AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಏಷ್ಯಾಕಪ್‌ನಲ್ಲಿ ಭಾರತದ ಪಂದ್ಯಗಳು ಯಾವ್ಯಾವ ದಿನ ಎಷ್ಟು ಗಂಟೆಗೆ ಆರಂಭವಾಗಲಿವೆ?

Asia Cup 2025: 2025ರ ಏಷ್ಯಾಕಪ್‌ಗೆ ಭಾರತ ತನ್ನ 20 ಸದಸ್ಯರ ತಂಡವನ್ನು ಪ್ರಕಟಿಸಿದೆ. ರೋಹಿತ್, ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ಯುವ ಆಟಗಾರರು ಹೆಚ್ಚಿನ ಜವಾಬ್ದಾರಿ ಹೊರುತ್ತಾರೆ. ಟೂರ್ನಿಯ ವೇಳಾಪಟ್ಟಿ ಪ್ರಕಟವಾಗಿದ್ದು, ಭಾರತ ತನ್ನ ಮೊದಲ ಪಂದ್ಯವನ್ನು ಯುಎಇ ವಿರುದ್ಧ ಸೆಪ್ಟೆಂಬರ್ 10 ರಂದು ಆಡಲಿದೆ. ಸೆಪ್ಟೆಂಬರ್ 14 ರಂದು ಪಾಕಿಸ್ತಾನ ವಿರುದ್ಧದ ನಿರ್ಣಾಯಕ ಪಂದ್ಯ ನಡೆಯಲಿದೆ. ಎಂಟು ತಂಡಗಳು ಭಾಗವಹಿಸುತ್ತಿವೆ ಮತ್ತು ಲೀಗ್ ಹಂತದ ನಂತರ ಅಗ್ರ ಎರಡು ತಂಡಗಳು ಫೈನಲ್‌ಗೆ ತಲುಪುತ್ತವೆ.

Asia Cup 2025: ಏಷ್ಯಾಕಪ್‌ನಲ್ಲಿ ಭಾರತದ ಪಂದ್ಯಗಳು ಯಾವ್ಯಾವ ದಿನ ಎಷ್ಟು ಗಂಟೆಗೆ ಆರಂಭವಾಗಲಿವೆ?
Team India
ಪೃಥ್ವಿಶಂಕರ
|

Updated on:Sep 04, 2025 | 5:43 PM

Share

2025 ರ ಏಷ್ಯಾಕಪ್​ಗೆ (Asia Cup 2025) ದಿನಗಳು ಸಮೀಪಿಸುತ್ತಿದ್ದಂತೆ ಈ ಟೂರ್ನಿಯಲ್ಲಿ ಭಾಗವಹಿಸುವ ದೇಶಗಳು ಒಂದೊಂದಾಗಿ ತಮ್ಮ ತಂಡಗಳನ್ನು ಪ್ರಕಟಿಸಲಾರಂಭಿಸಿವೆ. ಅದರಂತೆ ಈ ಮೊದಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಪ್ರಕಟಿಸಿತ್ತು. ಇದೀಗ ಬಿಸಿಸಿಐ (BCCI) ಕೂಡ ಒಟ್ಟು 20 ಸದಸ್ಯರ ತಂಡವನ್ನು ಈ ಟೂರ್ನಿಗೆ ಪ್ರಕಟಿಸಿದೆ. ಬಿಸಿಸಿಐ ಆತಿಥ್ಯದಲ್ಲಿ ಈ ಟೂರ್ನಿ ನಡೆಯುತ್ತಿರುವುದರಿಂದ ಹಾಗೂ ಈ ಪಂದ್ಯಾವಳಿಯಲ್ಲಿ ಭಾರತ ಹಾಲಿ ಚಾಂಪಿಯನ್ ಆಗಿರುವುದರಿಂದ ಸೂರ್ಯಕುಮಾರ್ ಪಡೆಗೆ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ಚಾಲೆಂಜ್ ಇದೆ. ಅಲ್ಲದೆ ರೋಹಿತ್, ಕೊಹ್ಲಿ, ಸಿರಾಜ್, ಜಡೇಜಾರಂತಹ ಪ್ರಮುಖ ಆಟಗಾರರಿಲ್ಲದೆ ತಂಡ ಅಖಾಡಕ್ಕಿಳಿಯುತ್ತಿರುವುದರಿಂದ ಎಲ್ಲರ ಕಣ್ಣುಗಳು ಈ ತಂಡದ ಪ್ರದರ್ಶನದ ಮೇಲಿರುತ್ತದೆ. ಹಾಗಾಗಿ ಯುವ ಆಟಗಾರರ ಜವಾಬ್ದಾರಿಯುತವಾಗಿ ಆಟವಾಡಬೇಕಾಗುತ್ತದೆ.

ಇನ್ನು ಈ ಟೂರ್ನಿಯ ವೇಳಾಪಟ್ಟಿಯನ್ನು ಸಹ ಈಗಾಗಲೇ ಪ್ರಕಟಿಸಲಾಗಿದೆ. ಅದರಂತೆ ಟೂರ್ನಿಯ ಮೊದಲ ಪಂದ್ಯ ಅಫ್ಘಾನಿಸ್ತಾನ ಹಾಗೂ ಹಾಂಕ್ ಕಾಂಗ್ ನಡುವೆ ನಡೆಯಲಿದೆ. ಆ ಬಳಿಕ ಟೂರ್ನಿಯ ಎರಡನೇ ದಿನದಂದು ಅಂದರೆ ಸೆಪ್ಟೆಂಬರ್ 10ರಂದು ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಯುಎಇ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.

ಸೆ. 14 ರಂದು ಭಾರತ-ಪಾಕ್ ಪಂದ್ಯ

ಹಾಗೆಯೇ ಸೆಪ್ಟೆಂಬರ್ 14 ರಂದು ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ತನ್ನ ಎರಡನೇ ಲೀಗ್ ಪಂದ್ಯವನ್ನು ಆಡಲಿದೆ. ಭಾನುವಾರದಂದು ನಡೆಯಲಿರುವ ಈ ಪಂದ್ಯಕ್ಕೆ ಸಾಕಷ್ಟು ಅಭಿಮಾನಿಗಳು ಸೇರುವ ನಿರೀಕ್ಷೆ ಇದೆ. ಅಲ್ಲದೆ ಆಪರೇಷನ್ ಸಿಂಧೂರ ಬಳಿಕ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಅಲ್ಲದೆ ಪ್ರಸ್ತುತ ಉಭಯ ತಂಡಗಳನ್ನು ಗಮನಿಸಿದರೆ, ಟೀಂ ಇಂಡಿಯಾ ಪಾಕಿಸ್ತಾನಕ್ಕಿಂತ ಬಲಿಷ್ಠವಾಗಿ ಕಾಣುತ್ತಿದೆ. ಹೀಗಾಗಿ ಈ ಬದ್ಧವೈರಿಗಳ ಕಾಳಗದಲ್ಲಿ ಯಾವ ತಂಡ ಗೆಲುವು ಸಾಧಿಸುತ್ತದೆ ಎಂಬುದನ್ನು ನೋಡುವುದು ಆಸಕ್ತದಾಯಕವಾಗಿರುತ್ತದೆ.

ಪಾಕಿಸ್ತಾನ ವಿರುದ್ಧದ ಪಂದ್ಯದ ಬಳಿಕ ಲೀಗ್ ಹಂತದಲ್ಲಿ ಟೀಂ ಇಂಡಿಯಾದ ಕೊನೆಯ ಪಂದ್ಯ ಸೆಪ್ಟೆಂಬರ್ 19 ರಂದು ಒಮಾನ್ ವಿರುದ್ಧ ಆಡಲಿದೆ. ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7:30 ರಿಂದ ನಡೆಯಲಿದ್ದು, ಟಾಸ್ ಅರ್ಧ ಗಂಟೆ ಮೊದಲು ಅಂದರೆ ಸಂಜೆ 7 ಗಂಟೆಗೆ ನಡೆಯಲಿದೆ.

Asia Cup 2025: ಸಂಜು ಸ್ಯಾಮ್ಸನ್​ರನ್ನು ಹೊಗಳಿ ಹೊನ್ನ ಶೂಲಕ್ಕೇರಿಸಿದ್ರಾ ಗೌತಮ್ ಗಂಭೀರ್..?

ಈ ಬಾರಿ ಏಷ್ಯಾಕಪ್‌ನಲ್ಲಿ ಎಂಟು ತಂಡಗಳು

ಈ ಬಾರಿಯ ಏಷ್ಯಾಕಪ್‌ನಲ್ಲಿ ಒಟ್ಟು ಎಂಟು ತಂಡಗಳು ಭಾಗವಹಿಸುತ್ತಿವೆ. ಪ್ರತಿ ಗುಂಪಿನಲ್ಲಿ ನಾಲ್ಕು ತಂಡಗಳಿವೆ. ಪಾಕಿಸ್ತಾನ ಹೊರತುಪಡಿಸಿ, ಓಮನ್ ಮತ್ತು ಯುಎಇ ಭಾರತದ ಗುಂಪಿನಲ್ಲಿವೆ. ಇನ್ನೊಂದು ಗುಂಪಿನಲ್ಲಿ, ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಹೊರತುಪಡಿಸಿ, ಹಾಂಗ್ ಕಾಂಗ್ ಸ್ಥಾನ ಪಡೆದಿದೆ. ಲೀಗ್ ಹಂತದ ನಂತರ, ತಮ್ಮ ಗುಂಪುಗಳಲ್ಲಿ ಅಗ್ರಸ್ಥಾನದಲ್ಲಿರುವ ಎರಡು ತಂಡಗಳು ಮುಂದಿನ ಹಂತಕ್ಕೆ ಹೋಗುತ್ತವೆ. ಆ ಬಳಿಕ ಈ ಸುತ್ತಿನಲ್ಲಿ ಮೊದಲ ಎರಡು ಸ್ಥಾನ ಪಡೆಯುವ ತಂಡಗಳು ಫೈನಲ್​ನಲ್ಲಿ ಪ್ರಶಸ್ತಿಗಾಗಿ ಸೆಣಸಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:43 pm, Wed, 20 August 25

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ