AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia cup 2025: ಟಿ20 ಏಷ್ಯಾಕಪ್ ಸೂಪರ್ ಸುತ್ತಿನಲ್ಲಿ ಭಾರತ ಗೆದ್ದಿದ್ದಕ್ಕಿಂತ ಸೋತಿದ್ದೇ ಹೆಚ್ಚು?

Asia Cup 2025: 2025ರ ಏಷ್ಯಾಕಪ್‌ನಲ್ಲಿ ಭಾರತದ ಗುಂಪು ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿತ್ತು. ಇದೀಗ ಸೂಪರ್ 4 ಹಂತದಲ್ಲಿ ತಂಡದ ದಾಖಲೆ ಚರ್ಚೆಗೆ ಕಾರಣವಾಗಿದೆ. ಹಿಂದಿನ ಟಿ20 ಏಷ್ಯಾಕಪ್‌ಗಳಲ್ಲಿ ಸೂಪರ್ 4 ರಲ್ಲಿ ಭಾರತದ ಪ್ರದರ್ಶನ ಅಷ್ಟು ಉತ್ತಮವಾಗಿಲ್ಲ. ಆದರೆ, ಪ್ರಸ್ತುತ ಟೀಂ ಇಂಡಿಯಾದ ಉತ್ತಮ ಫಾರ್ಮ್ ಅಭಿಮಾನಿಗಳಲ್ಲಿ ಆಶಾವಾದ ಮೂಡಿಸಿದೆ.

Asia cup 2025: ಟಿ20 ಏಷ್ಯಾಕಪ್ ಸೂಪರ್ ಸುತ್ತಿನಲ್ಲಿ ಭಾರತ ಗೆದ್ದಿದ್ದಕ್ಕಿಂತ ಸೋತಿದ್ದೇ ಹೆಚ್ಚು?
India Vs Pakistan
ಪೃಥ್ವಿಶಂಕರ
|

Updated on: Sep 20, 2025 | 6:57 PM

Share

2025 ರ ಏಷ್ಯಾಕಪ್‌ನಲ್ಲಿ (Asia Cup 2025) ಭಾರತದ ಅಜೇಯ ಓಟ ಮುಂದುವರೆದಿದೆ. ಗುಂಪು ಹಂತದಲ್ಲಿ ಆಡಿದ ಎಲ್ಲಾ ಮೂರು ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿರುವ ಟೀಂ ಇಂಡಿಯಾ ಈಗ ಸೂಪರ್ 4 ಸುತ್ತಿಗೆ ಭರ್ಜರಿ ತಯಾರಿ ನಡೆಸುತ್ತಿದೆ. ಈ ಸುತ್ತಿನಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ತಂಡಗಳ ನಡುವೆ ಪ್ರಶಸ್ತಿ ಪಂದ್ಯ ನಡೆಯಲಿದೆ. ಆದಾಗ್ಯೂ, ಟಿ20 ಮಾದರಿಯ ಸೂಪರ್ 4 ಹಂತದಲ್ಲಿ ಟೀಂ ಇಂಡಿಯಾದ ದಾಖಲೆಯನ್ನು ನೋಡಿದರೆ, ಅಭಿಮಾನಿಗಳಲ್ಲಿ ಉದ್ವಿಗ್ನತೆ ಹೆಚ್ಚಾಗಲಿದೆ. ಏಕೆಂದರೆ ಟಿ20 ಏಷ್ಯಾಕಪ್‌ನ ಸೂಪರ್ 4 ಸುತ್ತಿನಲ್ಲಿ ಭಾರತದ ದಾಖಲೆ ಗಮನಾರ್ಹವಲ್ಲ. ಈ ಹಿಂದೆ ಎರಡು ಬಾರಿ ನಡೆದಿರುವ ಏಷ್ಯಾಕಪ್ ಸೂಪರ್ 4 ಒಮ್ಮೆ ಮಾತ್ರ ಸೂಪರ್ 4 ಸ್ವರೂಪದಲ್ಲಿ ಪಂದ್ಯಾವಳಿಯನ್ನು ಆಡಲಾಗಿದೆ.

ಸೂಪರ್-4 ಸುತ್ತಿನಲ್ಲಿ ಭಾರತದ ದಾಖಲೆ ಹೇಗಿದೆ?

ಗುಂಪು ಹಂತದಲ್ಲಿ ಭಾರತ ತಂಡ ಯುಎಇ ತಂಡವನ್ನು ಒಂಬತ್ತು ವಿಕೆಟ್‌ಗಳಿಂದ ಮತ್ತು ಪಾಕಿಸ್ತಾನ ತಂಡವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಸೂಪರ್ ಫೋರ್‌ನಲ್ಲಿ ಸ್ಥಾನ ಪಡೆದುಕೊಂಡಿತು . ಸೆಪ್ಟೆಂಬರ್ 19 ರಂದು ಒಮಾನ್ ವಿರುದ್ಧದ ಕೊನೆಯ ಗುಂಪು ಹಂತದ ಪಂದ್ಯವನ್ನು ಟೀಂ ಇಂಡಿಯಾ 21 ರನ್‌ಗಳಿಂದ ಗೆದ್ದುಕೊಂಡಿತು. ಇದೀಗ ಭಾರತ ಸೆಪ್ಟೆಂಬರ್ 21 ರಂದು ತನ್ನ ಮೊದಲ ಸೂಪರ್ ಫೋರ್ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಅದು ಪಾಕಿಸ್ತಾನವನ್ನು ಎದುರಿಸಲಿದೆ.

ಟೀಂ ಇಂಡಿಯಾ ಇದುವರೆಗೆ ಟಿ20 ಏಷ್ಯಾಕಪ್‌ನ ಸೂಪರ್ ಫೋರ್ ಹಂತದಲ್ಲಿ ಮೂರು ಪಂದ್ಯಗಳನ್ನು ಆಡಿದೆ. ಈ ಮೂರು ಪಂದ್ಯಗಳು 2022 ರ ಟಿ20 ಏಷ್ಯಾ ಕಪ್ ಸಮಯದಲ್ಲಿ ನಡೆದಿವೆ. ಈ ಪಂದ್ಯಗಳಲ್ಲಿ ಭಾರತ ತಂಡವು ಕೇವಲ ಒಂದನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಎರಡು ಸೋಲುಗಳೊಂದಿಗೆ ಪಂದ್ಯಾವಳಿಯಿಂದ ಹೊರಬಿದ್ದಿತ್ತು. ಇದರರ್ಥ ಸೂಪರ್ 4 ಸುತ್ತಿನಲ್ಲಿ ಭಾರತದ ದಾಖಲೆ ಅಷ್ಟು ಉತ್ತಮವಾಗಿಲ್ಲ ಎಂಬುದು ತೋರಿಸುತ್ತದೆ. ಆದಾಗ್ಯೂ ಟಿ20 ಮಾದರಿಯಲ್ಲಿ ಟೀಂ ಇಂಡಿಯಾ ಬಲಿಷ್ಠವಾಗಿ ಕಾಣುತ್ತಿದ್ದು, ಗೆಲುವಿನ ಫೇವರೇಟ್ ಎನಿಸಿಕೊಂಡಿದೆ.

Asia cup 2025: ಭಾರತ- ಪಾಕ್ ಸೂಪರ್ 4 ಸುತ್ತಿನ ಪಂದ್ಯಕ್ಕೆ ಮ್ಯಾಚ್ ರೆಫರಿ ನೇಮಕ

ಟೀಂ ಇಂಡಿಯಾದಿಂದ ಅದ್ಭುತ ಪ್ರದರ್ಶನ

2024 ರ ಟಿ 20 ವಿಶ್ವಕಪ್ ಗೆದ್ದ ನಂತರ, ಟೀಂ ಇಂಡಿಯಾ ಆಡಿರುವ 22 ಟಿ20 ಪಂದ್ಯಗಳಲ್ಲಿ 19 ರಲ್ಲಿ ಗೆದ್ದಿದೆ. ಹಾಗೆಯೇ ಕಳೆದ 42 ಟಿ20 ಪಂದ್ಯಗಳಲ್ಲಿ 37 ಪಂದ್ಯಗಳನ್ನು ಗೆದ್ದುಕೊಂಡಿದೆ. ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ , ತಂಡವು ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡಿದ್ದು, ಈ ಬಾರಿ ಪ್ರಶಸ್ತಿಗಾಗಿ ಪ್ರಬಲ ಸ್ಪರ್ಧಿಯಾಗಿದೆ. ಮುಂದಿನ ವರ್ಷದ ಟಿ20 ವಿಶ್ವಕಪ್‌ಗೆ ತಯಾರಿ ನಡೆಸುವಲ್ಲಿ ಭಾರತ ತಂಡಕ್ಕೆ ಈ ಪಂದ್ಯಾವಳಿ ನಿರ್ಣಾಯಕವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ