IND vs SL: ಕೊನೆಯ ಸೂಪರ್ 4 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ

India vs Sri Lanka: Asia Cup Super 4: 2025ರ ಏಷ್ಯಾಕಪ್ ಸೂಪರ್ 4ರಲ್ಲಿ ಭಾರತ ತಂಡ ಶ್ರೀಲಂಕಾವನ್ನು ಎದುರಿಸುತ್ತಿದೆ. ದುಬೈನಲ್ಲಿ ನಡೆಯುವ ಈ ಪಂದ್ಯದಲ್ಲಿ ಭಾರತ ಅಜೇಯ ಓಟ ಮುಂದುವರಿಸಲು ಸಿದ್ಧವಾಗಿದೆ. ಶ್ರೀಲಂಕಾ ಟಾಸ್ ಗೆದ್ದು ಭಾರತವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಭಾರತದ ಆಡುವ 11ರ ಬಳಗದಲ್ಲಿ ಶಿವಂ ದುಬೆ ಮತ್ತು ಬುಮ್ರಾಗೆ ವಿಶ್ರಾಂತಿ ನೀಡಿ ಹರ್ಷಿತ್ ರಾಣಾ ಮತ್ತು ಅರ್ಷದೀಪ್ ಸಿಂಗ್‌ಗೆ ಅವಕಾಶ ನೀಡಲಾಗಿದೆ.

IND vs SL: ಕೊನೆಯ ಸೂಪರ್ 4 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ
India Vs Srilanka

Updated on: Sep 26, 2025 | 7:57 PM

2025 ರ ಏಷ್ಯಾಕಪ್‌ನ (Asia Cup 2025) ಸೂಪರ್ 4 ಸುತ್ತಿನಲ್ಲಿ ಟೀಂ ಇಂಡಿಯಾ ತನ್ನ ಕೊನೆಯ ಪಂದ್ಯವನ್ನು ಆಡಲು ಸಿದ್ಧವಾಗಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ, ಶ್ರೀಲಂಕಾವನ್ನು (India vs Sri Lanka) ಎದುರಿಸುತ್ತಿದೆ. ಉಭಯ ತಂಡಗಳ ನಡುವಿನ ಈ ಪಂದ್ಯವು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಟೀಂ ಇಂಡಿಯಾ ಇದುವರೆಗೆ ಒಂದೇ ಒಂದು ಪಂದ್ಯವನ್ನು ಸೋತಿಲ್ಲ ಮತ್ತು ಸತತ ಆರನೇ ಗೆಲುವಿನತ್ತ ಕಣ್ಣಿಟ್ಟಿದೆ. ಏತನ್ಮಧ್ಯೆ, ಶ್ರೀಲಂಕಾದ ಪ್ರದರ್ಶನ ಕಳಪೆಯಾಗಿದ್ದು, ತಮ್ಮ ಅಭಿಯಾನವನ್ನು ಗೆಲುವಿನೊಂದಿಗೆ ಕೊನೆಗೊಳಿಸಲು ನೋಡುತ್ತಿದೆ.

ಟಾಸ್ ಗೆದ್ದ ಶ್ರೀಲಂಕಾ

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ, ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಈ ಪಂದ್ಯಕ್ಕಾಗಿ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ. ಶಿವಂ ದುಬೆ ಮತ್ತು ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಿದ್ದು, ಹರ್ಷಿತ್ ರಾಣಾ ಮತ್ತು ಅರ್ಷದೀಪ್​ ಸಿಂಗ್​ಗೆ ಅವಕಾಶ ನೀಡಲಾಗಿದೆ. ಈ ಪಂದ್ಯದಲ್ಲಿ ಭಾರತ ಮೂವರು ಸ್ಪಿನ್ನರ್‌ಗಳು ಮತ್ತು ಇಬ್ಬರು ವೇಗದ ಬೌಲರ್‌ಗಳನ್ನು ಕಣಕ್ಕಿಳಿಸಿದೆ. ಏತನ್ಮಧ್ಯೆ, ಶ್ರೀಲಂಕಾ ನಾಯಕ ಚರಿತ್ ಅಸಲಂಕಾ ಅವರು ಚಮಿಕಾ ಕರುಣರತ್ನೆ ಬದಲಿಗೆ ಜನಿತ್ ಲಿಯಾನಗೆ ಅವರನ್ನು ತಂಡಕ್ಕೆ ಸೇರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

Asia cup 2025 IND vs SL Live Score: ಟಾಸ್ ಗೆದ್ದ ಶ್ರೀಲಂಕಾ

ಉಭಯ ತಂಡಗಳು

ಭಾರತ ತಂಡ: ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ.

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಕುಸಲ್ ಪೆರೆರಾ, ಚರಿತ್ ಅಸಲಂಕಾ (ನಾಯಕ), ಕಮಿಂದು ಮೆಂಡಿಸ್, ದಸುನ್ ಶನಕ, ವನಿಂದು ಹಸರಂಗಾ, ಜನಿತ್ ಲಿಯಾನಗೆ, ದುಷ್ಮಂತ ಚಮೀರ, ಮಹೀಶ್ ತೀಕ್ಷಣ, ನುವಾನ್ ತುಷಾರ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:52 pm, Fri, 26 September 25