
ಏಷ್ಯಾಕಪ್ (Asia Cup 2025) ಟೂರ್ನಿಯ 14ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಿದೆ. ದುಬೈನ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಎರಡು ಬದಲಾವಣೆ ಮಾಡಿಕೊಂಡಿದೆ. ಅದರಂತೆ ಒಮಾನ್ ವಿರುದ್ಧದ ಪಂದ್ಯದ ವೇಳೆ ವಿಶ್ರಾಂತಿ ಪಡೆದಿದ್ದ ಜಸ್ಪ್ರೀತ್ ಬುಮ್ರಾ ಹಾಗೂ ವರುಣ್ ಚಕ್ರವರ್ತಿ ಮತ್ತೆ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರ ಆಗಮನದೊಂದಿಗೆ ಆಡುವ ಬಳಗದಿಂದ ಅರ್ಷದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾ ಹೊರಗುಳಿದಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಭಾರತ ಪ್ಲೇಯಿಂಗ್ ಇಲೆವೆನ್: ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.
ಪಾಕಿಸ್ತಾನ್ ಪ್ಲೇಯಿಂಗ್ ಇಲೆವೆನ್: ಸಾಹಿಬ್ಝಾದ ಫರ್ಹಾನ್, ಸೈಮ್ ಅಯೂಬ್, ಫಖರ್ ಝಮಾನ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಸಲ್ಮಾನ್ ಅಲಿ ಅಘಾ (ನಾಯಕ), ಮೊಹಮ್ಮದ್ ನವಾಝ್, ಹುಸೈನ್ ತಲಾತ್, ಶಾಹೀನ್ ಶಾ ಆಫ್ರಿದಿ, ಫಹೀಮ್ ಅಶ್ರಫ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್.
ಇದನ್ನೂ ಓದಿ: Asia Cup 2025: ಫೈನಲ್ಗೇರಲು ಟೀಮ್ ಇಂಡಿಯಾ ಎಷ್ಟು ಪಂದ್ಯ ಗೆಲ್ಲಬೇಕು?
ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.
ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್, ಸುಫಿಯಾನ್ ಮುಖಿಮ್.
Published On - 7:32 pm, Sun, 21 September 25