AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಪಂದ್ಯದ ಪೋಸ್ಟರ್ ಡಿಲೀಟ್; ಪಾಕಿಸ್ತಾನ- ಯುಎಇ ನಡುವಿನ ಪಂದ್ಯ ರದ್ದು?

Pakistan vs UAE Match in Doubt: ಏಷ್ಯಾಕಪ್ 2025ರಲ್ಲಿ ಪಾಕಿಸ್ತಾನ ಮತ್ತು ಯುಎಇ ನಡುವಿನ ಪಂದ್ಯಕ್ಕೂ ಮುನ್ನ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಪಂದ್ಯದ ಟ್ವೀಟ್ ಅನ್ನು ಅಳಿಸಿರುವುದು ದೊಡ್ಡ ಅನುಮಾನಕ್ಕೆ ಕಾರಣವಾಗಿದೆ. ಪಾಕಿಸ್ತಾನ ಭಾರತದ ವಿರುದ್ಧದ ಪಂದ್ಯದ ನಂತರ ಮ್ಯಾಚ್ ರೆಫರಿಯನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ಐಸಿಸಿ ಇದನ್ನು ತಿರಸ್ಕರಿಸಿದ ನಂತರ ಈ ಘಟನೆ ನಡೆದಿದೆ. ಪಂದ್ಯ ರದ್ದಾಗುವ ಸಾಧ್ಯತೆಯಿದೆ ಎಂಬ ಅನುಮಾನ ಹೆಚ್ಚಾಗಿದೆ.

Asia Cup 2025: ಪಂದ್ಯದ ಪೋಸ್ಟರ್ ಡಿಲೀಟ್; ಪಾಕಿಸ್ತಾನ- ಯುಎಇ ನಡುವಿನ ಪಂದ್ಯ ರದ್ದು?
Pakistan Cricket Team
ಪೃಥ್ವಿಶಂಕರ
|

Updated on:Sep 17, 2025 | 6:07 PM

Share

2025 ರ ಏಷ್ಯಾಕಪ್‌ನ (Asia Cup 2025) 10 ನೇ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಯುಎಇ (Pakistan vs UAE) ತಂಡಗಳು ಇಂದು ಮುಖಾಮುಖಿಯಾಗಲಿವೆ . ಆದರೆ ಈ ಪಂದ್ಯಕ್ಕೂ ಮುನ್ನ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಒಂದು ನಡೆ ಕೋಲಾಹಲ ಸೃಷ್ಟಿಸಿದೆ. ವಾಸ್ತವವಾಗಿ ಉಭಯ ತಂಡಗಳ ನಡುವಿನ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ಎಸಿಸಿ (ACC), ಪಾಕಿಸ್ತಾನ ಮತ್ತು ಯುಎಇ ನಡುವಿನ ಪಂದ್ಯದ ಟ್ವಿಟರ್ ಪೋಸ್ಟ್ ಅನ್ನು ಡಿಲೀಟ್ ಮಾಡಿದೆ. ಎಸಿಸಿಯ ನಡೆ ಇದೀಗ ಈ ಪಂದ್ಯ ನಡೆಯುವುದಿಲ್ಲವೇ ಎಂಬ ಅನುಮಾನ ಸೃಷ್ಟಿಸಿದೆ. ಭಾರತ ವಿರುದ್ಧದ ಪಂದ್ಯದ ನಂತರ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಅವರನ್ನು ಮುಂದಿನ ಪಂದ್ಯದಿಂದ ಹೊರಗಿಡದಿದ್ದರೆ ಪಂದ್ಯವನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿತ್ತು. ಆದರೆ ಪಾಕಿಸ್ತಾನದ ಈ ದೂರನ್ನು ಐಸಿಸಿ (ICC) ತಿರಸ್ಕರಿಸಿತ್ತು. ಇದೀಗ ಈ ಪಂದ್ಯದ ಪೋಸ್ಟರ್ ಡಿಲೀಟ್ ಹಲವು ಪ್ರಶ್ನೆಗಳನ್ನು ಹುಟ್ಟಿಹಾಕಿದೆ.

ಪಾಕಿಸ್ತಾನ-ಯುಎಇ ಪಂದ್ಯ ರದ್ದು?

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪಂದ್ಯದ ಪೋಸ್ಟರ್ ಅನ್ನು ಡಿಲೀಟ್ ಮಾಡಿದ್ದು, ಪಾಕಿಸ್ತಾನದ ಬಹಿಷ್ಕಾರದ ಬೆದರಿಕೆಗೆ ಮತ್ತಷ್ಟು ಪುಷ್ಠಿ ನೀಡಿದೆ. ಪಾಕ್ ತಂಡವು ಇನ್ನು ಕೆಲವೇ ನಿಮಿಷಗಳಲ್ಲಿ ಹೋಟೆಲ್‌ನಿಂದ ಮೈದಾನಕ್ಕೆ ಪ್ರಯಾಣ ಬೆಳೆಸಬೇಕಾಗಿದೆ. ಇದೆಲ್ಲದರ ನಡುವೆ ಪೋಸ್ಟರ್ ಡಿಲೀಟ್ ಮಾಡಿರುವುದು ಅನುಮಾನಕ್ಕೆ ಕಾರಣವಾಗಿದೆ. ವಾಸ್ತವವಾಗಿ ಪಾಕಿಸ್ತಾನ ತಂಡ ಬುಧವಾರ ನಿಗದಿಯಾಗಿದ್ದ ಪತ್ರಿಕಾಗೋಷ್ಠಿಯನ್ನು ಸಹ ರದ್ದುಗೊಳಿಸಿತ್ತು. ಆದಾಗ್ಯೂ, ಪಾಕಿಸ್ತಾನ ತಂಡವು ಮಂಗಳವಾರ ಐಸಿಸಿ ಕ್ರಿಕೆಟ್ ಅಕಾಡೆಮಿಯಲ್ಲಿ ತನ್ನ ಅಭ್ಯಾಸವನ್ನು ಮುಂದುವರೆಸಿದ್ದು, ಪಂದ್ಯಾವಳಿಯಲ್ಲಿ ಭಾಗವಹಿಸುವಿಕೆಯ ಸುಳಿವನ್ನು ನೀಡಿತ್ತು.

ಎಸಿಸಿ ಪೋಸ್ಟರ್

ಎಮಿರೇಟ್ಸ್ ಏಷ್ಯಾ ಕಪ್ ಕ್ರಿಕೆಟ್

ಐಸಿಸಿಗೆ ಎರಡನೇ ಪತ್ರ ಬರೆದ ಪಿಸಿಬಿ

ವರದಿಗಳ ಪ್ರಕಾರ, ಪಿಸಿಬಿ ಹಾಗೂ ಐಸಿಸಿ ಮ್ಯಾಚ್ ರೆಫರಿ ನಡುವಿನ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಈ ಸಂಬಂಧ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಗೆ ಎರಡನೇ ಪತ್ರ ಬರೆದಿದೆ. ಪೈಕ್ರಾಫ್ಟ್ ಅವರನ್ನು ತಮ್ಮ ತಂಡದ ಪಂದ್ಯದಿಂದ ತೆಗೆದುಹಾಕಬೇಕೆಂಬುದು ಪಿಸಿಬಿ ದೂರಾಗಿದೆ. ಆದರೆ ಪಿಸಿಬಿ ದೂರಿಗೆ ಐಸಿಸಿ ಯಾವುದೇ ಸೊಪ್ಪು ಹಾಕಿಲ್ಲ. ಇದರಿಂದ ಮತ್ತಷ್ಟು ಕೆರಳಿರುವ ಪಾಕ್ ಮಂಡಳಿ ಪಂದ್ಯವನ್ನು ಬಹಿಷ್ಕರಿಸುವ ತೀರ್ಮಾನ ತೆಗೆದುಕೊಂಡಿದೆಯಾ ಎಂಬ ಅನುಮಾನ ಮೂಡಿದೆ. ಎಲ್ಲಾ ಪ್ರಶ್ನೆಗಳಿಗೂ ಇನ್ನು ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:03 pm, Wed, 17 September 25

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ