AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಭಾರತ- ಪಾಕ್ ಪಂದ್ಯದ ಟಿಕೆಟ್​​ 15 ಲಕ್ಷ ರೂ.ಗೆ ಮಾರಾಟ..! ಆಯೋಜಕರು ಹೇಳಿದ್ದೇನು?

Asia Cup 2025: 2025ರ ಏಷ್ಯಾಕಪ್ ಟಿ20 ಪಂದ್ಯಾವಳಿ ಸೆಪ್ಟೆಂಬರ್ 9 ರಿಂದ ಯುಎಇಯಲ್ಲಿ ಆರಂಭವಾಗಲಿದೆ. ಭಾರತ-ಪಾಕಿಸ್ತಾನ ಪಂದ್ಯದ ಟಿಕೆಟ್‌ಗಳು ಕಾಳಸಂತೆಯಲ್ಲಿ 15 ಲಕ್ಷ ರೂಪಾಯಿಗಳಿಗೆ ಮಾರಾಟವಾಗುತ್ತಿವೆ ಎಂಬ ವರದಿಗಳು ಹೊರಬಿದ್ದಿವೆ. ಎಮಿರೇಟ್ಸ್ ಕ್ರಿಕೆಟ್ ಮಂಡಳಿ ಅನಧಿಕೃತ ವೆಬ್‌ಸೈಟ್‌ಗಳಿಂದ ಟಿಕೆಟ್ ಖರೀದಿಸದಂತೆ ಎಚ್ಚರಿಕೆ ನೀಡಿದೆ. ಅಧಿಕೃತ ವೆಬ್‌ಸೈಟ್‌ನಿಂದ ಮಾತ್ರ ಟಿಕೆಟ್‌ಗಳನ್ನು ಖರೀದಿಸಲು ಸಲಹೆ ನೀಡಲಾಗಿದೆ.

Asia Cup 2025: ಭಾರತ- ಪಾಕ್ ಪಂದ್ಯದ ಟಿಕೆಟ್​​ 15 ಲಕ್ಷ ರೂ.ಗೆ ಮಾರಾಟ..! ಆಯೋಜಕರು ಹೇಳಿದ್ದೇನು?
Ind Vs Pak
ಪೃಥ್ವಿಶಂಕರ
| Updated By: Digi Tech Desk|

Updated on:Sep 01, 2025 | 5:21 PM

Share

ಸೆಪ್ಟೆಂಬರ್ 9 ರಿಂದ ಯುಎಇಯಲ್ಲಿ 2025 ರ ಟಿ20 ಏಷ್ಯಾಕಪ್ (Asia Cup 2025) ಆರಂಭವಾಗಲಿದೆ. 8 ತಂಡಗಳ ನಡುವಿನ ಈ ಪಂದ್ಯಾವಳಿಯಲ್ಲಿ, ಟೀಂ ಇಂಡಿಯಾ ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಆ ಬಳಿಕ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಿನ ಹೈವೋಲ್ಟೇಜ್ ಕದನ ಸೆಪ್ಟೆಂಬರ್ 14 ರಂದು ದುಬೈನಲ್ಲಿ ನಡೆಯಲಿದೆ. ಈ ಪಂದ್ಯಾವಳಿಯ ಟಿಕೆಟ್ ಮಾರಾಟ ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ. ಆದರೆ ಇದಕ್ಕೂ ಮುಂಚೆಯೇ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್‌ಗಳು ಕಾಳ ಸಂತೆಯಲ್ಲಿ 15 ಲಕ್ಷ ರೂ.ಗೆ ಮಾರಾಟವಾಗುತ್ತಿವೆ ಎಂಬ ಸುದ್ದಿ ಹೊರಬಿದ್ದಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್‌ಗಳು ಕಾಳ ಸಂತೆಯಲ್ಲಿ ಹಾಗೂ ಅನಧಿಕೃತ ವೆಬ್‌ಸೈಟ್‌ಗಳಲ್ಲಿ 15.75 ಲಕ್ಷ ರೂ.ಗಳಿಗೆ ಮಾರಾಟವಾಗುತ್ತಿವೆ ಎಂದು ಇನ್‌ಸೈಡ್‌ಸ್ಪೋರ್ಟ್ ವರದಿ ಮಾಡಿದೆ. ಆದಾಗ್ಯೂ, ಎಮಿರೇಟ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸುಭಾನ್ ಅಹ್ಮದ್ ಈ ವಂಚನೆಯ ಬಗ್ಗೆ ಅಭಿಮಾನಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದು, ‘ಅಭಿಮಾನಿಗಳು ಅನಧಿಕೃತ ವೆಬ್‌ಸೈಟ್‌ಗಳ ವಂಚನೆಗೆ ಬಲಿಯಾಗದಂತೆ ಸಲಹೆ ನೀಡಿದ್ದಾರೆ. ಅಲ್ಲದೆ ಮಾರಾಟ ಪ್ರಾರಂಭವಾದ ನಂತರವೇ ಅಧಿಕೃತ ವೆಬ್‌ಸೈಟ್‌ನಿಂದ ಟಿಕೆಟ್‌ಗಳನ್ನು ಖರೀದಿಸುವಂತೆ ಕ್ರಿಕೆಟ್ ಅಭಿಮಾನಿಗಳಿಗೆ ಸಲಹೆ ನೀಡಿದ್ದಾರೆ.

ಏಷ್ಯಾ ಕಪ್ 2025 ಟಿಕೆಟ್

ಅಭಿಮಾನಿಗಳಿಗೆ ಸಲಹೆ ನೀಡಿದ ಎಸಿಸಿ

ಏಷ್ಯಾಕಪ್ ಟಿಕೆಟ್‌ಗಳನ್ನು ಕೆಲವು ನಕಲಿ ವೆಬ್‌ಸೈಟ್‌ಗಳು ಈಗಾಗಲೇ ಮಾರಾಟ ಮಾಡಲು ಪ್ರಾರಂಭಿಸಿವೆ. ಇದರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್‌ಗಳ ಬೆಲೆ 26,256 ರೂ.ಗಳಿಂದ ಪ್ರಾರಂಭವಾಗಿ 15.75 ಲಕ್ಷ ರೂ.ಗೆ ತಲುಪಿದೆ. ಹೀಗಾಗಿ ಅನಧಿಕೃತ ವೆಬ್‌ಸೈಟ್‌ಗಳಿಂದ ಟಿಕೆಟ್ ಖರೀದಿಸುವವರಿಗೆ ಇಸಿಬಿ ಸಿಒಒ ಸುಭಾನ್ ಅಹ್ಮದ್ ಎಚ್ಚರಿಕೆ ನೀಡಿದ್ದಾರೆ.

ಈ ಅನಧಿಕೃತ ವೆಬ್‌ಸೈಟ್‌ಗಳಲ್ಲಿ ಲೀಗ್ ಹಂತದ ಪಂದ್ಯಗಳ ಟಿಕೆಟ್​ಗಳು ಮಾತ್ರವಲ್ಲದೆ ಸೆಪ್ಟೆಂಬರ್ 21 ರಂದು ನಡೆಯಲಿರುವ ಸೂಪರ್ 4 ಪಂದ್ಯಗಳ ಟಿಕೆಟ್​ಗಳು ಕೂಡ ಈಗಾಗಲೇ ಮಾರಾಟವಾಗುತ್ತಿವೆ. ಭಾರತ ಮತ್ತು ಪಾಕಿಸ್ತಾನ ಮಾತ್ರವಲ್ಲದೆ ಭಾರತ vs ಯುಎಇ ಮತ್ತು ಭಾರತ vs ಓಮನ್ ಸೇರಿದಂತೆ ಇತರ ಪಂದ್ಯಗಳ ಟಿಕೆಟ್​ಗಳನ್ನು ಸಹ ಅನಧಿಕೃತ ವೆಬ್‌ಸೈಟ್‌ಗಳಲ್ಲಿ ಮಾರಾಟಕ್ಕೆ ಇಡಲಾಗಿದೆ. ಭಾರತದ ಜೊತೆಗೆ ಪಾಕಿಸ್ತಾನದ ಪಂದ್ಯಗಳ ಟಿಕೆಟ್‌ಗಳನ್ನು ಸಹ ಈ ವೆಬ್‌ಸೈಟ್‌ಗಳಲ್ಲಿ ಮಾರಾಟಕ್ಕೆ ಇಡಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Sat, 30 August 25