾರತ-ಪಾಕ್ ಪಂದ್ಯದ ಮೇಲೆ ಶತಕೋಟಿ ಡಾಲರ್ ಬೆಟ್ಟಿಂಗ್! ಪಾಕ್ ಆಟಗಾರರಿಗೆ ಹಣದ ಆಮಿಷ
Ind Vs Pak
ಪೃಥ್ವಿಶಂಕರ
|

Updated on: Sep 14, 2025 | 2:43 PM

Share

2025 ರ ಏಷ್ಯಾಕಪ್​​ನಲ್ಲಿ (Asia Cup 2025) ಸೆಪ್ಟೆಂಬರ್ 14 ರಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯದ ಬಗ್ಗೆ ಸಾಕಷ್ಟು ಪರ- ವಿರೋಧದ ಚರ್ಚೆಗಳು ನಡೆಯುತ್ತಿವೆ. ಟೀಂ ಇಂಡಿಯಾ ಈ ಪಂದ್ಯವನ್ನು ಬಹಿಷ್ಕರಿಸಬೇಕು ಎಂದು ಭಾರತೀಯರು ಒತ್ತಾಯ ಮಾಡುತ್ತಿದ್ದಾರೆ. ಈ ನಡುವೆ ಈ ಪಂದ್ಯದ ನೆಪದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಶತಕೋಟಿ ಡಾಲರ್ ಬೆಟ್ಟಿಂಗ್ ನಡೆಯುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಗಂಭೀರ ಆರೋಪ ಮಾಡುವ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿದೆ.

ಶತಕೋಟಿ ಡಾಲರ್‌ಗಳ ಬೆಟ್ಟಿಂಗ್

ಆಮ್ ಆದ್ಮಿ ಪಕ್ಷದ ನಾಯಕ ಸೌರಭ್ ಭಾರದ್ವಾಜ್ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದು ಅದರಲ್ಲಿ ಅವರು, ‘ಬಿಗ್ ಬ್ರೇಕಿಂಗ್, ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದ ಮೇಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಶತಕೋಟಿ ಡಾಲರ್‌ಗಳ ಬೆಟ್ಟಿಂಗ್ ನಡೆಯುತ್ತಿದೆ. ಇದು ಮಾತ್ರವಲ್ಲದೆ ಪಾಕಿಸ್ತಾನ ತಂಡದ ಕೆಲವು ಆಟಗಾರರಿಗೆ ಮ್ಯಾಚ್ ಫಿಕ್ಸಿಂಗ್ ಆಮಿಷವನ್ನು ಒಡ್ಡಲಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಗೂ ಇದರ ಅರಿವಿದೆ ಎಂದು ತಿಳಿದುಬಂದಿದೆ ಎಂದು ಬರೆದುಕೊಂಡಿದ್ದಾರೆ.

ಭಾರತದಲ್ಲಿ ತೀವ್ರ ವಿರೋಧ

ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವನ್ನು ರದ್ದುಕೊಳಿಸಬೇಕು ಎಂದು ಎಎಪಿ ಜೊತೆಗೆ ಅನೇಕ ರಾಜಕೀಯ ಪಕ್ಷಗಳು ಸಹ ಒತ್ತಡ ಹೇರುತ್ತಿವೆ. ಅಲ್ಲದೆ ಕೇಂದ್ರ ಸರ್ಕಾರವನ್ನು ಹೊರತುಪಡಿಸಿ, ಬಹುತೇಕ ಎಲ್ಲಾ ಪಕ್ಷಗಳು ಈ ಪಂದ್ಯವನ್ನು ನಿಲ್ಲಿಸುವಂತೆ ಒತ್ತಾಯಿಸಿವೆ. ಅಲ್ಲದೆ ಈ ಪಂದ್ಯವನ್ನು ರದ್ದುಗೊಳಿಸುವಂತೆ ಸೋಶಿಯಲ್ ಮೀಡಿಯಾದಲ್ಲಿ ಒತ್ತಾಯ ಮಾಡಲಾಗುತ್ತಿದೆ. ದೇಶಕ್ಕಿಂತ ಕ್ರಿಕೆಟ್ ಮುಖ್ಯವಲ್ಲ, ಪಾಕಿಸ್ತಾನಕ್ಕೆ ಬುದ್ದಿ ಕಲಿಸಬೇಕೆಂದರೆ, ಅವರ ವಿರುದ್ಧ ಯಾವುದೇ ಪಂದ್ಯವನ್ನು ಆಡಬಾರದು ಎಂದು ಭಾರತೀಯರು ಒತ್ತಾಯಿಸುತ್ತಿದ್ದಾರೆ. ಹಾಗೆಯೇ ಭಾರತೀಯರಿಗೆ ಕರೆಕೊಟ್ಟಿರುವ ನೆಟ್ಟಿಗರು ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವನ್ನು ಯಾರು ನೋಡಬೇಡಿ ಎಂದಿದ್ದಾರೆ.

IND vs PAK, Asia Cup 2025: ಏಷ್ಯಾಕಪ್​ನಲ್ಲಿ ಇಂದು ಭಾರತ- ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಕದನ: ನೀವು ಪಂದ್ಯ ನೋಡುತ್ತೀರಾ?

ಟೀಕೆಗೆ ಗುರಿಯಾದ ಬಿಸಿಸಿಐ

ಒತ್ತಾಯದ ನಡುವೆಯೂ ಪಾಕಿಸ್ತಾನದ ವಿರುದ್ಧ ಪಂದ್ಯವನ್ನಾಡಲು ಸಿದ್ಧವಾಗಿರುವ ಬಿಸಿಸಿಐ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಟೀಕಿಸಲಾಗುತ್ತಿದೆ. ಆದಾಗ್ಯೂ ಅಭಿಮಾನಿಗಳ ಆಕ್ರೋಶವನ್ನು ಗಮನದಲ್ಲಿಟ್ಟುಕೊಂಡು ಪಾಕಿಸ್ತಾನದ ವಿಚಾರವಾಗಿ ಕ್ರೀಡಾ ಸಚಿವಾಲಯ ಹೊಸ ನೀತಿಯನ್ನು ಜಾರಿಗೆ ತಂದಿರುವುದಾಗಿ ತಿಳಿಸಿತ್ತು. ಅದರಲ್ಲಿ ಭಾರತ ತಂಡವು ಪಾಕಿಸ್ತಾನದ ವಿರುದ್ಧ ಯಾವುದೇ ದ್ವಿಪಕ್ಷೀಯ ಸರಣಿಯನ್ನು ಆಡುವುದಿಲ್ಲ. ಅಲ್ಲದೆ, ಭಾರತ ತಂಡವು ಯಾವುದೇ ಪಂದ್ಯಾವಳಿ ಅಥವಾ ಪಂದ್ಯಕ್ಕಾಗಿ ಪಾಕಿಸ್ತಾನಕ್ಕೆ ಹೋಗುವುದಿಲ್ಲ. ಪಾಕಿಸ್ತಾನ ತಂಡಕ್ಕೂ ಭಾರತದಲ್ಲಿ ಆಡಲು ಅವಕಾಶ ನೀಡುವುದಿಲ್ಲ. ಆದರೆ ಏಷ್ಯಾಕಪ್ ಬಹುರಾಷ್ಟ್ರೀಯ ಪಂದ್ಯಾವಳಿಯಾಗಿರುವುದರಿಂದ ನಾವು ಭಾರತ ಕ್ರಿಕೆಟ್ ತಂಡವನ್ನು ಅದರಲ್ಲಿ ಆಡುವುದನ್ನು ತಡೆಯುವುದಿಲ್ಲ ಎಂದು ಸಚಿವಾಲಯ ಸ್ಪಷ್ಟವಾಗಿ ತಿಳಿಸಿತ್ತು. ಈ ಕಾರಣದಿಂದಾಗಿ ಬಿಸಿಸಿಐ ಕೂಡ ಏಷ್ಯಾಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ತಂಡವನ್ನು ಕಣಕ್ಕಿಳಿಸುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ