
ಏಷ್ಯಾಕಪ್ 2025 (Asia Cup 2025) ರ ಸಂಪೂರ್ಣ ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಅಧಿಕೃತವಾಗಿ ಪ್ರಕಟಿಸಿದೆ. 8 ತಂಡಗಳ ನಡುವೆ ನಡೆಯಲ್ಲಿರುವ ಈ ಪಂದ್ಯಾವಳಿ ಸೆಪ್ಟೆಂಬರ್ 9 ರಿಂದ ಪ್ರಾರಂಭವಾಗಲಿದ್ದು, ಫೈನಲ್ ಸೆಪ್ಟೆಂಬರ್ 28 ರಂದು ನಡೆಯಲಿದೆ. ಈ ಸಂಪೂರ್ಣ ಪಂದ್ಯಾವಳಿಯು ಬಿಸಿಸಿಐ (BCCI) ಆತಿಥ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ನಡೆಯಲಿದೆ. ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ದೃಷ್ಟಿಯಿಂದ, ಈ ಬಾರಿ ಏಷ್ಯಾಕಪ್ ಅನ್ನು ಟಿ20 ಸ್ವರೂಪದಲ್ಲಿ ಆಡಲಾಗುತ್ತದೆ. ಹಾಗೆಯೇ ಈ ಪಂದ್ಯಾವಳಿಯಲ್ಲಿ ಫೈನಲ್ ಸೇರಿದಂತೆ ಒಟ್ಟು 18 ಪಂದ್ಯಗಳು ನಡೆಯಲಿವೆ.
ಈ ಬಾರಿ ಒಟ್ಟು 8 ತಂಡಗಳು ಟೂರ್ನಿಯಲ್ಲಿ ಭಾಗವಹಿಸುತ್ತಿದ್ದು, ಅವುಗಳನ್ನು 2 ಗುಂಪುಗಳಾಗಿ ವಿಂಗಡಿಸಲಾಗಿದೆ. ಪಾಕಿಸ್ತಾನವನ್ನು ಹೊರತುಪಡಿಸಿ, ಯುಎಇ ಮತ್ತು ಒಮಾನ್ ತಂಡಗಳು ಟೀಂ ಇಂಡಿಯಾ ಜೊತೆಗೆ ಎ ಗುಂಪಿನಲ್ಲಿ ಸೇರಿವೆ. ಬಿ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ತಂಡಗಳಿವೆ. ಪ್ರತಿ ತಂಡವು ತನ್ನ ಗುಂಪಿನ ಇತರ ಮೂರು ತಂಡಗಳನ್ನು ಒಮ್ಮೆ ಎದುರಿಸಲಿದೆ. ನಂತರ ಪ್ರತಿ ಗುಂಪಿನಿಂದ 2 ತಂಡಗಳು ಸೂಪರ್-4 ಸುತ್ತಿಗೆ ಹೋಗುತ್ತವೆ, ಅಲ್ಲಿ ಪ್ರತಿ ತಂಡವು ಇತರ 3 ತಂಡಗಳನ್ನು ತಲಾ ಒಮ್ಮೆ ಎದುರಿಸಲಿದೆ. ಇಲ್ಲಿ ಅಗ್ರ 2 ತಂಡಗಳು ಫೈನಲ್‌ಗೆ ಅರ್ಹತೆ ಪಡೆಯುತ್ತವೆ.
𝐓𝐡𝐞 𝐛𝐚𝐭𝐭𝐥𝐞 𝐟𝐨𝐫 𝐀𝐬𝐢𝐚𝐧 𝐬𝐮𝐩𝐫𝐞𝐦𝐚𝐜𝐲 𝐢𝐬 𝐛𝐚𝐜𝐤! 🏏
The ACC Men’s T20I Asia Cup kicks off from 9th to 28th September in the UAE! 🤩
Get ready for thrilling matchups as the top 8 teams in Asia face off for continental glory! 👊#ACCMensAsiaCup2025 #ACC pic.twitter.com/JzvV4wuxna
— AsianCricketCouncil (@ACCMedia1) July 26, 2025
ಈ ಪಂದ್ಯಾವಳಿ ಸೆಪ್ಟೆಂಬರ್ 9 ರಂದು ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ನಡುವಿನ ಪಂದ್ಯದೊಂದಿಗೆ ಆರಂಭವಾಗಲಿದೆ. ಟೀಂ ಇಂಡಿಯಾದ ಅಭಿಯಾನ ಸೆಪ್ಟೆಂಬರ್ 10 ರಂದು ಆರಂಭವಾಗಲಿದೆ. ಗ್ರೂಪ್ ಹಂತದಲ್ಲಿ ಟೀಂ ಇಂಡಿಯಾದ ಮೊದಲ ಪಂದ್ಯ ಯುಎಇ ವಿರುದ್ಧ ನಡೆಯಲಿದೆ. ನಂತರ ತನ್ನ ಮುಂದಿನ ಪಂದ್ಯದಲ್ಲಿ ಟೀಂ ಇಂಡಿಯಾ, ಪಾಕಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯ ಸೆಪ್ಟೆಂಬರ್ 14 ರಂದು ನಡೆಯಲಿದೆ. ಭಾರತ ತಂಡವು ಸೆಪ್ಟೆಂಬರ್ 19 ರಂದು ಓಮನ್ ವಿರುದ್ಧ ಗುಂಪು ಹಂತದಲ್ಲಿ ತನ್ನ ಕೊನೆಯ ಪಂದ್ಯವನ್ನು ಆಡಲಿದೆ.
Asia Cup 2025 schedule: ಸೆ. 9 ರಿಂದ ಏಷ್ಯಾಕಪ್ ಆರಂಭ; ಈ ದಿನದಂದು ಭಾರತ- ಪಾಕ್ ನಡುವೆ ಪಂದ್ಯ
ನಿರೀಕ್ಷೆಯಂತೆ, ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ. ಅಂತಹ ಪರಿಸ್ಥಿತಿಯಲ್ಲಿ, ಈ ಪಂದ್ಯಾವಳಿಯಲ್ಲಿ ಎರಡರ ನಡುವೆ ಒಟ್ಟು 3 ಘರ್ಷಣೆಗಳು ನಡೆಯಬಹುದು. ಎರಡೂ ತಂಡಗಳು ಮುಂದಿನ ಸುತ್ತನ್ನು ತಲುಪಿದರೆ, ಸೆಪ್ಟೆಂಬರ್ 21 ರ ಭಾನುವಾರದಂದು ಭಾರತ ಮತ್ತು ಪಾಕಿಸ್ತಾನ ಮತ್ತೆ ಪರಸ್ಪರ ಮುಖಾಮುಖಿಯಾಗಲಿವೆ. ಇಲ್ಲಿಂದಲೂ ಎರಡೂ ತಂಡಗಳು ಫೈನಲ್ ತಲುಪುವಲ್ಲಿ ಯಶಸ್ವಿಯಾದರೆ, ಸೆಪ್ಟೆಂಬರ್ 28 ರಂದು ಟ್ರೋಫಿಗಾಗಿ ಎರಡೂ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:52 pm, Sat, 26 July 25