
2025 ರ ಏಷ್ಯಾಕಪ್ (Asia Cup 2025) ಇದೇ ಸೆಪ್ಟೆಂಬರ್ 9 ರಿಂದ ಯುಎಇಯಲ್ಲಿ ಪ್ರಾರಂಭವಾಗಲಿದೆ. ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣ ಮತ್ತು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಗಳು ಈ ಪಂದ್ಯಾವಳಿಗೆ ಆತಿಥ್ಯ ನೀಡಲು ಸಿದ್ಧವಾಗಿವೆ. ಈ ಪಂದ್ಯಾವಳಿಗೆ ಈಗಾಗಲೇ ಎಲ್ಲಾ ತಂಡಗಳನ್ನು ಘೋಷಿಸಲಾಗಿದ್ದು ವೇಳಾಪಟ್ಟಿಯನ್ನು ಸಹ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಆದಾಗ್ಯೂ, ಪಂದ್ಯಾವಳಿ ಪ್ರಾರಂಭವಾಗುವ ಕೆಲವು ದಿನಗಳ ಮೊದಲು ವೇಳಾಪಟ್ಟಿಯಲ್ಲಿ ಪ್ರಮುಖ ಬದಲಾವಣೆಯನ್ನು ಮಾಡಲಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ (UAE) ಹವಾಮಾನವನ್ನು ಗಮನದಲ್ಲಿಟ್ಟುಕೊಂಡು ಪಂದ್ಯದ ಸಮಯವನ್ನು ಬದಲಾಯಿಸಲಾಗಿದೆ.
ಮಾಧ್ಯಮ ವರದಿಗಳ ಪ್ರಕಾರ, ಏಷ್ಯಾಕಪ್ ಪಂದ್ಯಗಳು ಈಗ ಭಾರತೀಯ ಸಮಯ ರಾತ್ರಿ 8 ಗಂಟೆಗೆ (ಸ್ಥಳೀಯ ಸಮಯ ಸಂಜೆ 6:30) ಪ್ರಾರಂಭವಾಗಲಿವೆ. ಈ ಮೊದಲು ಈ ಪಂದ್ಯಗಳು ಸಂಜೆ 7:30 ಕ್ಕೆ ಪ್ರಾರಂಭವಾಗಬೇಕಿತ್ತು. ಆದರೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿನ ಬಿಸಿಲಿನ ವಾತಾವರಣವನ್ನು ಗಮನದಲ್ಲಿಟ್ಟುಕೊಂಡು ಈ ಬದಲಾವಣೆಯನ್ನು ಮಾಡಲಾಗಿದೆ. ಈ ಬದಲಾವಣೆಯ ಬಗ್ಗೆ ಪ್ರಸಾರಕರ ಬಳಿ ವಿನಂತಿಸಲಾಗಿದ್ದು, ಅವರೂ ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ಯುಎಇಯಲ್ಲಿ ಬಿಸಿಲು ಮತ್ತು ತೇವಾಂಶದ ಮಟ್ಟವು ಕ್ರಿಕೆಟ್ ಪಂದ್ಯಗಳಿಗೆ, ವಿಶೇಷವಾಗಿ ಆಟಗಾರರು ಮತ್ತು ಅಭಿಮಾನಿಗಳಿಗೆ ಸವಾಲಿನದ್ದಾಗಿರುತ್ತದೆ. ಹಗಲಿನಲ್ಲಿ ತಾಪಮಾನವು ತುಂಬಾ ಹೆಚ್ಚಾಗಿರುತ್ತದೆ, ಇದರಿಂದಾಗಿ ಸಂಜೆಯೂ ಸಹ ಒಣ ಹವೆಯ ಪರಿಣಾಮ ಇರುತ್ತದೆ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪಂದ್ಯಗಳ ಆರಂಭದ ಸಮಯವನ್ನು ಅರ್ಧ ಗಂಟೆ ವಿಸ್ತರಿಸಲು ಸಂಘಟಕರು ನಿರ್ಧರಿಸಿದ್ದಾರೆ.
Asia Cup: ಟಿ20 ಏಷ್ಯಾಕಪ್‌ನಲ್ಲಿ ಭಾರತದ ಈ ದಾಖಲೆಯನ್ನು ಯಾವ ತಂಡಕ್ಕೂ ಮುರಿಯಲು ಸಾಧ್ಯವಾಗಿಲ್ಲ
ಈ ಪಂದ್ಯಾವಳಿಯಲ್ಲಿ ಟೀಂ ಇಂಡಿಯಾ ಸೆಪ್ಟೆಂಬರ್ 10 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ತನ್ನ ಮೊದಲ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಲಿದೆ. ನಂತರ ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ಪಾಕಿಸ್ತಾನ ವಿರುದ್ಧ ಆಡಲಿದ್ದು, ಈ ಪಂದ್ಯ ಸೆಪ್ಟೆಂಬರ್ 14 ರಂದು ನಡೆಯಲಿದೆ. ಇದರ ನಂತರ ಸೆಪ್ಟೆಂಬರ್ 19 ರಂದು ಓಮನ್ ವಿರುದ್ಧ ತನ್ನ ಗುಂಪು ಹಂತದ ಕೊನೆಯ ಪಂದ್ಯವನ್ನು ಆಡಲಿದೆ. ಆ ಬಳಿಕ ಸೂಪರ್ -4 ಪಂದ್ಯಗಳು ಸೆಪ್ಟೆಂಬರ್ 20 ರಿಂದ ನಡೆಯಲಿದ್ದು, ಫೈನಲ್ ಪಂದ್ಯ ಸೆಪ್ಟೆಂಬರ್ 28 ರಂದು ನಡೆಯಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:47 pm, Sat, 30 August 25