AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025 schedule: ಏಷ್ಯಾಕಪ್ ಪೂರ್ಣ ವೇಳಾಪಟ್ಟಿ ಪ್ರಕಟ; ಭಾರತದ ಗುಂಪಿನಲ್ಲಿ ಯಾವ್ಯಾವ ತಂಡಗಳಿವೆ?

Asia Cup 2025 schedule: ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಏಷ್ಯಾಕಪ್ 2025 ರ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 8 ತಂಡಗಳು ಭಾಗವಹಿಸುವ ಈ ಟಿ20 ಟೂರ್ನಿ ಸೆಪ್ಟೆಂಬರ್ 9 ರಿಂದ 28 ರವರೆಗೆ ಯುಎಇಯಲ್ಲಿ ನಡೆಯಲಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ ಸೇರಿದಂತೆ 8 ತಂಡಗಳು ಎರಡು ಗುಂಪುಗಳಾಗಿ ವಿಂಗಡಿಸಲ್ಪಟ್ಟಿವೆ. ಗುಂಪು ಹಂತದ ನಂತರ ಸೂಪರ್-4 ಹಾಗೂ ಫೈನಲ್ ಪಂದ್ಯಗಳು ನಡೆಯಲಿವೆ. ಭಾರತದ ಮೊದಲ ಪಂದ್ಯ ಯುಎಇ ವಿರುದ್ಧ ಸೆಪ್ಟೆಂಬರ್ 10 ರಂದು ನಡೆಯಲಿದೆ.

Asia Cup 2025 schedule: ಏಷ್ಯಾಕಪ್ ಪೂರ್ಣ ವೇಳಾಪಟ್ಟಿ ಪ್ರಕಟ; ಭಾರತದ ಗುಂಪಿನಲ್ಲಿ ಯಾವ್ಯಾವ ತಂಡಗಳಿವೆ?
Asia Cup 2025
ಪೃಥ್ವಿಶಂಕರ
|

Updated on:Jul 26, 2025 | 8:55 PM

Share

ಏಷ್ಯಾಕಪ್ 2025 (Asia Cup 2025) ರ ಸಂಪೂರ್ಣ ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಅಧಿಕೃತವಾಗಿ ಪ್ರಕಟಿಸಿದೆ. 8 ತಂಡಗಳ ನಡುವೆ ನಡೆಯಲ್ಲಿರುವ ಈ ಪಂದ್ಯಾವಳಿ ಸೆಪ್ಟೆಂಬರ್ 9 ರಿಂದ ಪ್ರಾರಂಭವಾಗಲಿದ್ದು, ಫೈನಲ್ ಸೆಪ್ಟೆಂಬರ್ 28 ರಂದು ನಡೆಯಲಿದೆ. ಈ ಸಂಪೂರ್ಣ ಪಂದ್ಯಾವಳಿಯು ಬಿಸಿಸಿಐ (BCCI) ಆತಿಥ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ನಡೆಯಲಿದೆ. ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ದೃಷ್ಟಿಯಿಂದ, ಈ ಬಾರಿ ಏಷ್ಯಾಕಪ್ ಅನ್ನು ಟಿ20 ಸ್ವರೂಪದಲ್ಲಿ ಆಡಲಾಗುತ್ತದೆ. ಹಾಗೆಯೇ ಈ ಪಂದ್ಯಾವಳಿಯಲ್ಲಿ ಫೈನಲ್ ಸೇರಿದಂತೆ ಒಟ್ಟು 18 ಪಂದ್ಯಗಳು ನಡೆಯಲಿವೆ.

ಈ ಬಾರಿ ಒಟ್ಟು 8 ತಂಡಗಳು ಟೂರ್ನಿಯಲ್ಲಿ ಭಾಗವಹಿಸುತ್ತಿದ್ದು, ಅವುಗಳನ್ನು 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಪಾಕಿಸ್ತಾನವನ್ನು ಹೊರತುಪಡಿಸಿ, ಯುಎಇ ಮತ್ತು ಒಮಾನ್ ತಂಡಗಳು ಟೀಂ ಇಂಡಿಯಾ ಜೊತೆಗೆ ಎ ಗುಂಪಿನಲ್ಲಿ ಸೇರಿವೆ. ಬಿ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ತಂಡಗಳಿವೆ. ಪ್ರತಿ ತಂಡವು ತನ್ನ ಗುಂಪಿನ ಇತರ ಮೂರು ತಂಡಗಳನ್ನು ಒಮ್ಮೆ ಎದುರಿಸಲಿದೆ. ನಂತರ ಪ್ರತಿ ಗುಂಪಿನಿಂದ 2 ತಂಡಗಳು ಸೂಪರ್-4 ಸುತ್ತಿಗೆ ಹೋಗುತ್ತವೆ, ಅಲ್ಲಿ ಪ್ರತಿ ತಂಡವು ಇತರ 3 ತಂಡಗಳನ್ನು ತಲಾ ಒಮ್ಮೆ ಎದುರಿಸಲಿದೆ. ಇಲ್ಲಿ ಅಗ್ರ 2 ತಂಡಗಳು ಫೈನಲ್‌ಗೆ ಅರ್ಹತೆ ಪಡೆಯುತ್ತವೆ.

ಟೀಂ ಇಂಡಿಯಾದ ವೇಳಾಪಟ್ಟಿ

ಈ ಪಂದ್ಯಾವಳಿ ಸೆಪ್ಟೆಂಬರ್ 9 ರಂದು ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ನಡುವಿನ ಪಂದ್ಯದೊಂದಿಗೆ ಆರಂಭವಾಗಲಿದೆ. ಟೀಂ ಇಂಡಿಯಾದ ಅಭಿಯಾನ ಸೆಪ್ಟೆಂಬರ್ 10 ರಂದು ಆರಂಭವಾಗಲಿದೆ. ಗ್ರೂಪ್ ಹಂತದಲ್ಲಿ ಟೀಂ ಇಂಡಿಯಾದ ಮೊದಲ ಪಂದ್ಯ ಯುಎಇ ವಿರುದ್ಧ ನಡೆಯಲಿದೆ. ನಂತರ ತನ್ನ ಮುಂದಿನ ಪಂದ್ಯದಲ್ಲಿ ಟೀಂ ಇಂಡಿಯಾ, ಪಾಕಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯ ಸೆಪ್ಟೆಂಬರ್ 14 ರಂದು ನಡೆಯಲಿದೆ. ಭಾರತ ತಂಡವು ಸೆಪ್ಟೆಂಬರ್ 19 ರಂದು ಓಮನ್ ವಿರುದ್ಧ ಗುಂಪು ಹಂತದಲ್ಲಿ ತನ್ನ ಕೊನೆಯ ಪಂದ್ಯವನ್ನು ಆಡಲಿದೆ.

Asia Cup 2025 schedule: ಸೆ. 9 ರಿಂದ ಏಷ್ಯಾಕಪ್ ಆರಂಭ; ಈ ದಿನದಂದು ಭಾರತ- ಪಾಕ್ ನಡುವೆ ಪಂದ್ಯ

ಭಾರತ-ಪಾಕಿಸ್ತಾನ ಮತ್ತೆ ಮುಖಾಮುಖಿ

ನಿರೀಕ್ಷೆಯಂತೆ, ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ. ಅಂತಹ ಪರಿಸ್ಥಿತಿಯಲ್ಲಿ, ಈ ಪಂದ್ಯಾವಳಿಯಲ್ಲಿ ಎರಡರ ನಡುವೆ ಒಟ್ಟು 3 ಘರ್ಷಣೆಗಳು ನಡೆಯಬಹುದು. ಎರಡೂ ತಂಡಗಳು ಮುಂದಿನ ಸುತ್ತನ್ನು ತಲುಪಿದರೆ, ಸೆಪ್ಟೆಂಬರ್ 21 ರ ಭಾನುವಾರದಂದು ಭಾರತ ಮತ್ತು ಪಾಕಿಸ್ತಾನ ಮತ್ತೆ ಪರಸ್ಪರ ಮುಖಾಮುಖಿಯಾಗಲಿವೆ. ಇಲ್ಲಿಂದಲೂ ಎರಡೂ ತಂಡಗಳು ಫೈನಲ್ ತಲುಪುವಲ್ಲಿ ಯಶಸ್ವಿಯಾದರೆ, ಸೆಪ್ಟೆಂಬರ್ 28 ರಂದು ಟ್ರೋಫಿಗಾಗಿ ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:52 pm, Sat, 26 July 25

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ