AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಪಾಕ್ ವಿರುದ್ಧ ಆಡಲು ಟೀಂ ಇಂಡಿಯಾಗೆ ಒತ್ತಡ ಹೇರಿತಾ ಬಿಸಿಸಿಐ? ಸುರೇಶ್ ರೈನಾ ಸ್ಫೋಟಕ ಹೇಳಿಕೆ

India vs Pakistan Asia Cup Match: ಏಷ್ಯಾಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದ ಬಗ್ಗೆ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರು ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಭಾರತೀಯ ಆಟಗಾರರಿಗೆ ಪಾಕಿಸ್ತಾನದ ವಿರುದ್ಧ ಆಡಲು ಇಷ್ಟವಿಲ್ಲ ಎಂದು ಅವರು ಹೇಳಿದ್ದಾರೆ. ಆದಾಗ್ಯೂ ಇದು ಬಹುರಾಷ್ಟ್ರೀಯ ಪಂದ್ಯಾವಳಿಯಾಗಿರುವುದರಿಂದ ಆಟಗಾರರು ಪಂದ್ಯ ಆಡಬೇಕಾಯಿತು ಎಂದು ರೈನಾ ಹೇಳಿದ್ದಾರೆ.

IND vs PAK: ಪಾಕ್ ವಿರುದ್ಧ ಆಡಲು ಟೀಂ ಇಂಡಿಯಾಗೆ ಒತ್ತಡ ಹೇರಿತಾ ಬಿಸಿಸಿಐ? ಸುರೇಶ್ ರೈನಾ ಸ್ಫೋಟಕ ಹೇಳಿಕೆ
Ind Vs Pak
ಪೃಥ್ವಿಶಂಕರ
|

Updated on:Sep 15, 2025 | 3:23 PM

Share

ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಿನ ಏಷ್ಯಾಕಪ್ (Asia Cup 2025) ಪಂದ್ಯ ನಿರೀಕ್ಷಿತ ಪ್ರದರ್ಶನದೊಂದಿಗೆ ಅಂತ್ಯವಾಗಿದೆ. ಆದಾಗ್ಯೂ ಕುತಂತ್ರಿ ಪಾಕಿಸ್ತಾನ ತಂಡದ ವಿರುದ್ಧ ಪಂದ್ಯವನ್ನಾಡಿದ್ದು, ಕೋಟ್ಯಾಂತರ ಭಾರತೀಯರು ಕೆರಳುವಂತೆ ಮಾಡಿದೆ. ವಾಸ್ತವವಾಗಿ ಏಷ್ಯಾಕಪ್ ವೇಳಾಪಟ್ಟಿ ಪ್ರಕಟವಾದಗಲೇ ಟೀಂ ಇಂಡಿಯಾ, ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಬೇಕು ಎಂದು ಭಾರತೀಯರು ಆಗ್ರಹಿಸಿದ್ದರು. ಆದರೆ ಇದು ಬಹುರಾಷ್ಟ್ರೀಯ ಪಂದ್ಯಾವಳಿಯಾಗಿದ್ದ ಕಾರಣ ಟೀಂ ಇಂಡಿಯಾ ಈ ಪಂದ್ಯವನ್ನು ಆಡಲೇಬೇಕಾಯಿತು. ಇದೀಗ ಟೀಂ ಇಂಡಿಯಾದ ಮಾಜಿ ಆಟಗಾರ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದು, ಪಾಕಿಸ್ತಾನದ ವಿರುದ್ಧ ಪಂದ್ಯವನ್ನು ಆಡಲು ಟೀಂ ಇಂಡಿಯಾ ಆಟಗಾರರಿಗೆ ಇಷ್ಟವಿಲ್ಲ ಎಂದಿದ್ದಾರೆ. ರೈನಾ ಅವರ ಹೇಳಿಕೆ ನಿಜವಾದರೆ, ಪಾಕಿಸ್ತಾನದ ವಿರುದ್ಧ ಪಂದ್ಯವನ್ನಾಡಲು ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಒತ್ತಡ ಹೇರಿತೆ ಎಂಬ ಪ್ರಶ್ನೆ ಇಲ್ಲಿ ಉದ್ಭವಿಸಿದೆ.

ಪಂದ್ಯಾವಳಿಯಿಂದ ಹಿಂದೆ ಸರಿದಿತ್ತು

ವಾಸ್ತವವಾಗಿ ಏಷ್ಯಾಕಪ್ ಆರಂಭಕ್ಕೂ ಮುನ್ನ ಕೆಲವೇ ದಿನಗಳ ಹಿಂದೆ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ ಲೀಗ್ ನಡೆದಿತ್ತು. ಆ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಭಾಗವಹಿಸಿತ್ತು. ಆದರೆ ಪಾಕಿಸ್ತಾನ ವಿರುದ್ಧ ಪಂದ್ಯವನ್ನಾಡಲು ನಿರಾಕರಿಸಿ ಭಾರತ ತಂಡ ಪಂದ್ಯಾವಳಿಯಿಂದ ತನ್ನ ಹೆಸರನ್ನು ಹಿಂಪಡೆದುಕೊಂಡಿತ್ತು. ಆ ಸಂದರ್ಭದಲ್ಲಿ ಭಾರತ ತಂಡದ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿತ್ತು. ಅದರಂತೆ ಏಷ್ಯಾಕಪ್​ನಲ್ಲೂ ಟೀಂ ಇಂಡಿಯಾ, ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಬೇಕು ಎಂಬುದು ಭಾರತೀಯರ ಆಗ್ರಹವಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ.

ಪಂದ್ಯಾವಳಿ ಖಾಸಗಿ ಸರಣಿ ಆಗಿತ್ತು

ಇದೀಗ ಈ ಪಂದ್ಯದ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿರುವ ಟೀಂ ಇಂಡಿಯಾದ ಮಾಜಿ ಆಟಗಾರ ಸುರೇಶ್ ರೈನಾ, ಏಷ್ಯಾಕಪ್​ನಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯ ಆಡಲು ಭಾರತ ಸರ್ಕಾರದಿಂದ ಅನುಮೋದನೆ ದೊರೆತಿದೆ. ಆದಾಗ್ಯೂ ಪಾಕಿಸ್ತಾನದೊಂದಿಗೆ ಯಾವುದೇ ದ್ವಿಪಕ್ಷೀಯ ಸರಣಿಯನ್ನು ಆಡಲಾಗುವುದಿಲ್ಲ ಎಂದು ಬಿಸಿಸಿಐ ಕೂಡ ಹೇಳಿದೆ. ಆದರೆ ನಾವು ಆಡಿದ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ ಪಂದ್ಯಾವಳಿ ಖಾಸಗಿ ಸರಣಿ ಆಗಿತ್ತು. ಆ ಸರಣಿ ಬಿಸಿಸಿಐ ಅಡಿಯಲ್ಲಿ ಬರುವುದಿಲ್ಲ. ಈ ಕಾರಣದಿಂದಾಗಿ, ನಾವು ಪಾಕಿಸ್ತಾನದ ವಿರುದ್ಧ ಆಡದಿರುವ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಯಿತು.

IND vs PAK: ಅವರು ನಮ್ಮ ಕೈಕುಲುಕಲಿಲ್ಲ: ಟೀಮ್ ಇಂಡಿಯಾ ವಿರುದ್ಧ ದೂರು ನೀಡಿದ ಪಾಕಿಸ್ತಾನ

ಪಾಕ್ ವಿರುದ್ಧ ಆಡುವುದಕ್ಕೆ ಒಪ್ಪುವುದಿಲ್ಲ

ಇನ್ನು ಏಷ್ಯಾಕಪ್‌ ವಿಚಾರಕ್ಕೆ ಬರುವುದಾದರೆ.. ಭಾರತೀಯ ತಂಡದ ಆಟಗಾರರನ್ನು ಪ್ರತ್ಯೇಕವಾಗಿ ಕೇಳಿದರೆ, ಯಾರೂ ಕೂಡ ಏಷ್ಯಾಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಆಡುವುದಕ್ಕೆ ಒಪ್ಪುವುದಿಲ್ಲ ಎಂದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ಬಿಸಿಸಿಐ ಇದನ್ನು ಅನುಮೋದಿಸಿರುವುದರಿಂದ ಮತ್ತು ಇದು ಎಸಿಸಿ ಟೂರ್ನಮೆಂಟ್ ಕೂಡ ಆಗಿರುವುದರಿಂದ ಇದು ಆಟಗಾರರಿಗೆ ಕಡ್ಡಾಯವಾಗಿದೆ. ಇನ್ನು ವೈಯಕ್ತಿಕವಾಗಿ ಟೀಂ ಇಂಡಿಯಾ ಪಾಕಿಸ್ತಾನದೊಂದಿಗೆ ಆಡಬೇಕಾಗಿ ಬಂದಿರುವುದು ಬೇಸರ ತಂದಿದೆ ಎಂದು ಸುರೇಶ್ ರೈನಾ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Mon, 15 September 25