AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ವಿವಾದ ನಡುವೆ ಭಾರತ- ಪಾಕ್ ಮತ್ತೆ ಮುಖಾಮುಖಿ; ಈ ದಿನದಂದು ಪಂದ್ಯ

India vs Pakistan Asia Cup 2025: ಸೆಪ್ಟೆಂಬರ್ 14 ರಂದು ನಡೆದ ಏಷ್ಯಾಕಪ್ 2025ರ ಗುಂಪು ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವಿನಿಂದ ಭಾರತ ಸೂಪರ್ 4ಕ್ಕೆ ಅರ್ಹತೆ ಪಡೆದಿದೆ. ಪಾಕಿಸ್ತಾನ ತನ್ನ ಕೊನೆಯ ಗುಂಪು ಹಂತದ ಪಂದ್ಯವನ್ನು ಗೆದ್ದರೆ ಸೂಪರ್ 4ರಲ್ಲಿ ಭಾರತ ಮತ್ತು ಪಾಕಿಸ್ತಾನ ಮತ್ತೊಮ್ಮೆ ಮುಖಾಮುಖಿಯಾಗುವ ಸಾಧ್ಯತೆ ಇದೆ. ಸೂಪರ್ 4 ಅಥವಾ ಫೈನಲ್‌ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯುವ ಸಾಧ್ಯತೆ ಹೆಚ್ಚಿದೆ.

IND vs PAK: ವಿವಾದ ನಡುವೆ ಭಾರತ- ಪಾಕ್ ಮತ್ತೆ ಮುಖಾಮುಖಿ; ಈ ದಿನದಂದು ಪಂದ್ಯ
Ind Vs Pak
ಪೃಥ್ವಿಶಂಕರ
|

Updated on: Sep 15, 2025 | 6:49 PM

Share

ಸೆಪ್ಟೆಂಬರ್ 14 ರಂದು ಏಷ್ಯಾಕಪ್ 2025 ರ (Asia Cup 2025) ಗುಂಪು ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಹೈ-ವೋಲ್ಟೇಜ್ ಪಂದ್ಯ ನಡೆಯಿತು. ಈ ಪಂದ್ಯವನ್ನು ಟೀಂ ಇಂಡಿಯಾ ಏಳು ವಿಕೆಟ್‌ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ, ಭಾರತ ತಂಡವು ಸೂಪರ್ -4 ಸುತ್ತಿನಲ್ಲಿ ತನ್ನ ಸ್ಥಾನವನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಇದೀಗ ಈ ಸುತ್ತಿನಲ್ಲಿ ಭಾರತ ಹಾಗೂ ಪಾಕಿಸ್ತಾನ ಮತ್ತೊಮ್ಮೆ ಮುಖಾಮುಖಿಯಾಗುತ್ತವೆಯೇ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಇದಕ್ಕೆ ಉತ್ತರ ಸೆಪ್ಟೆಂಬರ್ 17 ರಂದು ಸಿಗಲಿದೆ. ವಾಸ್ತವವಾಗಿ ಸೆ. 17 ರಂದು ಪಾಕಿಸ್ತಾನ ತಂಡ ತನ್ನ ಕೊನೆಯ ಗುಂಪು ಹಂತದ ಪಂದ್ಯವನ್ನು ಆಡಲಿದೆ. ಈ ಪಂದ್ಯದ ಫಲಿತಾಂಶ ಭಾರತ ಹಾಗೂ ಪಾಕಿಸ್ತಾನ ನಡುವಿನ ಎರಡನೇ ಮುಖಾಮುಖಿಯನ್ನು ಖಚಿತಪಡಿಸುತ್ತದೆ.

ಈ ದಿನಾಂಕದಂದು ಭಾರತ- ಪಾಕ್ 2ನೇ ಫೈಟ್

ಪಾಕಿಸ್ತಾನ ತಂಡವು ತನ್ನ ಕೊನೆಯ ಗುಂಪು ಹಂತದ ಪಂದ್ಯವನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ಆಡಬೇಕಾಗಿದೆ. ಈ ಪಂದ್ಯವನ್ನು ಗೆದ್ದರೆ ಪಾಕಿಸ್ತಾನ ಸೂಪರ್ -4 ಗೆ ಅರ್ಹತೆ ಪಡೆಯಬಹುದು. ಇದು ಸಾಧ್ಯವಾದರೆ, ಸೆಪ್ಟೆಂಬರ್ 21 ರಂದು ನಡೆಯಲಿರುವ ಸೂಪರ್ -4 ಸುತ್ತಿನ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮತ್ತೆ ಮುಖಾಮುಖಿಯಾಗಲಿವೆ. ಈ ಸೂಪರ್ -4 ಸುತ್ತಿನ ಪಂದ್ಯವು ಗ್ರೂಪ್ -ಎ ಯಿಂದ ಅರ್ಹತೆ ಪಡೆಯುವ ಅಗ್ರ ಎರಡು ತಂಡಗಳ ನಡುವೆ ನಡೆಯಲಿದೆ. ಭಾರತ ಈಗಾಗಲೇ ಈ ಸುತ್ತಿಗೆ ಅರ್ಹತೆ ಪಡೆದಿದ್ದು, ಪಾಕಿಸ್ತಾನದ ಪ್ರದರ್ಶನದ ಮೇಲೆ ಅದರ ಸ್ಥಾನ ಖಚಿತವಾಗಲಿದೆ.

ಫೈನಲ್‌ನಲ್ಲೂ ಹಣಾಹಣಿ ಸಾಧ್ಯತೆ

ಸೂಪರ್-4 ಸುತ್ತಿನಲ್ಲಿ ಮಾತ್ರವಲ್ಲ, ಎರಡೂ ತಂಡಗಳು ಫೈನಲ್‌ನಲ್ಲೂ ಮುಖಾಮುಖಿಯಾಗಬಹುದು. ವಾಸ್ತವವಾಗಿ, ಸೂಪರ್-4 ಸುತ್ತಿನಲ್ಲಿ ಎಲ್ಲಾ ತಂಡಗಳು ತಲಾ 3 ಪಂದ್ಯಗಳನ್ನು ಆಡುತ್ತವೆ ಮತ್ತು ಅಗ್ರ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಭಾರತ ಮತ್ತು ಪಾಕಿಸ್ತಾನ ತಂಡಗಳು ಟಾಪ್-2 ರಲ್ಲಿ ಸ್ಥಾನ ಪಡೆದರೆ, ಪ್ರಶಸ್ತಿ ಪಂದ್ಯದಲ್ಲಿಯೂ ಮುಖಾಮುಖಿಯಾಗಬಹುದು. ಆದಾಗ್ಯೂ, ಏಷ್ಯಾಕಪ್ ಇತಿಹಾಸದಲ್ಲಿ, ಇಲ್ಲಿಯವರೆಗೆ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಒಂದೇ ಒಂದು ಪಂದ್ಯವೂ ನಡೆದಿಲ್ಲ.

IND vs PAK: ಶೇಕ್ ಹ್ಯಾಂಡ್ ಮಾಡದ ಟೀಂ ಇಂಡಿಯಾಕ್ಕೆ ಶಿಕ್ಷೆ? ಐಸಿಸಿ ನಿಯಮ ಏನು ಹೇಳುತ್ತೆ?

ಲೀಗ್ ಸುತ್ತಿನ ಪಂದ್ಯ ಹೀಗಿತ್ತು

ಇನ್ನು ಲೀಗ್ ಹಂತದಲ್ಲಿ ನಡೆದ ಪಂದ್ಯದ ಬಗ್ಗೆ ಹೇಳುವುದಾದರೆ.. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 9 ವಿಕೆಟ್ ನಷ್ಟಕ್ಕೆ ಕೇವಲ 127 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 15.5 ಓವರ್‌ಗಳಲ್ಲಿ 3 ವಿಕೆಟ್‌ಗಳನ್ನು ಕಳೆದುಕೊಂಡು ಗುರಿ ತಲುಪಿತು. ಆದರೆ ಸೂಪರ್ -4 ಸುತ್ತಿನಲ್ಲಿ ಎರಡೂ ತಂಡಗಳು ಮತ್ತೆ ಮುಖಾಮುಖಿಯಾದರೆ, ಈ ಪಂದ್ಯವು ಇನ್ನಷ್ಟು ರೋಮಾಂಚನಕಾರಿಯಾಗಬಹುದು. ಏಕೆಂದರೆ ಪಾಕಿಸ್ತಾನ ತಂಡವು ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯೊಂದಿಗೆ ಕಣಕ್ಕಿಳಿದರೆ, ಟೀಂ ಇಂಡಿಯಾ ತನ್ನ ಗೆಲುವಿನ ಓಟವನ್ನು ಮುಂದುವರೆಸಲು ನೋಡಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ